Homeಮುಖಪುಟಯುಪಿ ಪೊಲೀಸರಿಂದ 'ಯಾದವ ವ್ಯಕ್ತಿ'ಯ ಎನ್‌ಕೌಂಟರ್ : "ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ" ಎಂದ ಅಖಿಲೇಶ್ ಯಾದವ್

ಯುಪಿ ಪೊಲೀಸರಿಂದ ‘ಯಾದವ ವ್ಯಕ್ತಿ’ಯ ಎನ್‌ಕೌಂಟರ್ : “ಜಾತಿಯ ಕಾರಣಕ್ಕೆ ಕೊಲ್ಲಲಾಗಿದೆ” ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ಯಾದವ ಸಮುದಾಯದ ಯುವಕನ ಕುಟುಂಬವು, ಪೊಲೀಸರು ಆತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದೆ

ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮನೆಯಿಂದ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟ ಎರಡು ದಿನಗಳ ನಂತರ, ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕುಟುಂಬ ದೂರಿದೆ.

ಸೆಪ್ಟೆಂಬರ್ 5ರಂದು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ನಡೆಸಿದ ಮಂಗೇಶ್ ಯಾದವ್ ಎನ್‌ಕೌಂಟರ್‌ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ಇದನ್ನು ‘ನಕಲಿ ಎನ್‌ಕೌಂಟರ್’ ಎಂದು ಟೀಕಿಸಿವೆ.

ಡಕಾಯಿತಿ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಬಲ ಜಾತಿಗಳು ಮತ್ತು ಇತರ ಸಮುದಾಯಗಳ ಆರೋಪಿಗಳ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಮಂಗೇಶ್ ಅನ್ನು ಮಾತ್ರ ಆತನ ಜಾತಿಯ ಕಾರಣಕ್ಕೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಯಾದವರು ಉತ್ತರ ಪ್ರದೇಶದ ಅತಿ ದೊಡ್ಡ ಇತರೆ ಹಿಂದುಳಿದ ವರ್ಗಗಳ ಸಮುದಾಯವಾಗಿದೆ ಮತ್ತು ಸಮಾಜವಾದಿ ಪಕ್ಷದ ರಾಜಕೀಯದ ತಳಹದಿ ಎಂದು ಪರಿಗಣಿಸಲಾಗಿದೆ.

“ಪೊಲೀಸರು ನನ್ನ ಮಗನನ್ನು ಕರೆದುಕೊಂಡು ಹೋಗಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಕಸ್ಟಡಿಯಲ್ಲೇ ಅವರು ಹತ್ಯೆ ಮಾಡಿದ್ದಾರೆ” ಎಂದು ಮಂಗೇಶ್ ಅವರ ತಾಯಿ ಶೀಲಾ ದೇವಿ ಸ್ಥಳೀಯ ಜೌನ್‌ಪುರದ ಬಕ್ಷಾ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಂಗೇಶ್ ಅನ್ನು ಬಂಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ನಂತರ ಆತನನ್ನು’ಎನ್‌ಕೌಂಟರ್‌’ನಲ್ಲಿ ಕೊಲ್ಲಲಾಯಿತು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಸಮಾಜವಾದಿ ಪಕ್ಷವನ್ನು ಬೆಂಬಲಿಸುತ್ತಿರುವ ಯಾದವ ಸಮುದಾಯವನ್ನು ಉತ್ತರ ಪ್ರದೇಶ ಪೊಲೀಸರು ಗುರಿಯಾಗಿಸಿಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮಂಗೇಶ್ ಅವರ ‘ಎನ್ಕೌಂಟರ್’ ನಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಸೇರಿದಂತೆ ಎಲ್ಲಾ 11 ಪೊಲೀಸ್ ಸಿಬ್ಬಂದಿ ಪ್ರಬಲ ಜಾತಿ ಗುಂಪುಗಳಿಗೆ, ವಿಶೇಷವಾಗಿ ಠಾಕೂರ್ ಮತ್ತು ಬ್ರಾಹ್ಮಣ ಜಾತಿಗೆ ಸೇರಿದವರು ಎಂದು ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಸೆಳೆದಿದ್ದಾರೆ.

ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಾರ್ಯಾಚರಣೆಯ ನೇತೃತ್ವವನ್ನು ಪೊಲೀಸ್ ಉಪ ಅಧೀಕ್ಷಕ ಧರ್ಮೇಶ್ ಕುಮಾರ್ ಶಾಹಿ ವಹಿಸಿದ್ದರು. ಅವರ ಪತ್ನಿ ರಿತು ಶಾಹಿ ಗೋರಖ್‌ಪುರದ ಬಿಜೆಪಿ ಪದಾಧಿಕಾರಿಯಾಗಿದ್ದು, ಸೆಪ್ಟೆಂಬರ್ 3 ಮಂಗಳವಾರ ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

‘ಎನ್‌ಕೌಂಟರ್’ ನಲ್ಲಿ ಭಾಗವಹಿಸಿದ್ದ ಡಿಎಸ್‌ಪಿ ಶಾಹಿ ಅವರು ಮಂಗೇಶ್ ಅವರ ಮೃತ ಶರೀರದ ಪಕ್ಕ ಸ್ಲೈಡ್-ಇನ್ ಚಪ್ಪಲಿ ಧರಿಸಿದ್ದರು. ಅದು ಅವರು ಮುಂದೆ ಬ್ಲಡ್‌ ಪೂಲ್‌ಗೆ ಇಳಿಯಲು ಸಿದ್ದರಾಗಿದ್ದ ರೀತಿ ತೋರಿಸುತ್ತಿತ್ತು ಎಂದು ಎಸ್‌ಪಿ ಲೋಹಿಯಾ ವಾಹಿನಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಯಾದವ್ ಎಕ್ಸ್‌ನಲ್ಲಿ ವ್ಯಂಗ್ಯವಾಗಿ ಹೇಳಿದ್ದಾರೆ.

ಮಂಗೇಶ್ ಅವರ ಹತ್ಯೆಯ ನಂತರ ಎಸ್‌ಟಿಎಫ್ ತಂಡದ ಗುಂಪು ಛಾಯಾಚಿತ್ರವನ್ನು ಯುಪಿ ಪೊಲೀಸರು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಅಖಿಲೇಶ್ ಯಾದವ್ ಅವರು ಮಂಗೇಶ್ ಅವರ ‘ಎನ್ಕೌಂಟರ್ ಅನ್ನು ನಕಲಿ ಎಂದು ಕರೆದಿದ್ದು, ರಾಜ್ಯ ಪೊಲೀಸರ ಸಂಪೂರ್ಣ ಕಾರ್ಯಾಚರಣೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.

“ಆಡಳಿತ ಪಕ್ಷವು ಸುಲ್ತಾನ್‌ಪುರ ಡಕಾಯಿತಿಯಲ್ಲಿ ಭಾಗಿಯಾಗಿರುವವರೊಂದಿಗೆ ಆಳವಾದ ಸಂಬಂಧ ಹೊಂದಿರುವಂತೆ ತೋರುತ್ತಿದೆ. ಅದಕ್ಕಾಗಿಯೇ, ನಕಲಿ ಎನ್‌ಕೌಂಟರ್‌ಗೆ ಮೊದಲು, ಅವರು ‘ಮುಖ್ಯ ಆರೋಪಿ’ಯನ್ನು ಸಂಪರ್ಕಿಸಿದ್ದಾರೆ. ಅಲ್ಲದೆ, ಇತರರ ಕಾಲಿಗೆ ಗುಂಡು ಹಾರಿಸುವಾಗ ಶರಣಾಗುಂತೆ ಹೇಳಿದ್ದಾರೆ. ಆದರೆ, ಒಬ್ಬರನ್ನು(ಮಂಗೇಶ್ ಯಾದವ್) ಮಾತ್ರ ಅವರ ಜಾತಿಯ ಕಾರಣಕ್ಕೆ ಕೊಲೆ ಮಾಡಿದ್ದಾರೆ” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ವಾಗ್ದಾಳಿ ನಡೆಸಿರುವ ಅಖಿಲೇಶ್ ಯಾವದ್ ” ನಕಲಿ ಎನ್‌ಕೌಂಟರ್‌ಗಳು ರಕ್ಷಕನನ್ನು ಪರಭಕ್ಷಕನನ್ನಾಗಿ ಮಾಡುತ್ತದೆ. ನಿಜವಾದ ಪರಿಹಾರ ನಕಲಿ ಎನ್‌ಕೌಂಟರ್‌ಗಳಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದಾಗಿದೆ ಎಂದು ಹೇಳಿದ್ದಾರೆ.

ಮಂಗೇಶ್ ಹತ್ಯೆಯ ನಂತರ ಡಿಎಸ್ಪಿ ಶಾಹಿ ದಾಖಲಿಸಿರುವ ಎಫ್ಐಆರ್ ಪ್ರಕಾರ, ಸೆಪ್ಟೆಂಬರ್ 5 ರಂದು ಮುಂಜಾನೆ 3:15ಕ್ಕೆ ‘ಎನ್‌ಕೌಂಟರ್ ನಡೆದಿದೆ. ಎಸ್‌ಟಿಎಫ್‌ ತಂಡದಲ್ಲಿ ಡಿಎಸ್ಪಿಗಳಾದ ಶಾಹಿ ಮತ್ತು ವಿಮಲ್ ಕುಮಾರ್ ಸಿಂಗ್, ಇನ್‌ಸ್ಪೆಕ್ಟರ್‌ಗಳಾದ ರಾಘವೇಂದ್ರ ಸಿಂಗ್ ಮತ್ತು ಮಹಾವೀರ್ ಸಿಂಗ್, ಸಬ್ ಇನ್‌ಸ್ಪೆಕ್ಟರ್‌ಗಳಾದ ಅತುಲ್ ಚತುರ್ವೇದಿ ಮತ್ತು ಪ್ರದೀಪ್ ಸಿಂಗ್, ಹೆಡ್ ಕಾನ್‌ಸ್ಟೆಬಲ್‌ಗಳಾದ ನೀರಜ್ ಪಾಂಡೆ, ಸುಶೀಲ್ ಸಿಂಗ್ ಮತ್ತು ರಾಮ್ ನಿವಾಸ್ ಶುಕ್ಲಾ ಕಾನ್‌ಸ್ಟೆಬಲ್‌ಗಳಾದ ಅಮಿತ್ ತ್ರಿಪಾಠಿ ಮತ್ತು ಅಮರ್ ಶ್ರೀವಾಸ್ತವ ಇದ್ದರು.

ಸೆಪ್ಟೆಂಬರ್ 5 ಗುರುವಾರ ಮುಂಜಾನೆ ಹಲವು ಅಪರಾಧ ಆರೋಪಗಳನ್ನು ಹೊತ್ತಿದ್ದ ಮಂಗೇಶ್ ಯಾದವ್ ಅವರನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಪೊಲೀಸರ ಪ್ರಕಾರ, ಆಗಸ್ಟ್ ಅಂತ್ಯದಲ್ಲಿ ಸುಲ್ತಾನ್‌ಪುರದ ಆಭರಣ ಮಳಿಗೆಯಲ್ಲಿ 1.5 ಕೋಟಿ ರೂಪಾಯಿಯ ದರೋಡೆ ನಡೆದಿತ್ತು. ಅದರಲ್ಲಿ ಮಂಗೇಶ್ ಭಾಗಿಯಾಗಿದ್ದ ಎನ್ನಲಾಗಿದೆ. ಆತನ ತಲೆಯ ಪೊಲೀಸರು 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ : ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...