Homeಮುಖಪುಟಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

ಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

- Advertisement -
- Advertisement -

ಮಹಾರಾಷ್ಟ್ರದ ಆಹೇರಿ ತಾಲೂಕಿನ ಯುವ ದಂಪತಿಗಳು ತೀವ್ರ ಜ್ವರದಿಂದ ಮೃತಪಟ್ಟಿದ್ದ ತಮ್ಮ ಇಬ್ಬರು ಪುತ್ರರ ಮೃತದೇಹಗಳನ್ನು ಹೆಗಲ ಮೇಲೆ ಹೊತ್ತೊಯ್ದಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಕಾರಣ ಜ್ವರದಿಂದ ಬಾಲಕರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್‌ ನೀಡಲು ನಿರಾಕರಿಸಿದ್ದರಿಂದ ಆಸ್ಪತ್ರೆಯಿಂದ 15 ಕಿಮೀ ದೂರದಲ್ಲಿರುವ ಗಡ್ಚಿರೋಲಿಯಲ್ಲಿರುವ ತಮ್ಮ ಗ್ರಾಮದ ಮನೆಗೆ ಕಾಲ್ನಡಿಗೆಯಲ್ಲೆ ಸಾಗಿದ್ದಾರೆ.

ಅಪರಿಚಿತ ದಂಪತಿಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕರ ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಕೆಸರುಮಯವಾದ ಕಾಡಿನ ಹಾದಿಯಲ್ಲಿ ಸಾಗುತ್ತಿರುವ ದೃಶ್ಯವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಅವರು ಹಂಚಿಕೊಂಡಿದ್ದಾರೆ.

“ಇಬ್ಬರು ಒಡಹುಟ್ಟಿದವರು ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರಿಗೆ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಒಂದೆರಡು ಗಂಟೆಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತು ಮತ್ತು ಮುಂದಿನ ಒಂದು ಗಂಟೆಯಲ್ಲಿ ಇಬ್ಬರು ಹುಡುಗರು ಸಾವನ್ನಪ್ಪಿದರು” ಎಂದು ವಡೆಟ್ಟಿವಾರ್ ಅವರು ದುರಂತದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

“ಇಬ್ಬರು ಅಪ್ರಾಪ್ತರ ಮೃತದೇಹಗಳನ್ನು ಅವರ ಗ್ರಾಮವಾದ ಪಟ್ಟಿಗಾಂವ್‌ಗೆ ವರ್ಗಾಯಿಸಲು ಸಹ ಆಂಬ್ಯುಲೆನ್ಸ್ ಇರಲಿಲ್ಲ ಮತ್ತು ಪೋಷಕರು ಮಳೆಯಿಂದ ತೋಯ್ದ ಕೆಸರು ಹಾದಿಯಲ್ಲಿ 15 ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಯಿತು. ಗಡ್ಚಿರೋಲಿಯ ಆರೋಗ್ಯ ವ್ಯವಸ್ಥೆಯ ಕಠೋರ ವಾಸ್ತವ ಇಂದು ಮತ್ತೆ ಮುನ್ನೆಲೆಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮಹಾಯುತಿ ಮಿತ್ರಪಕ್ಷಗಳಾದ ಭಾರತೀಯ ಜನತಾ ಪಕ್ಷದ ಫಡ್ನವೀಸ್ ಅವರು ಗಡ್ಚಿರೋಲಿಯ ಉಸ್ತುವಾರಿ ಸಚಿವರಾಗಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಧರ್ಮರಾವ್ ಬಾಬಾ ಅತ್ರಮ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಎಫ್‌ಡಿಎ ಸಚಿವರಾಗಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕ ತಿಳಿಸಿದರು.

“ಇಬ್ಬರೂ ಮಹಾರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪ್ರತಿದಿನ ರಾಜ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂದು ಹೇಳಿಕೊಳ್ಳುತ್ತಾರೆ. ಅವರು ನೆಲಮಟ್ಟಕ್ಕೆ ಇಳಿದು ಗಡ್ಚಿರೋಲಿಯಲ್ಲಿ ಜನರು ಹೇಗೆ ವಾಸಿಸುತ್ತಿದ್ದಾರೆ ಮತ್ತು ಅಲ್ಲಿನ ಸಾವಿನ ಸಂಖ್ಯೆಯನ್ನು ನೋಡಬೇಕು” ಎಂದು ವಡೆಟ್ಟಿವಾರ್ ಹೇಳಿದರು.

ಈ ವಾರ ವಿದರ್ಭ ಪ್ರದೇಶದಿಂದ ಈ ರೀತಿಯ ಎರಡನೇ ನಿದರ್ಶನವನ್ನು ಕಾಂಗ್ರೆಸ್ ಹೈಲೈಟ್ ಮಾಡಿದೆ. ಸೆಪ್ಟೆಂಬರ್ 1 ರಂದು, ಗರ್ಭಿಣಿ ಬುಡಕಟ್ಟು ಮಹಿಳೆ ತನ್ನ ಮನೆಯಲ್ಲಿಯೇ ಸತ್ತ ಮಗುವಿಗೆ ಜನ್ಮ ನೀಡಿದ್ದಳು ಮತ್ತು ನಂತರ ಸ್ಥಳೀಯ ಆಸ್ಪತ್ರೆಯು ಸಮಯಕ್ಕೆ ಆಂಬ್ಯುಲೆನ್ಸ್ ಕಳುಹಿಸಲು ವಿಫಲವಾದ ನಂತರ ಹೆರಿಗೆ ನೋವಿನಿಂದ ಸಾವನ್ನಪ್ಪಿದಳು.

ಅಮರಾವತಿಯ ಮೆಲ್ಘಾಟ್ ಬುಡಕಟ್ಟು ಪ್ರದೇಶದ ದಹೆಂಡ್ರಿ ಗ್ರಾಮದ ಕವಿತಾ ಎ. ಸಕೋಲ್ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರ ಕುಟುಂಬವು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಆಂಬ್ಯುಲೆನ್ಸ್ ಅನ್ನು ಕರೆದರು. ಆದರೆ ಕನಿಷ್ಠ ನಾಲ್ಕು ಗಂಟೆಗಳು ತೆಗೆದುಕೊಳ್ಳಬಹುದು ಎಂದು ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.

ಬೇರೆ ದಾರಿಯಿಲ್ಲದೆ ಕವಿತಾ ಮನೆಯಲ್ಲೇ ಹೆರಿಗೆ ಮಾಡಿಸಿದ್ದು, ಮಗು ಜನಿಸಿತ್ತು. ಆಕೆಯ ಸ್ಥಿತಿಯೂ ಹದಗೆಟ್ಟಿತು, ಆಕೆಯ ಸಂಬಂಧಿಕರು ಆತಂಕಗೊಂಡರು. ಮನೆಯವರು ಸ್ಥಳೀಯ ಖಾಸಗಿ ವಾಹನವನ್ನು ವ್ಯವಸ್ಥೆ ಮಾಡಿ ಚುರಾಣಿಯ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಆಕೆ ಸ್ಥಿತಿ ಕ್ಷೀಣಿಸುತ್ತಲೇ ಇತ್ತು. ಅಕೆಯನ್ನು ಅಚಲಪುರಕ್ಕೆ ಮತ್ತು ನಂತರ ಅಮರಾವತಿಗೆ ವರ್ಗಾಯಿಸಿ ಚಿಕಿತ್ಸೆ ಕೊಡಿಸಿದ್ದರು.

“ಭಾನುವಾರ ಬೆಳಿಗ್ಗೆ ತಾಯಿ ಮತ್ತು ಶಿಶು ಇಬ್ಬರ ಜೀವನ್ ಹೋರಾಟ ಕೊನೆಗೊಂಡಿತು. ಅಸಮರ್ಪಕ ಆರೋಗ್ಯ ಮೂಲಸೌಕರ್ಯದಿಂದ ಇಬ್ಬರೂ ಜೀವಗಳನ್ನು ಕಳೆದುಕೊಂಡರು. ತಿಂಗಳಿಗೆ ₹ 1500 ಪಾವತಿಸಿ ಮತ ಕೇಳುತ್ತಿರುವ ಸರ್ಕಾರ. ‘ಲಡ್ಕಿ ಬಹಿನ್’ ಯೋಜನೆ, ಮೆಗಾ ಪ್ರಚಾರದ ಬ್ಲಿಟ್ಜ್ ಹಣವನ್ನು ಇಲ್ಲಿ ಆಂಬ್ಯುಲೆನ್ಸ್‌ಗಳಿಗಾಗಿ ಖರ್ಚು ಮಾಡಬಹುದಿತ್ತು” ಎಂದು ವಡೆಟ್ಟಿವಾರ್ ಹೇಳಿದರು.

ಎರಡೂ ಘಟನೆಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಆದರೂ ಆಡಳಿತ ಪಕ್ಷದಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಗೆ ವಿಶೇಷ ಪೀಠ ರಚನೆ; ಕೇರಳ ಹೈಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...