Homeಮುಖಪುಟಅಸ್ಸಾಂ| 28 ಮುಸ್ಲಿಮರು ವಿದೇಶಿಯರೆಂದು ಘೋಷಣೆ : ಬಂಧನ ಕೇಂದ್ರಕ್ಕೆ ಸ್ಥಳಾಂತರ

ಅಸ್ಸಾಂ| 28 ಮುಸ್ಲಿಮರು ವಿದೇಶಿಯರೆಂದು ಘೋಷಣೆ : ಬಂಧನ ಕೇಂದ್ರಕ್ಕೆ ಸ್ಥಳಾಂತರ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ ‘ವಿದೇಶಿಯರು’ ಎಂದು ಘೋಷಿಸಿರುವ ಹಿನ್ನೆಲೆ ಅಸ್ಸಾಂನ ಬಾರ್ಪೇಟಾ ಜಿಲ್ಲೆಯ ಪೊಲೀಸರು 28 ಜನರನ್ನು (ಮುಸ್ಲಿಮರು) ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ (ಬಂಧನ ಕೇಂದ್ರ)ಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಲಯದ ಆದೇಶ ಅನುಸಾರ ಸೋಮವಾರ 19 ಪುರುಷರು ಮತ್ತು 9 ಮಹಿಳೆಯರನ್ನು ಟ್ರಾನ್ಸಿಟ್ ಕ್ಯಾಂಪ್‌ಗೆ ಕಳುಹಿಸಲಾಗಿದೆ ಎಂದು ಬಾರ್ಪೇಟಾ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಟ್ರಾನ್ಸಿಟ್ ಕ್ಯಾಂಪ್‌ಗೆ ಕಳುಹಿಸಲ್ಪಟ್ಟ ಎಲ್ಲರೂ ‘ಬಂಗಾಳಿ ಮಾತನಾಡುವ ಮುಸ್ಲಿಮರಾಗಿದ್ದು’, ಕಾನೂನು ಪ್ರಕ್ರಿಯೆ ಬಳಿಕ ವಿದೇಶಿಯರೆಂದು ಘೋಷಿಸಲಾಗಿದೆ. ಅವರೆಲ್ಲ ಜಿಲ್ಲೆಯ ವಿವಿಧೆಡೆ ನೆಲೆಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಪೊಲೀಸರು ಎಲ್ಲಾ 28 ಜನರನ್ನು ಎಸ್‌ಪಿ ಕಚೇರಿಗೆ ಕರೆದಿದ್ದರು. ಅಲ್ಲಿಗೆ ಬಂದ ಅವರನ್ನು ಬಿಗಿ ಭದ್ರತೆಯ ನಡುವೆ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಗಿದೆ. ಈ ವೇಳೆ ಅವರ ಕುಟುಂಬಸ್ಥರು ಮತ್ತು ಸಂಬಂಧಿಕರು ಎಸ್‌ಪಿ ಕಚೇರಿ ಬಳಿ ಜಮಾಯಿಸಿದ್ದರು. ಎಲ್ಲರನ್ನು ತಬ್ಬಿಕೊಂಡು ಅಳುತ್ತಾ ಕಳುಹಿಸಿಕೊಟ್ಟರು ಎಂದು ವರದಿಗಳು ಹೇಳಿವೆ.

ವಿದೇಶಿಯರ ನ್ಯಾಯಮಂಡಳಿಗಳು ಶಂಕಿತ ವಿದೇಶಿಯರ ಪ್ರಕರಣಗಳನ್ನು ವ್ಯವಹರಿಸುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಅಸ್ಸಾಂನಲ್ಲಿ ಅಂತಹ 100ಕ್ಕೂ ಹೆಚ್ಚು ನ್ಯಾಯಮಂಡಳಿಗಳು ಇವೆ.

ಮಾಟಿಯಾದಲ್ಲಿ 64 ಕೋಟಿ ರೂಪಾಯಿ ವೆಚ್ಚದಲ್ಲಿ ‘ಟ್ರಾನ್ಸಿಟ್ ಕ್ಯಾಂಪ್‌’ ಸ್ಥಾಪಿಸಲಾಗಿದೆ. ಆರಂಭದಲ್ಲಿ ಅದನ್ನು ‘ಬಂಧನ ಕೇಂದ್ರ’ ಎನ್ನಲಾಗುತ್ತಿತ್ತು. ಆದರೆ, ಹೆಚ್ಚು ಮಾನವೀಯ ಸ್ಪರ್ಶ ನೀಡಲು ‘ಟ್ರಾನ್ಸಿಟ್ ಕ್ಯಾಂಪ್‌’ ಎಂದು ಮರುನಾಮಕರಣ ಮಾಡಲಾಗಿದೆ. ಮಾಟಿಯಾ ಕ್ಯಾಂಪ್‌ 3,000 ಜನರಿಗೆ ವಸತಿ ಒದಗಿಸುವ ಸಾಮರ್ಥ್ಯ ಹೊಂದಿದೆ.

ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯ ಮಾಟಿಯಾದಲ್ಲಿರುವ ಟ್ರಾನ್ಸಿಟ್ ಕ್ಯಾಂಪ್‌ ದೇಶದಲ್ಲೇ ದೊಡ್ಡದು. ಪ್ರಸ್ತುತ ಅಲ್ಲಿ 210 ‘ಘೋಷಿತ ವಿದೇಶಿಗರು’ ಇದ್ದಾರೆ ಎಂದು ಅಸ್ಸಾಂ ಗೃಹ ಇಲಾಖೆ ಈ ಹಿಂದೆ ವಿಧಾನಸಭೆಗೆ ಮಾಹಿತಿ ನೀಡಿತ್ತು.

ಇದನ್ನೂ ಓದಿ : ಹಿಂಸಾತ್ಮಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಸ್ವಘೋಷಿತ ಗೋರಕ್ಷಕ ರಾಕಿ ರಾಣಾ : ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...