Homeಮುಖಪುಟಅತ್ಯಾಚಾರ ಅಪರಾದಿ ರಾಮ್ ರಹೀಮ್‌ಗೆ 6 ಬಾರಿ ಪೆರೋಲ್ ನೀಡಿದ್ದ ಜೈಲು ಅಧಿಕಾರಿಗೆ ಬಿಜೆಪಿ ಟಿಕೆಟ್!

ಅತ್ಯಾಚಾರ ಅಪರಾದಿ ರಾಮ್ ರಹೀಮ್‌ಗೆ 6 ಬಾರಿ ಪೆರೋಲ್ ನೀಡಿದ್ದ ಜೈಲು ಅಧಿಕಾರಿಗೆ ಬಿಜೆಪಿ ಟಿಕೆಟ್!

- Advertisement -
- Advertisement -

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಮತ್ತು ಅತ್ಯಾಚಾರ ಆರೋಪಿ ರಾಮ್ ರಹೀಮ್‌ಗೆ ಆರು ಬಾರಿ ಪೆರೋಲ್ ನೀಡಿದ್ದ ಮಾಜಿ ಜೈಲು ಅಧಿಕಾರಿ ಸುನಿಲ್ ಸಾಂಗ್ವಾನ್ ಅವರನ್ನು ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಜೆಪಿ ಹೆಸರಿಸಿದೆ. ಅವರು ಹಾಲಿ ಶಾಸಕ ಸಾಂಗ್ವಾನ್ ದಾದ್ರಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಮಾಜಿ ಬಿಜೆಪಿ ನಾಯಕ ಸೋಮವೀರ್ ಸಾಂಗ್ವಾನ್ 2019 ರಲ್ಲಿ ಸ್ವತಂತ್ರವಾಗಿ ಗೆದ್ದಿದ್ದಾರೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಯ ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿಯಾಗಿ ಕೆಳಗಿಳಿದ ನಂತರದ ಸಮಯದಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ ಮೂವರು ಸ್ವತಂತ್ರ ಶಾಸಕರಲ್ಲಿ ಸೋಮವೀರ್ ಸಾಂಗ್ವಾನ್ ಒಬ್ಬರು. ದಾದ್ರಿ ಟಿಕೆಟ್ ಸಿಗುವ ಷರತ್ತಿನ ಮೇಲೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಸುನಿಲ್ ಸಾಂಗ್ವಾನ್ ಅವರು ರಾಮ್ ರಹೀಮ್ ಅವರಿಗೆ ಆರು ಬಾರಿ ಪೆರೋಲ್ ನೀಡಿದ್ದರು; ಇತ್ತೀಚೆಗೆ ರಾಜೀನಾಮೆ ನೀಡಿದ ಜೈಲು ಅಧಿಕಾರಿಯಾಗಿರುವ ಅವರುಮ 67 ಅಭ್ಯರ್ಥಿಗಳ ಪಕ್ಷದ ಮೊದಲ ಪಟ್ಟಿಯಲ್ಲಿದ್ದಾರೆ.

ರಾಮ್ ರಹೀಮ್‌ಗೆ ಕಳೆದ ತಿಂಗಳು 21 ದಿನಗಳ ಪೆರೋಲ್ ನೀಡಲಾಯಿತು; ಅದು ಕಳೆದ ನಾಲ್ಕು ವರ್ಷಗಳಲ್ಲಿ ಅವರ 10ನೇಯ ಜೈಲು ರಜೆಯಾಗಿದೆ.

ರಾಜಕೀಯ ವೀಕ್ಷಕರಿಗೆ ಮತ್ತು ಆಡಳಿತಾರೂಢ ಬಿಜೆಪಿಯ ಟೀಕಾಕಾರರಿಗೆ ಈ ನಡೆ ಆಶ್ಚರ್ಯ ತಂದಿಲ್ಲ. ಏಕೆಂದರೆ, ರಾಮ್ ರಹೀಮ್ ಅವರ ತಾತ್ಕಾಲಿಕ ಬಿಡುಗಡೆಗಳು ದಿನಗಳು ಹೆಚ್ಚಾಗಿ ರಾಜ್ಯ ಅಥವಾ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಕೆಲವು ದಿನಗಳ ಮೊದಲು ಬಂದಿವೆ.

ಡೇರಾ ಮುಖ್ಯಸ್ಥರಾ ರಾಮ್ ರಹೀಮ್ ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ವಾರಗಳ ಮೊದಲು ಜನವರಿಯಲ್ಲಿ 50 ದಿನಗಳ ಪೆರೋಲ್ ಪಡೆದಿದ್ದರು. ರಾಜಸ್ಥಾನ ಚುನಾವಣೆಗೆ ಕೆಲವು ದಿನಗಳ ಮೊದಲು ನವೆಂಬರ್‌ನಲ್ಲಿ ಮೂರು ವಾರಗಳ ಕಾಲ ಅವರನ್ನು ಬಿಡುಗಡೆ ಮಾಡಲಾಯಿತು.

2022 ರಲ್ಲಿ, ಅವರು ಮೂರು ಬಾರಿ ಜೈಲಿನಿಂದ ಹೊರಬಂದರು. ಪಂಜಾಬ್ ಚುನಾವಣೆಯ ಸಮಯದಲ್ಲಿ ಫೆಬ್ರವರಿಯಲ್ಲಿ 21 ದಿನಗಳು, ಜೂನ್‌ನಲ್ಲಿ ಹರಿಯಾಣ ನಾಗರಿಕ ಸಂಸ್ಥೆ ಚುನಾವಣೆಗಳು ನಡೆಯುತ್ತಿದ್ದಾಗ ಮತ್ತು ನಂತರ ಅಕ್ಟೋಬರ್‌ನಲ್ಲಿ ಹರಿಯಾಣ ಉಪಚುನಾವಣೆಯಲ್ಲಿ 40 ದಿನಗಳವರೆಗೆ ರಜೆ ಪಡೆದಿದ್ದರು.

ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ 20 ವರ್ಷಗಳ ಶಿಕ್ಷೆಯನ್ನು ಅನುಭವಿಸಬೇಕಾಗಿದ್ದು, ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿ ಇರಿಸಲಾಗಿದೆ.

ಮುಂದಿನ ತಿಂಗಳು ನಡೆಯಲಿರುವ ಹರ್ಯಾಣ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಿಂದಿ ಹೃದಯಭಾಗದ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಲು ನೋಡುತ್ತಿದೆ. ಆದರೆ, ಈ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪ್ರಬಲ ಪ್ರದರ್ಶನವನ್ನು ಗಮನಿಸಿದರೆ ಫಲಿತಾಂಶವು ಖಚಿತವಾಗಿಲ್ಲ.

ಇಂಡಿಯಾ ಬ್ಲಾಕ್ ಜನಾದೇಶದ ಭಾಗವಾಗಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಹರಿಯಾಣದ 10 ಲೋಕಸಭಾ ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯನ್ನು ಸೋಲಿಸಲು ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕರೆ ನೀಡಿದ ನಂತರ ಎರಡು ವಿರೋಧ ಪಕ್ಷಗಳು ರಾಜ್ಯ ಚುನಾವಣೆಗೂ ಒಪ್ಪಂದ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ; ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದಲ್ಲಿ 13 ನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...