Homeಕರ್ನಾಟಕಲೈಂಗಿಕ ದೌರ್ಜನ್ಯ ಆರೋಪ : ಮಹಿಳಾ ಕಲಾವಿದರ ಸಭೆ ಕರೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಲೈಂಗಿಕ ದೌರ್ಜನ್ಯ ಆರೋಪ : ಮಹಿಳಾ ಕಲಾವಿದರ ಸಭೆ ಕರೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಸೆಪ್ಟೆಂಬರ್ 16 ರಂದು ಮಹಿಳಾ ಕಲಾವಿದರೊಂದಿಗೆ ಸಭೆ ನಡೆಸಲಿದೆ.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ಪತ್ರ ಬರೆದಿರುವ ಹಿನ್ನೆಲೆ, ಕೆಎಫ್‌ಸಿಸಿ ಸಭೆ ಕರೆದಿದೆ ಎಂದು ವರದಿಗಳು ಹೇಳಿವೆ.

ನಾಗಲಕ್ಷ್ಮಿ ಚೌಧರಿ ಅವರು ತಮ್ಮ ಪತ್ರದಲ್ಲಿ ಕೇರಳದ ಹೇಮಾ ಸಮಿತಿ ವರದಿಯನ್ನು ಉಲ್ಲೇಖಿಸಿದ್ದು, ಲೈಂಗಿಕ ದೌರ್ಜನ್ಯ, ಕಿರುಕುಳ, ಬೆದರಿಕೆಗಳು ಮತ್ತು ಮಾನಸಿಕ ಹಿಂಸೆ ಸೇರಿದಂತೆ ಕೇರಳ ಚಲನಚಿತ್ರೋದ್ಯಮದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಹಲವು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿರುವುದರಿಂದ ಕಲಾವಿದರು ಸಭೆ ಹಾಜಾರಾಗುವ ಸಾಧ್ಯತೆಯ ಬಗ್ಗೆ ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 16ರ ತಾತ್ಕಾಲಿಕ ದಿನಾಂಕವನ್ನು ಸಭೆಗೆ ನಿಗದಿಪಡಿಸಲಾಗಿದೆ. ಸೋಮವಾರ (ಸೆ. 9) ಸಭೆಯ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ” ಎಂದು ಸುರೇಶ್ ಹೇಳಿದ್ದಾರೆ.

ಲೈಂಗಿಕ ಹಿಂಸೆ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ‘ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ’ (FIRE)ಈಗಾಗಲೇ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಆರಂಭದಲ್ಲಿ FIRE ಮುಖ್ಯಮಂತ್ರಿಗೆ ಪತ್ರ ಬರೆದಿತ್ತು. ಅದಕ್ಕೆ ಸಿನಿಮಾ ಕಲಾವಿದರು, ಸಾಹಿತಿಗಳು, ಪತ್ರಕರ್ತರು ಮತ್ತು ಹೋರಾಟಗಾರರು ಸೇರಿದಂತೆ 153 ಮಂದಿ ಸಹಿ ಹಾಕಿದ್ದರು. ಬಳಿಕ FIRE ವತಿಯಿಂದ ನಟ, ನಟಿಯರು ಸಿಎಂ ಭೇಟಿಯಾಗಿ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ. ನಟಿ ಸಂಜನಾ ಗಲ್ರಾನಿ ಅವರು ಪ್ರತ್ಯೇಖವಾಗಿ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

“ಚಿತ್ರರಂಗದ ಹಲವು ವಿಷಯಗಳಲ್ಲಿ ಮೌನ ವಹಿಸಿರುವ ಇತಿಹಾಸ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಕಲಾವಿದರ ಸಂಘಕ್ಕೆ ಇದೆ. ಈ ಹಿಂದೆ ಗೀತರಚನೆಕಾರ ಮತ್ತು ಸಂಗೀತ ಸಂಯೋಜಕ ಹಂಸಲೇಖ ಅವರನ್ನು ಗುರಿಯಾಗಿಸಿ ಅಕ್ಷರ, ಭಾಷಣ ದಾಳಿಯಾದಾಗ ಈ ಸಮಿತಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತನ್ನ ಕಲಾವಿದರನ್ನು ಬೆಂಬಲಿಸುವ ಕಾರ್ಯವನ್ನೂ ಮಾಡಿಲ್ಲ ಎಂದು” ದಿ ನ್ಯೂಸ್ ಮಿನಿಟ್ ಸುದ್ದಿ ಸಂಸ್ಥೆ ತನ್ನ ವರದಿಯಲ್ಲಿ ಟೀಕಿಸಿದೆ.

ಕೊಲೆ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ನಟ ದರ್ಶನ್ ತನ್ನ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ ಆರೋಪ 2011ರಲ್ಲಿ ಕೇಳಿ ಬಂದಿತ್ತು. ಈ ವಿಚಾರದಲ್ಲಿ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ನಡುವೆ ರಾಜಿ ಪಂಚಾಯಿತಿ ಮಾಡಲು ಆಗ ದಿವಗಂತ ನಟ ಅಂಬರೀಶ್ ಮಧ್ಯಸ್ಥಿಕೆ ವಹಿಸಿದ್ದರು. ಇದರ ಫಲವಾಗಿ ವಿಜಯಲಕ್ಷ್ಮಿ ರಾಜಿಗೆ ಒಪ್ಪಿಕೊಂಡರೂ ಒಂದು ಷರತ್ತು ವಿಧಿಸಿದ್ದರು. ತನ್ನ ವೈವಾಹಿಕ ಜೀವನಲ್ಲಿ ಮಧ್ಯ ಪ್ರವೇಶಿಸಿದ ಆರೋಪದ ಮೇಲೆ ನಟಿ ನಿಕಿತಾ ತುಕ್ರಾಲ್ ಅವರನ್ನು ಕನ್ನಡ ಚಲನಚಿತ್ರೋದ್ಯಮದಿಂದ ನಿಷೇಧಿಸಬೇಕೆಂದು ಅವರು ಒತ್ತಾಯಿಸಿದ್ದರು. ಅದಕ್ಕೆ ಒಪ್ಪಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ, ನಿಕಿತಾ ಅವರನ್ನು ಮೂರು ವರ್ಷಗಳ ಕಾಲ ನಿಷೇಧಿಸಿತ್ತು.

ಮತ್ತೊಂದು ಘಟನೆಯಲ್ಲಿ , 2015 ರಲ್ಲಿ ತಮ್ಮ ‘ವಿಸ್ಮಯ’ ಚಿತ್ರದ ಚಿತ್ರೀಕರಣ ವೇಳೆ ನಟ ಅರ್ಜುನ್ ಸರ್ಜಾ ಅವರು ಕಿರುಕುಳ ನೀಡಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಆ ಬಳಿಕ ಅವರಿಗೆ ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಯಿತು ಎಂದು ಸ್ವತಃ ಶ್ರುತಿ ಹರಿಹರನ್ ಹೇಳಿಕೊಂಡಿದ್ದರು. ಶ್ರುತಿ ಅವರ ಆರೋಪ ಸಂಬಂಧ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವ ಬದಲು ಫಿಲ್ಮ್ ಚೇಂಬರ್ ಇಬ್ಬರ ನಡುವೆ ‘ರಾಜಿ’ ಮಾಡಲು ಪ್ರಯತ್ನಿಸಿತ್ತು. ಆದರೆ, ಶ್ರುತಿ ತನ್ನ ಆರೋಪಗಳನ್ನು ಹಿಂಪಡೆಯಲು ನಿರಾಕರಿಸಿದ್ದರು. ಬಳಿಕ ಅರ್ಜುನ್ ಸರ್ಜಾ ಅವರು ಶ್ರುತಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ : ಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...