Homeಮುಖಪುಟಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

ಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

- Advertisement -
- Advertisement -

ಕದನ ವಿರಾಮಕ್ಕೆ ಆಗ್ರಹಿಸಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಇಸ್ರೇಲ್‌ನಲ್ಲಿ ಬೃಹತ್ ಜನಾಂದೋಲನ ಶುರುವಾಗಿದೆ.

ಕಳೆದ ಭಾನುವಾರ ರಾಜಧಾನಿ ಟೆಲ್‌ ಅವೀವ್, ಜೆರುಸಲೇಂ ಮತ್ತು ಸಿಸೇರಿಯಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಕೆಲ ಸಂಘಟನೆಗಳು ದೇಶದಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿವೆ.

ಗಾಝಾದಲ್ಲಿ ಹಮಾಸ್‌ನಿಂದ ಒತ್ತೆಯಾಳುಗಳಾಗಿದ್ದ ಆರು ಜನರ ಮೃತದೇಹವನ್ನು ಇಸ್ರೇಲ್‌ ಸೇನೆ ಇತ್ತೀಚೆಗೆ ಪತ್ತೆ ಹಚ್ಚಿತ್ತು. ಆ ಬಳಿಕ ನೆತನ್ಯಾಹು ಸರ್ಕಾರದ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಗಾಝಾ ಮೇಲೆ ನೆತನ್ಯಾಹು ಸರ್ಕಾರ ಆಕ್ರಮಣ ನಡೆಸುತ್ತಿರುವುದರಿಂದ ಹಮಾಸ್‌ ಒತ್ತೆಯಾಳುಗಳನ್ನು ಕೊಲ್ಲುತ್ತಿದೆ ಎಂಬುವುದು ಜನರ ಆರೋಪವಾಗಿದೆ.

ಭಾನುವಾರ ಸಿಸೇರಿಯಾದಲ್ಲಿರುವ ನೆತನ್ಯಾಹು ಅವರ ಖಾಸಗಿ ನಿವಾಸದ ಬಳಿ ಜಮಾಯಿಸಿದ ಜನರು “ನೀವು ನಾಯಕ, ನೀವೇ ತಪ್ಪಿತಸ್ಥರು” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಯುಎಸ್ ರಾಯಭಾರ ಕಚೇರಿ ಬಳಿಯೂ ಸೇರಿದ ಜನರು “ಶೇಮ್ ಶೇಮ್” ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

‘ಹಿಸ್ಟಾಡ್ರಟ್’ ಎಂಬ ಇಸ್ರೇಲ್‌ನ ಅತೀ ದೊಡ್ಡ ಕಾರ್ಮಿಕ ಸಂಘಟನೆ ಸೋಮವಾರ ದೇಶದಾದ್ಯಂತ ವ್ಯಾಪಾರ-ವಹಿವಾಟು ಸ್ಥಗಿತಕ್ಕೆ ಕರೆ ನೀಡಿತ್ತು. ಇದರ ಪರಿಣಾಮ ಟೆಲ್ ಅವೀವ್‌ನ ಬೆನ್ ಗುರಿಯನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಇನ್ನೂ 100ಕ್ಕೂ ಅಧಿಕ ಇಸ್ರೇಲಿಗರನ್ನು ಗಾಝಾದಲ್ಲಿ ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ. ಈ ಪೈಕಿ 35 ಜನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಮುಂದಿನ ಅಕ್ಟೋಬರ್‌ 7ಕ್ಕೆ ಇಸ್ರೇಲ್ -ಹಮಾಸ್ ಸಂಘರ್ಷ ಪ್ರಾರಂಭಗೊಂಡು ಒಂದು ವರ್ಷವಾಗಲಿದೆ. ಇಸ್ರೇಲ್‌ ದಾಳಿಯಿಂದ ಗಾಝಾದಲ್ಲಿ ಇದುವರೆಗೆ ಮೃತಪಟ್ಟ ನಾಗರಿಕ ಸಂಖ್ಯೆ 40,000 ದಾಟಿದೆ.

“ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ನಾವು ಸಿದ್ದ” ಎಂದಿರುವ ಹಮಾಸ್, ಕದನ ವಿರಾಮ, ಇಸ್ರೇಲ್‌ ಪಡೆಗಳು ಗಾಝಾ ಬಿಟ್ಟು ತೆರಳುವುದು, ಗಾಝಾದ ಸಶಸ್ತ್ರ ಗುಂಪುಗಳ ಉನ್ನತ ಸದಸ್ಯರನ್ನು ಒಳಗೊಂಡಂತೆ ಬಂಧನದಲ್ಲಿರುವ ಪ್ಯಾಲೇಸ್ತೀನಿಯರ ಬಿಡುಗಡೆ ಇತ್ಯಾದಿ ಷರತ್ತುಗಳನ್ನು ಮುಂದಿಟ್ಟಿದೆ.

ಕದನ ವಿರಾಮಕ್ಕೆ ಒತ್ತಾಯಿಸುವ ಅನೇಕ ನಿರ್ಣಯಗಳನ್ನು ವಿಶ್ವಸಂಸ್ಥೆ ಈಗಾಗಲೇ ಅಂಗೀಕರಿಸಿದೆ. ಅನೇಕ ರಾಷ್ಟ್ರಗಳು ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿವೆ. ಆದರೆ, ಅವುಗಳನ್ನು ಪರಿಗಣಿಸದ ಇಸ್ರೇಲ್‌, ಗಾಝಾದಲ್ಲಿ ಆಕ್ರಮಣ ಮುಂದುವರೆಸಿದೆ. ಯಾರ ಮಾತೂ ಕೇಳದ ಇಸ್ರೇಲ್‌ ಸರ್ಕಾರದ ವಿರುದ್ದ ಅಲ್ಲಿನ ಜನರೇ ದಂಗೆಯೆದ್ದಿದ್ದಾರೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಕುಂದುಕೊರತೆ ಇತ್ಯರ್ಥಕ್ಕೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...