Homeಮುಖಪುಟಉತ್ತರ ಪ್ರದೇಶ: ಶಾಲೆಗೆ ಮಾಂಸಾಹಾರ ತಂದಿದ್ದಕ್ಕೆ ಏಳು ವರ್ಷದ ವಿದ್ಯಾರ್ಥಿ ಅಮಾನತು

ಉತ್ತರ ಪ್ರದೇಶ: ಶಾಲೆಗೆ ಮಾಂಸಾಹಾರ ತಂದಿದ್ದಕ್ಕೆ ಏಳು ವರ್ಷದ ವಿದ್ಯಾರ್ಥಿ ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು, ತನ್ನ ಡಬ್ಬಿಯಲ್ಲಿ ಮಾಂಸಾಹಾರಿ ಊಟ ತಂದ ಆರೋಪದ ಮೇಲೆ ನರ್ಸರಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಪ್ರಾಂಶುಪಾಲರು ಮತ್ತು ಮಗುವಿನ ತಾಯಿ ನಡುವೆ ತೀವ್ರ ವಾಗ್ವಾದದ ವಿಡಿಯೋ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ವಿಡಿಯೋವನ್ನು ಪೋಷಕರೊಬ್ಬರು ಚಿತ್ರೀಕರಿಸಿದ್ದಾರೆ ಎಂದು ವರದಿಯಾಗಿದೆ.

“ನಮ್ಮ ದೇವಸ್ಥಾನಗಳನ್ನು ಕೆಡವಿ ಶಾಲೆಗೆ ಮಾಂಸಾಹಾರ ತರಿಸುವ ಇಂತಹ ನೈತಿಕತೆಯನ್ನು ಮಕ್ಕಳಿಗೆ ಕಲಿಸಲು ನಾವು ಬಯಸುವುದಿಲ್ಲ” ಎಂದು ಪ್ರಾಂಶುಪಾಲರು ಮಗುವಿನ ತಾಯಿಗೆ ಹೇಳಿದರು. ವಿದ್ಯಾರ್ಥಿಯು ಸಹ ವಿದ್ಯಾರ್ಥಿಗಳಿಗೆ ಮಾಂಸಾಹಾರಿ ಆಹಾರವನ್ನು ತಿನ್ನಿಸಿ, ಅವರನ್ನು ಇಸ್ಲಾಂಗೆ ಪರಿವರ್ತಿಸುವ ಬಗ್ಗೆ ಮಾತನಾಡಿದ್ದಾನೆ ಎಂದು ಪ್ರಾಂಶುಪಾಲರು ಆರೋಪಿಸಿದ್ದಾರೆ.

ಮಗುವಿನ ತಾಯಿ ಪ್ರಾಂಶುಪಾಲರ ಆರೋಪಗಳನ್ನು ತಳ್ಳಿಹಾಕಿದ್ದಾರೆ. ತನ್ನ ಏಳು ವರ್ಷದ ಮಗನಿಗೆ ಅಂತಹ ವಿಷಯಗಳನ್ನು ಗ್ರಹಿಸಲು ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಈ ವಿಚಾರಗಳನ್ನು ಮಗು ಮನೆಯಲ್ಲಿ ಕಲಿಯುತ್ತದೆ” ಎಂದು ಪ್ರಾಂಶುಪಾಲರು ಪ್ರತಿಕ್ರಿಯಿಸಿದ್ದಾರೆ.

ಇತರ ವಿದ್ಯಾರ್ಥಿಗಳ ಪೋಷಕರು ಆತಂಕ ವ್ಯಕ್ತಪಡಿಸಿದ್ದರಿಂದ ಶಾಲೆಯ ರಿಜಿಸ್ಟರ್‌ನಿಂದ ವಿದ್ಯಾರ್ಥಿಯ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಪ್ರಾಂಶುಪಾಲರು ಹೇಳಿದರು.

ಶಾಲೆಯಲ್ಲಿ ವಿದ್ಯಾರ್ಥಿಗಳು ಹಿಂದೂ-ಮುಸ್ಲಿಂ ವಿಷಯಗಳ ಬಗ್ಗೆ ಜಗಳವಾಡುತ್ತಾರೆ ಮತ್ತು ಅದೇ ತರಗತಿಯ ಇನ್ನೊಬ್ಬ ವಿದ್ಯಾರ್ಥಿಯು ತನ್ನ ಮಗುವಿನ ಮೇಲೆ ಆಗಾಗ್ಗೆ ಹಲ್ಲೆ, ತೊಂದರೆ ನೀಡುತ್ತಿದ್ದಾನೆ ಎಂದು ತಾಯಿ ಆರೋಪಿಸಿದ್ದಾರೆ.

ಈ ನಡುವೆ, ಸುಮಾರು ಏಳು ನಿಮಿಷಗಳ ಕಾಲ ವ್ಯಾಪಕವಾಗಿ ವೈರಲ್ ಆಗಿರುವ ವೀಡಿಯೊಗೆ ಪ್ರತಿಕ್ರಿಯೆಯಾಗಿ, ಅಮ್ರೋಹಾ ಪೊಲೀಸರು, ಜಿಲ್ಲಾ ಶಾಲೆಗಳ ಇನ್ಸ್‌ಪೆಕ್ಟರ್ (ಡಿಐಎಸ್) ಕ್ರಮ ಕೈಗೊಂಡಿದ್ದಾರೆ ಮತ್ತು ತನಿಖೆ ಮತ್ತು ಮುಂದಿನ ಕ್ರಮ ತೆಗೆದುಕೊಳ್ಳಲು ಮೂರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ; ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ಡಿಎನ್‌ಎ ಹೊಂದಾಣಿಕೆ, ಅಂತಿಮ ಹಂತದಲ್ಲಿ ಸಿಬಿಐ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...