Homeಮುಖಪುಟರಾಜಸ್ಥಾನ | ವಾಟ್ಸಾಪ್ ಗ್ರೂಪ್‌ನಿಂದ ಗಣೇಶ ಚತುರ್ಥಿ ಮೆಸೇಜ್‌ಗಳನ್ನು ಅಳಿಸಿದ ಆರೋಪ : ಶಾಲೆಯ ಪ್ರಾಂಶುಪಾಲನ...

ರಾಜಸ್ಥಾನ | ವಾಟ್ಸಾಪ್ ಗ್ರೂಪ್‌ನಿಂದ ಗಣೇಶ ಚತುರ್ಥಿ ಮೆಸೇಜ್‌ಗಳನ್ನು ಅಳಿಸಿದ ಆರೋಪ : ಶಾಲೆಯ ಪ್ರಾಂಶುಪಾಲನ ಬಂಧನ

- Advertisement -
- Advertisement -

ವಾಟ್ಸಾಪ್ ಗ್ರೂಪ್‌ನಲ್ಲಿ ಗಣೇಶ ಚತುರ್ಥಿಗೆ ಶುಭಾಶಯ ಕೋರಿ ಹಾಕಲಾಗಿದ್ದ ಪೋಸ್ಟ್‌ಗಳನ್ನು (ಸಂದೇಶ) ಅಳಿಸಿದ ಆರೋಪದ ಮೇಲೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ newindianexpress.com ವರದಿ ಮಾಡಿದೆ.

ಕೋಟಾ ಜಿಲ್ಲೆಯ ಲಾತೂರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರಾಂಶುಪಾಲ ಶಫಿ ಮೊಹಮ್ಮದ್ ಅನ್ಸಾರಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸ್ಥಳೀಯರು ಶಾಲೆಯ ಬಳಿ ಜಮಾಯಿಸಿ ಪ್ರತಿಭಟಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಪೋಷಕರು ಮತ್ತು ಶಿಕ್ಷಕರನ್ನು ಒಳಗೊಂಡ ಶಾಲೆಯ ವಾಟ್ಸಾಪ್ ಗ್ರೂಪಿನಿಂದ ಗಣೇಶನ ಚಿತ್ರ ಇರುವ ಪೋಸ್ಟ್‌ಗಳನ್ನು ಅನ್ಸಾರಿ ಅವರು ಅಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ನರೇಂದ್ರ ನಾಡಾರ್ ಅವರು, “ಶಾಲಾ ಆಡಳಿತ ಮತ್ತು ಅಭಿವೃದ್ಧಿ ಸಮಿತಿ (ಎಸ್‌ಎಂಡಿಸಿ) ಎಂಬ ಹೆಸರಿನ ವಾಟ್ಸಾಪ್‌ ಗ್ರೂಪಿನಲ್ಲಿ ಗಣೇಶ ಚತುರ್ಥಿಗೆ ಶುಭಾಶಯ ಕೋರಿ ಗ್ರಾಮಸ್ಥರು ಸಂದೇಶಗಳನ್ನು ಹಂಚಿಕೊಂಡಿದ್ದರು. ಪ್ರಾಂಶುಪಾಲ ಅನ್ಸಾರಿಯವರು ಆ ಸಂದೇಶಗಳನ್ನು ಅಳಿಸಿದ್ದಾರೆ. ಇದಾಗಿ ಎರಡು ಗಂಟೆಗಳ ಬಳಿಕ, ಶಾಲೆಯ ಶಿಕ್ಷಕರೊಬ್ಬರು ಅದೇ ರೀತಿಯ ಶುಭಾಶಯದ ಸಂದೇಶ ಹಾಕಿದ್ದರು. ಅದನ್ನೂ ಅನ್ಸಾರಿ ಅಳಿಸಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ತಿಳಿಸಿದ್ದಾರೆ.

ಕೋಮು ಸೌಹಾರ್ದತೆ ಕದಡಿದ ಆರೋಪದ ಮೇಲೆ ಅನ್ಸಾರಿಯವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಸ್ಥಳೀಯರು ಶಾಲೆಯ ಬಳಿ ಜಮಾಯಿಸಿ ಪ್ರತಿಭಟಿಸಿದ್ದರು. ಈ ವಿಷಯ ತಿಳಿದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಹೆಚ್‌ಒ) ಉತ್ತಮ್ ಸಿಂಗ್ ಸೇರಿದಂತೆ ಬಾಪವಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಸ್ಥಿತಿ ನಿಯಂತ್ರಿಸಲು ಘಟನಾ ಸ್ಥಳಕ್ಕೆ ತೆರಳಿದ್ದರು.

ಕೋಮು ಸೌಹಾರ್ದತೆಗೆ ಭಂಗ ತಂದ ಆರೋಪದ ಮೇಲೆ ಅನ್ಸಾರಿ ಅವರನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)ಯ ಸೆಕ್ಷನ್ 127ರ ಅಡಿಯಲ್ಲಿ ಬಂಧಿಸಲಾಗಿದೆ. ಆದರೆ, ಅವರಿಗೆ ಜಾಮೀನು ಮಂಜೂರಾಗಿದ್ದು, ಸಂಜೆಯ ವೇಳೆಗೆ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ, ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ ಎಂದು ಎಸ್‌ಹೆಚ್‌ಒ ಉತ್ತಮ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ : ಬೌದ್ಧ ಧರ್ಮ ಎಂಬ ಕಾರಣಕ್ಕೆ ದಲಿತ ಯುವಕನಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಶಿವಸೇನಾ ಮುಖಂಡನ ಬೆಂಬಲಿಗರಿಂದ ಸಾಮೂಹಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...