Homeಮುಖಪುಟಬಿಜೆಪಿಯಿಂದ ಒತ್ತಡ | ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಕೈಬಿಟ್ಟ ಆರ್‌ಎಲ್‌ಡಿ

ಬಿಜೆಪಿಯಿಂದ ಒತ್ತಡ | ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಕೈಬಿಟ್ಟ ಆರ್‌ಎಲ್‌ಡಿ

- Advertisement -
- Advertisement -

ಬಿಜೆಪಿಯ ಒತ್ತಡಕ್ಕೆ ಮಣಿದ ಮಿತ್ರಪಕ್ಷ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ತನ್ನ ಬೇಡಿಕೆಯಿಂದ ಹಿಂದೆ ಸರಿದಿದೆ ಎಂದು ವರದಿಗಳು ಹೇಳಿವೆ.

ಈ ಬೆಳವಣಿಗೆ ಹಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಎನ್‍ಡಿಎ ಮಿತ್ರಪಕ್ಷಗಳ ಮೇಲೆ ಬಿಜೆಪಿ ಹೊಂದಿರುವ ಹಿಡಿತವನ್ನು ಸ್ಪಷ್ಟಪಡಿಸುತ್ತದೆ.

ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕನಿಷ್ಠ ಎರಡು ಸ್ಥಾನಗಳನ್ನು ಬಿಟ್ಟು ಕೊಡುವಂತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸೇರುವ ಸಂದರ್ಭದಲ್ಲೇ ಆರ್‌ಎಲ್‌ಡಿ ಬೇಡಿಕೆ ಮುಂದಿಟ್ಟಿತ್ತು ಎಂದು ಪಕ್ಷದ ಮೂಲಗಳು ಹೇಳಿವೆ.

ರೈತರು ಹಾಗೂ ಪಶ್ಚಿಮ ಉತ್ತರ ಪ್ರದೇಶದ ಜಾಟ್ ಸಮುದಾಯದ ಸುತ್ತ ಕೇಂದ್ರಿತವಾಗಿರುವ ಆರ್‌ ಎಲ್‌ಡಿ ಪಕ್ಷದ ರಾಜಕೀಯವು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕ ಸಮುದಾಯ ಮತ್ತು ಜಾಟ್ ಸಮುದಾಯವನ್ನು ಹೊಂದಿರುವ ಹರಿಯಾಣಕ್ಕೆ ಪ್ರವೇಶಿಸುವ ಉದ್ದೇಶ ಹೊಂದಿತ್ತು ಎನ್ನಲಾಗಿದೆ.

ಉತ್ತರ ಪ್ರದೇಶದ ಮೀರ್‍ಪುರ ಕ್ಷೇತ್ರದಿಂದ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಇಂಗಿತವನ್ನು ಆರ್‌ಎಲ್‌ಡಿ ವ್ಯಕ್ತಪಡಿಸಿತ್ತು. ಹಾಲಿ ಶಾಸಕ ಚಂದನ್ ಚೌಹಾಣ್, ಬಿಜ್ನೂರ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಹಿನ್ನೆಲೆ, ಇಲ್ಲಿ ಉಪಚುನಾವಣೆ ನಡೆಯುತ್ತಿದೆ.

2019ರ ಚುನಾವಣೆಯಲ್ಲಿ 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಗೆದ್ದಿತ್ತು ಮತ್ತು ಶೇಖಡ 36.49ರಷ್ಟು ಮತ ಪಡೆದಿತ್ತು. ಪ್ರಮುಖ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವೇ ಸ್ಪರ್ಧಿಸಲು ಸಣ್ಣ ಮಿತ್ರ ಪಕ್ಷಗಳು ಸಹಕಾರ ನೀಡಬೇಕು ಎನ್ನುವ ನಿಲುವನ್ನು ಬಿಜೆಪಿ ಹೊಂದಿದೆ.

ಗಮನಾರ್ಹ ಅಂಶವೆಂದರೆ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಜೊತೆಗಿನ ಮೈತ್ರಿ ವೇಳೆ ಆರ್‌ ಎಲ್‌ಡಿ ಪಕ್ಷ ಬಿಜೆಪಿ ಸಂಸದ ಹಾಗೂ ರಾಷ್ಟ್ರೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‍ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿದ್ದ ಹೋರಾಟಕ್ಕೆ ಬಹಿರಂಗ ಬೆಂಬಲ ಘೋಷಿಸಿತ್ತು. ಹರಿಯಾಣದ ಬದಲು ಜಮ್ಮು ಮತ್ತು ಕಾಶ್ಮೀರದ 10 ಸ್ಥಾನಗಳಿಗೆ ಸ್ಪರ್ಧಿಸಲು ಆಲ್‌ಎಲ್‌ಡಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ವಿನೇಶಾ ಒಲಿಂಪಿಕ್ ಸೋಲಿನ ಬಗ್ಗೆ ಬ್ರಿಜ್ ಭೂಷಣ್ ಸಂತೋಷಪಡುತ್ತಾರೆ: ಬಜರಂಗ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...