Homeಮುಖಪುಟನಾವು ಸಂವಿಧಾನ ಎತ್ತಿಹಿಡಿಯುವ ಮಾತನಾಡುವಾಗ ಬಿಜೆಪಿಗೆ ಯಾಕೆ ಸಮಸ್ಯೆಯಾಗುತ್ತದೆ: ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು

ನಾವು ಸಂವಿಧಾನ ಎತ್ತಿಹಿಡಿಯುವ ಮಾತನಾಡುವಾಗ ಬಿಜೆಪಿಗೆ ಯಾಕೆ ಸಮಸ್ಯೆಯಾಗುತ್ತದೆ: ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ರಾಹುಲ್ ಗಾಂಧಿ ದೇಶವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಅವರು ಸಂವಿಧಾನವನ್ನು ಎತ್ತಿಹಿಡಿಯುವ ಬಗ್ಗೆ ಮಾತನಾಡಿದ್ದು, ಆದರೆ ಅವರು ಈ ರೀತಿಯ ಚರ್ಚೆ ನಡೆಸಿದಾಗೆಲ್ಲಾ ಬಿಜೆಪಿಗೆ ಏಕೆ ಸಮಸ್ಯೆ ಆಗುತ್ತಿದೆ ಎಂದು ಪಕ್ಷವು ಪ್ರಶ್ನಿಸಿದೆ.

ಭಾರತಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ನಿಲುವುಗಳಿಗೆ ಹೆಸರುವಾಸಿಯಾದ ಡೆಮೋಕ್ರಾಟ್ ಪಕ್ಷದ ಇಲ್ಹಾನ್ ಒಮರ್ ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ ಎಂಬ ಅರೋಪವನ್ನು ಕಾಂಗ್ರೆಸ್  ತಳ್ಳಿಹಾಕಿದೆ. ಆಡಳಿತದಲ್ಲಿ ಬಿಜೆಪಿ ಇದೆ, ಅವರು ಅದನ್ನು ನಂಬುದುದಾದರೆ ಅಮೆರಿಕಾದ ರಾಯಭಾರಿಯನ್ನು ಕರೆಸಿ ಕ್ರಮ ಕೈಗೊಳ್ಳಿ ಎಂದು ಪಕ್ಷವು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಮೀಸಲಾತಿ ಕುರಿತು ಗಾಂಧಿಯವರ ಹೇಳಿಕೆಗೆ ತೀವ್ರವಾಗಿ ಟೀಕಿಸಿ, ಇದು ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ ಎಂದು ಹೇಳಿದ್ದರು.

ಇದನ್ನೂಓದಿ: “ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, “ಅವರಿಗೆ ಕ್ರಮ ಕೈಗೊಳ್ಳಲು ಹೇಳಿ, ನಂತರ ನಾವು ಪ್ರಧಾನಿ ಮತ್ತು ಗೃಹ ಮಂತ್ರಿ ಇಬ್ಬರ ಕೃತ್ಯಗಳನ್ನೂ ಬಹಿರಂಗಪಡಿಸುತ್ತೇವೆ. ಪ್ರಧಾನಿ ವಿದೇಶಕ್ಕೆ ಹೋಗಿ ಭಾರತ ಮತ್ತು ಭಾರತೀಯರ ವಿರುದ್ಧ ಭಯಾನಕ ಹೇಳಿಕೆಗಳನ್ನು ಮಾಡುತ್ತಾರೆ. ಅದು ದೇಶವಿರೋಧಿ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ನಾವು ಭಾರತದ ಸಂವಿಧಾನವನ್ನು ಎತ್ತಿಹಿಡಿಯುವ ಬಗ್ಗೆ ಮಾತನಾಡುತ್ತಿದ್ದೇವೆ ಮತ್ತು ಅದು ಹೇಗೆ ರಾಷ್ಟ್ರವಿರೋಧಿ ಆಗಲು ಸಾಧ್ಯ? ನಾವು ಸಂವಿಧಾನವನ್ನು ಎತ್ತಿಹಿಡಿಯುವ ಬಗ್ಗೆ ಮಾತನಾಡುವಾಗ ಬಿಜೆಪಿಗೆ ಯಾಕೆ ಸಮಸ್ಯೆಯಾಗುತ್ತದೆ? ಅವರು ಯಾಕೆ ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ?” ಎಂದು ಅವರು ಕೇಳಿದ್ದಾರೆ.

ವಿಡಿಯೊ ನೋಡಿ: ಗದ್ದರ್‌ ಎಂದರೇನೇ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...