Homeಫ್ಯಾಕ್ಟ್‌ಚೆಕ್FACT CHECK : ಸರ್ದಾರ್ ಪಟೇಲರ 'ಏಕತಾ ಪ್ರತಿಮೆ' ಬಿರುಕು ಬಿಟ್ಟಿದೆಯಾ?

FACT CHECK : ಸರ್ದಾರ್ ಪಟೇಲರ ‘ಏಕತಾ ಪ್ರತಿಮೆ’ ಬಿರುಕು ಬಿಟ್ಟಿದೆಯಾ?

- Advertisement -
- Advertisement -

ಭಾರತದ ಪ್ರಥಮ ಉಪ ಪ್ರಧಾನಿ ಹಾಗೂ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ‘ಏಕತಾ ಪ್ರತಿಮೆ'(Statue of Unity)ಯನ್ನು ಗುಜರಾತ್‌ನ ಕೇವಡಿಯಾ ಬಳಿ ಸ್ಥಾಪಿಸಲಾಗಿದೆ.

ಸುಮಾರು 562 ರಾಜ ಪ್ರಭುತ್ವಗಳಲ್ಲಿ ಹಂಚಿಹೋಗಿದ್ದ ಭಾರತವನ್ನು ಸ್ವಾತಂತ್ರ್ಯದ ಬಳಿಕ ಒಂದೇ ಒಕ್ಕೂಟದಡಿ ತಂದ ಕೀರ್ತಿ ಸರ್ದಾರ್ ಪಟೇಲರಿಗೆ ಸಲ್ಲುತ್ತದೆ. ಅಂತಹ ಪಟೇಲರ 143ನೇ ಜನ್ಮ ದಿನವಾದ ಅಕ್ಟೋಬರ್ 31, 2018ರಂದು ಪ್ರಧಾನಿ ನರೇಂದ್ರ ಮೋದಿಯವರು ‘ಏಕತಾ ಪ್ರತಿಮೆ’ಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಇದೀಗ ಏಕತಾ ಪ್ರತಿಮೆ ಬಿರುಕು ಬಿಟ್ಟಿರುವಂತೆ ಕಾಣುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘RaGaForIndia'(@RaGa4India) ಎಂಬ ಎಕ್ಸ್‌ ಖಾತೆಯಲ್ಲಿ ಇತ್ತೀಚೆಗೆ ವೈರಲ್ ಪೋಟೋ ಹಂಚಿಕೊಂಡು “ಇದು ಯಾವ ಸಂದರ್ಭದಲ್ಲಿ ಬೇಕಾದರೂ ಕುಸಿಯಬಹುದು. ಬಿರುಕು ಬಿಡಲು ಶುರುವಾಗಿದೆ” ಎಂದು ಹಿಂದಿಯಲ್ಲಿ ಭಾಷೆಯಲ್ಲಿ ಬರೆದುಕೊಳ್ಳಲಾಗಿತ್ತು. ಪ್ರಸ್ತುತ ಆ ಪೋಸ್ಟ್ ಡಿಲಿಟ್ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು, 2018ರಲ್ಲಿ ಏಕತಾ ಪ್ರತಿಮೆ ಉದ್ಘಾಟನೆಗೂ ವಾರದ ಮುನ್ನ ತೆಗೆದ ಹಳೆಯ ಫೋಟೋ ಎಂದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ನಾವು ವೈರಲ್ ಫೋಟೋ ಹಾಕಿ ಸರ್ಚ್ ಮಾಡಿದಾಗ ಲಾಸ್ ಏಂಜಲ್ಸ್ ಟೈಮ್ಸ್ ಮತ್ತು ದಿ ವಾಶಿಂಗ್ಟನ್ ಪೋಸ್ಟ್ ಸುದ್ದಿ ಸಂಸ್ಥೆಗಳು ಆ ಫೋಟೋ ಬಳಸಿಕೊಂಡು 2018ರಲ್ಲಿ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. ಎರಡೂ ಸುದ್ದಿ ವೆಬ್‌ಸೈಟ್‌ಗಳು ಆ ಫೋಟೋ 2018ರಲ್ಲಿ ಪ್ರತಿಮೆ ಉದ್ಘಾಟನಗೂ ವಾರದ ಮುನ್ನ ತೆಗೆದಿರುವಂತದ್ದು ಎಂದಿದೆ.

ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಅಧೀನದಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಸೆಪ್ಟೆಂಬರ್ 9, 2024ರಂದು ಎಕ್ಸ್‌ ಪೋಸ್ಟ್ ಮೂಲಕ ವೈರಲ್ ಫೋಟೋ 2018ರಲ್ಲಿ ಪ್ರತಿಮೆ ನಿರ್ಮಾಣದ ವೇಳೆ ತೆಗೆದಿರುವಂತದ್ದು ಎಂದು ಖಚಿತಪಡಿಸಿದೆ.

ಒಟ್ಟಿನಲ್ಲಿ, ಸರ್ದಾರ್ ಪಟೇಲರ ಏಕತಾ ಪ್ರತಿಮೆ ಬಿರುಕು ಬಿಟ್ಟಿದೆ ಎಂದು ವೈರಲ್ ಆಗುತ್ತಿರುವ ಫೋಟೋ ಈಗಿನದ್ದಲ್ಲ, ಅದು 2018ರಲ್ಲಿ ಪ್ರತಿಮೆ ಉದ್ಘಾಟನೆಗೂ ಮುನ್ನ ತೆಗೆದಿರುವಂತದ್ದು ಎಂಬುವುದನ್ನು ಅಧಿಕೃತ ಮೂಲಗಳು ಖಚಿತಪಡಿಸಿವೆ.

ಇದನ್ನೂ ಓದಿ : FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...