Homeಕರ್ನಾಟಕಸಿದ್ದಾರ್ಥ ವಿಹಾರ ಟ್ರಸ್ಟ್​​ಗೆ ಸಿಎ ನಿವೇಶನ | ಸರ್ಕಾರದಿಂದ ವಿವರಣೆ ಕೇಳಿದ ರಾಜ್ಯಪಾಲರು

ಸಿದ್ದಾರ್ಥ ವಿಹಾರ ಟ್ರಸ್ಟ್​​ಗೆ ಸಿಎ ನಿವೇಶನ | ಸರ್ಕಾರದಿಂದ ವಿವರಣೆ ಕೇಳಿದ ರಾಜ್ಯಪಾಲರು

- Advertisement -
- Advertisement -

ಸಹೋದರ ರಾಹುಲ್ ಖರ್ಗೆಯವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ. ಸಚಿವ ಪ್ರಿಯಾಂಕ್​ ಖರ್ಗೆ ತಮ್ಮ ಪ್ರಭಾವ ಬಳಸಿ ನಿವೇಶನ ಮಂಜೂರು ಮಾಡಿಸಿದ್ದಾರೆ” ಎಂದು ಆರೋಪಿಸಿ ವಿಧಾನಪರಿಷತ್​ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು.

ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಯಿಂದ ವಿವರಣೆ ಕೇಳಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನ” ಎಂದು ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

“ಬಿವೈ ವಿಜಯೇಂದ್ರ, ಆರ್​.ಅಶೋಕ್ ಅವರು ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ನಾನು ಕೆಳಮನೆ ಸದಸ್ಯ ಅಲ್ವಾ? ಹಾಗಾದರೆ ಏಕೆ ಮಾತನಾಡುತ್ತಿಲ್ಲ. ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್​​ಎಸ್​​ಎಸ್, ಬಿಜೆಪಿ ಸಂಚು” ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿ : ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...