Homeಮುಖಪುಟ'ಮಲಯಾಳಂ ಚಿತ್ರರಂಗದಲ್ಲಿ ಪವರ್ ಗ್ರೂಪ್ ಇಲ್ಲ..'; ಜಸ್ಟೀಸ್ ಹೇಮಾ ಸಮಿತಿ ವರದಿ ಕುರಿತು ಮೌನ ಮುರಿದ...

‘ಮಲಯಾಳಂ ಚಿತ್ರರಂಗದಲ್ಲಿ ಪವರ್ ಗ್ರೂಪ್ ಇಲ್ಲ..’; ಜಸ್ಟೀಸ್ ಹೇಮಾ ಸಮಿತಿ ವರದಿ ಕುರಿತು ಮೌನ ಮುರಿದ ನಟ ಮಮ್ಮುಟ್ಟಿ

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಿಡುಗಡೆಯಾದ ಒಂದು ವಾರದ ನಂತರ, ಸಹ ನಟ ಮತ್ತು ಅಮ್ಮ ಮಾಜಿ ಅಧ್ಯಕ್ಷ ಮೋಹನ್‌ಲಾಲ್ ಅವರು ಅಂತಿಮವಾಗಿ ಸಮಸ್ಯೆಯನ್ನು ಪರಿಹರಿಸಲು ಪತ್ರಿಕಾಗೋಷ್ಠಿ ನಡೆಸಿದ ಒಂದು ದಿನದ ನಂತರ ನಟ-ನಿರ್ಮಾಪಕ ಮಮ್ಮುಟ್ಟಿ ಅವರು ಮೌನ ಮುರಿದಿದ್ದಾರೆ.

ಈ ಬಗ್ಗೆ ಫೇಸ್‌ಬುಕ್ ಪೋಸ್ಟ್‌ ಮಾಡಿರುವ ಅವರು, “ನಟರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ‘ಅಮ್ಮ’ ನಾಯಕತ್ವಕ್ಕಾಗಿ ಕಾಯುತ್ತಿದ್ದ ಕಾರಣ ಅವರ ಪ್ರತಿಕ್ರಿಯೆಯಲ್ಲಿ ವಿಳಂಬವಾಗಿದೆ ಎಂದು ವಿವರಿಸುವ ವರದಿಯನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ವರದಿಯಲ್ಲಿ ಉಲ್ಲೇಖಿಸಿರುವಂತಹ ಯಾವುದೇ ‘ಪವರ್ ಗ್ರೂಪ್’ ಮಲಯಾಳಂ ಚಿತ್ರರಂಗದಲ್ಲಿ ಅಸ್ತಿತ್ವದಲ್ಲಿಲ್ಲ” ಎಂದು ಮೋಹನ್ ಲಾಲ್ ಶನಿವಾರ ತೆಗೆದುಕೊಂಡ ನಿಲುವನ್ನು ಮಮ್ಮೂಟಿ ಪುನರುಚ್ಚರಿಸಿದರು. “ಚಿತ್ರರಂಗದಲ್ಲಿ ಇಂತಹ ಗುಂಪು ಇರಲು ಸಾಧ್ಯವೇ ಇಲ್ಲ” ಎಂದರು.

“ಸಮಾಜದಲ್ಲಿನ ಎಲ್ಲ ಒಳ್ಳೆಯದು ಮತ್ತು ಕೆಟ್ಟದ್ದು ಸಿನಿಮಾದಲ್ಲೂ ಪ್ರತಿಫಲಿಸುತ್ತದೆ. ಆದರೆ, ಚಲನಚಿತ್ರೋದ್ಯಮವು ಯಾವಾಗಲೂ ಸಾರ್ವಜನಿಕರ ಪರಿಶೀಲನೆಯಲ್ಲಿದೆ ಮತ್ತು ಆದ್ದರಿಂದ ಸಣ್ಣ ವಿಷಯಗಳು ಸಹ ಚರ್ಚೆಯ ಕೇಂದ್ರಬಿಂದುವಾಗುತ್ತವೆ. ಈ ವಲಯದಲ್ಲಿ ಯಾವುದೇ ಅನಪೇಕ್ಷಿತ ಘಟನೆಗಳು ನಡೆಯದಂತೆ ಚಲನಚಿತ್ರ ವೃತ್ತಿಪರರು ಎಚ್ಚರಿಕೆ ವಹಿಸಬೇಕು” ಎಂದು ಹೇಳಿದ್ದಾರೆ.

“ಜಸ್ಟೀಸ್ ಹೇಮಾ ಸಮಿತಿ ವರದಿಯಲ್ಲಿ ಒದಗಿಸಲಾದ ಸೂಚನೆಗಳು ಮತ್ತು ಪರಿಹಾರಗಳನ್ನು ಮನಃಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ. ವರದಿಯ ಸಲಹೆಗಳನ್ನು ಸ್ವಾಗತಿಸಲು, ಅದರ ಅನುಷ್ಠಾನಕ್ಕೆ ಸಹಾಯ ಮಾಡಲು ಚಲನಚಿತ್ರ ಬಂಧುಗಳೆಲ್ಲರೂ ಒಗ್ಗೂಡುವ ಸಮಯ ಇದು” ಎಂದು ಮಮ್ಮುಟ್ಟಿ ಹೇಳಿದ್ದಾರೆ.

“ಆರೋಪಗಳ ತನಿಖೆಯನ್ನು ಪೊಲೀಸರು ಸರಿಯಾಗಿ ನಡೆಸುತ್ತಿದ್ದಾರೆ ಎಂದು ಹೇಳಿರುವ ಅವರು, “ಅಂತಿಮವಾಗಿ, ಸಿನಿಮಾ ಉಳಿಯಬೇಕು” ಎಂದು ತಮ್ಮ ಫೇಸ್‌ಬುಕ್ ಪೋಸ್ಟ್‌ನ ಕೊನೆಯ ಸಾಲಿನಲ್ಲಿ ಬರೆದಿದ್ದಾರೆ.

ಮಲಯಾಳಂ ಚಿತ್ರರಂಗದ ಇಬ್ಬರು ದೊಡ್ಡ ಹೆಸರುಗಳಾದ ಮೋಹನ್‌ಲಾಲ್ ಮತ್ತು ಮಮ್ಮುಟ್ಟಿ ಇಬ್ಬರೂ ಮಲಯಾಳಂ ಚಲನಚಿತ್ರೋದ್ಯಮದ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸದ ಕಾರಣ ಟೀಕೆಗೆ ಒಳಗಾಗಿದ್ದರು. ದೊಡ್ಡ ನಟರು ತಮ್ಮ ಮೌನ ಮುರಿದ ನಂತರವೂ ಅವರ ಯಾವುದೇ ಪ್ರತಿಕ್ರಿಯೆಗಳು ಸಮಸ್ಯೆಯ ತಿರುಳನ್ನು ಮುಟ್ಟಿದಂತಿಲ್ಲ.

ಹೇಮಾ ಸಮಿತಿಯ ವರದಿಯ ಬಿಡುಗಡೆಯು ‘ಮೀಟೂ’ ಆಂದೋಲನದಂತೆಯೇ ಹಲವಾರು ಮಹಿಳೆಯರು ಹೊರಬಂದು ಮಲಯಾಳಂ ಚಿತ್ರರಂಗದ ಹೆಸರಾಂತ ಚಲನಚಿತ್ರ ನಿರ್ಮಾಪಕರು ಮತ್ತು ನಟರ ವಿರುದ್ಧ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪಗಳನ್ನು ಎತ್ತಿದ್ದಾರೆ.

ನಟ ಮತ್ತು ಸಿಪಿಐಎಂ ಶಾಸಕ ಮುಖೇಶ್, ನಟ-ನಿರ್ದೇಶಕ ಮತ್ತು ಕೇರಳ ಚಲನಚಿತ್ರ ಅಕಾಡೆಮಿಯ ಮಾಜಿ ಅಧ್ಯಕ್ಷ ರಂಜಿತ್, ನಟ ಮತ್ತು ಅಮ್ಮಾ ಮಾಜಿ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಮತ್ತು ನಟ ಜಯಸೂರ್ಯ ಸೇರಿದಂತೆ ಪ್ರಮುಖ ನಟರು, ಚಲನಚಿತ್ರ ನಿರ್ಮಾಪಕರ ವಿರುದ್ಧ ಇದುವರೆಗೆ 18 ಪ್ರಕರಣಗಳು ದಾಖಲಾಗಿವೆ.

ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಕುರಿತು ಮಲಯಾಳಂ ನಟ ಮಮ್ಮುಟ್ಟಿ ಮೌನ ಮುರಿದಿದ್ದಾರೆ.
ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಮೌನ ಮುರಿದ ನಟ ಜಯಸೂರ್ಯ, ‘ಸುಳ್ಳು ಯಾವಾಗಲೂ ಸತ್ಯಕ್ಕಿಂತ ವೇಗವಾಗಿ ಚಲಿಸುತ್ತದೆ’ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ಭಾರತದಲ್ಲಿಯೇ ಮೊದಲನೆಯದು. ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಕೆಲಸದ ಪರಿಸ್ಥಿತಿಗಳನ್ನು ಪರಿಶೀಲಿಸಲು 2017 ರಲ್ಲಿ ಪ್ರಮುಖ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ನಂತರ ಕೇರಳ ಸರ್ಕಾರವು ಈ ಸಮಿತಿಯನ್ನು ರಚಿಸಿತು.

30 ವಿವಿಧ ವರ್ಗಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಶೋಷಣೆಯ ಕನಿಷ್ಠ 17 ವಿಭಿನ್ನ ಸ್ವರೂಪಗಳನ್ನು ಸಮಿತಿಯು ಗುರುತಿಸಿದೆ. ಇವುಗಳಲ್ಲಿ ಉದ್ಯಮಕ್ಕೆ ಪ್ರವೇಶಿಸಲು ಬಹಿರಂಗ ಲೈಂಗಿಕ ಬೇಡಿಕೆಗಳು, ಲೈಂಗಿಕ ಕಿರುಕುಳ ಮತ್ತು ವಿವಿಧ ರೀತಿಯ ದೈಹಿಕ ಮತ್ತು ಭಾವನಾತ್ಮಕ ನಿಂದನೆಗಳು ವರದಿಯಲ್ಲಿ ಸೇರಿವೆ.

ಇದನ್ನೂ ಓದಿ; ‘ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ; ಕರ್ತವ್ಯದಲ್ಲಿದ್ದಾಗ ನರ್ಸ್‌ಗೆ ಕಿರುಕುಳ’: ಬಂಗಾಳದಲ್ಲಿ ಉದ್ವಿಗ್ನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...