Homeಕರ್ನಾಟಕಹಿರಿಯ ನಾಯಕರಿಗೆ ಕಡಿವಾಣ ಹಾಕುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ರಾಜ್ಯ ಕಾಂಗ್ರೆಸ್‌ನ ಕಿರಿಯ ನಾಯಕರು!

ಹಿರಿಯ ನಾಯಕರಿಗೆ ಕಡಿವಾಣ ಹಾಕುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ರಾಜ್ಯ ಕಾಂಗ್ರೆಸ್‌ನ ಕಿರಿಯ ನಾಯಕರು!

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಲು ಹಕ್ಕೊತ್ತಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸಚಿವರಿಗೆ ಕಡಿವಾಣ ಹಾಕುವಂತೆ 15 ಕಾಂಗ್ರೆಸ್ ಶಾಸಕರು ಮತ್ತು ಮಾಜಿ ಸಚಿವರ ಗುಂಪು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಅವರ ಹೆಂಡತಿಗೆ ಭೂ ಮಂಜೂರಾತಿ ಮಾಡಿರುವ ಪ್ರಕರಣದ ಕುರಿತು ತನಿಖೆಯ ಸಾಧ್ಯತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವವು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಸಲಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಹಲವಾರು ಕಾಂಗ್ರೆಸ್ ಸಚಿವರು ತಮ್ಮನ್ನು ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರ ಬರೆಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಮಂಜೂರಾತಿ ವಿವಾದವನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸೃಷ್ಟಿಸಿದೆ. ಆದರೆ, ಹಿರಿಯ ಸಚಿವರು ಸೇರಿದಂತೆ ಆರಕ್ಕೂ ಹೆಚ್ಚು ನಾಯಕರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಸೆಣಸುವ ಬದಲು ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಚಲಾಯಿಸುತ್ತಿದ್ದಾರೆ.” ಎಂದು 15 ನಾಯಕರ ಗುಂಪು ಬರೆದ ಪತ್ರ ರಾಹುಲ್ ಗಾಂಧಿ ಅವರಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದೆ.

“ಕಾಂಗ್ರೆಸ್ ನಾಯಕತ್ವವು ಈ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಬೇಕು ಮತ್ತು ಅವರಿಗೆ ಎಚ್ಚರಿಕೆ ನೀಡಬೇಕು. ಜೊತೆಗೆ ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯದ ಹಿತದೃಷ್ಟಿಯಿಂದ ಭವಿಷ್ಯದಲ್ಲಿ ಇಂತಹ ಹಾನಿಕಾರಕ ಹೇಳಿಕೆಗಳನ್ನು ನೀಡದಂತೆ ನಿರ್ದೇಶಿಸಬೇಕು” ಎಂದು ಪತ್ರವು ಆಗ್ರಹಿಸಿದೆ.

ಮಾಜಿ ಸಚಿವರಾದ ಬಿ ಎಲ್ ಶಂಕರ್, ಹೆಚ್ ಎಂ ರೇವಣ್ಣ, ಮಾಜಿ ಸಂಸದರಾದ ಎಲ್ ಹನುಮಂತಯ್ಯ, ವಿ ಎಸ್ ಉಗ್ರಪ್ಪ ಸೇರಿದಂತೆ ಸಿದ್ದರಾಮಯ್ಯ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅನೇಕ ನಾಯಕರು ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ವಿವಿಧ ಹಗರಣಗಳ ತನಿಖೆ ಸಮನ್ವಯಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ

“ಸಿದ್ದರಾಮಯ್ಯನವರನ್ನು ಬದಲಿಸುವ ಬಗ್ಗೆ ಮಾತನಾಡುತ್ತಿರುವ ಮುಂಚೂಣಿಯಲ್ಲಿರುವ ನಾಯಕರಿಂದಾಗಿ ನಮ್ಮ ಅನೇಕ ನಾಯಕರು ಮತ್ತು ಕಾರ್ಯಕರ್ತರು ಹತಾಶರಾಗಿದ್ದಾರೆ. ಅವರು ಸರ್ಕಾರ ಮತ್ತು ಪಕ್ಷದಲ್ಲಿ ತಮ್ಮ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ನಮ್ಮ ನಾಯಕರ ಒಳಜಗಳ ಮತ್ತು ಅಜಾಗರೂಕ ಹೇಳಿಕೆಗಳಿಂದಾಗಿ ಕರ್ನಾಟಕದ ಜನರು ನಿಧಾನವಾಗಿ ನಮ್ಮ ಪಕ್ಷ ಮತ್ತು ಸರ್ಕಾರದ ಮೇಲಿನ ನಂಬಿಕೆ ಮತ್ತು ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಆಡಳಿತಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಅಡಚಣೆಯಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ಬರೆದ ಎರಡನೇ ಪತ್ರ ಇದಾಗಿದೆ. ಈ ಹಿಂದೆ ಎಂಎಲ್ಸಿಗಳಾದ ದಿನೇಶ್ ಗೂಳಿಗೌಡ ಮತ್ತು ಮಂಜುನಾಥ್ ಭಂಡಾರಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಧ್ಯಸ್ಥಿಕೆಗೆ ಪತ್ರ ಬರೆದಿದ್ದರು.

2021 ರಲ್ಲಿ ಮುಖ್ಯಮಂತ್ರಿಯವರ ಪತ್ನಿಗೆ 14 ವಸತಿ ನಿವೇಶನಗಳನ್ನು ಹಂಚಿರುವ ಕುರಿತು ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಸ್ಟ್ 16 ರಂದು ಅನುಮತಿ ನೀಡಿದ ನಂತರ ಕಾಂಗ್ರೆಸ್‌ನಲ್ಲಿ ಅಶಾಂತಿ ಉಂಟಾಗಿದೆ.

ಇದನ್ನೂಓದಿ: ಅರುಣಾಚಲ ಪ್ರದೇಶ: ಅಂಜಾವ್‌ನಲ್ಲಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದ ಚೀನಾ ಸೈನಿಕರು

ರಾಜ್ಯಪಾಲರ ಮಂಜೂರಾತಿ ಆದೇಶವನ್ನು ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ, ಸಿಎಂ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಬೆಂಬಲವನ್ನು ಸೂಚಿಸಿದ್ದು, ಹಿಂದುಳಿದ ವರ್ಗವನ್ನು ಹೊರಹಾಕಲು ಪ್ರತಿಪಕ್ಷಗಳು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...