Homeಮುಖಪುಟರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

- Advertisement -
- Advertisement -

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದದಲ್ಲಿ ರಷ್ಯಾ ಸೇನೆಗೆ ನೆರವು ಸಿಬ್ಬಂದಿಯಾಗಿ ತೆರಳಿರುವ ಹಲವಾರು ಕೇರಳಿಗರು, ಭಾರೀ ಮೊತ್ತದ ವೇತನದ ಆಮಿಷಕ್ಕೆ ಒಳಗಾಗಿ ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿ, ರಷ್ಯಾದ ಖಾಯಂ ನಿವಾಸಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಕೇರಳಿಗರ ವ್ಯವಹಾರಗಳ ಇಲಾಖೆ (NORKA) ತಿಳಿಸಿದೆ.

ತವರಿನಲ್ಲಿ ಗಳಿಸುತ್ತಿದ್ದಕ್ಕಿಂತ ಹೆಚ್ಚಿನ ಮೊತ್ತವಾದ ಸುಮಾರು 2.5 ಲಕ್ಷ ರೂಪಾಯಿ ಮಾಸಿಕ ವೇತನದ ಆಹ್ವಾನ ದೊರೆತಿದ್ದರಿಂದ ರಷ್ಯಾ ಸೇನೆಯ ನೆರವು ಸಿಬ್ಬಂದಿಯಾಗಿ ತೆರಳಿರುವ ಈ ಕೇರಳಿಗರು, ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿದ್ದಾರೆ ಎಂದು NORKAದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಿತ್ ಕೊಲಸ್ಸೆರಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ರಷ್ಯಾದ ಖಾಯಂ ನಿವಾಸತ್ವ ಪಡೆದುಕೊಂಡ ಬಳಿಕ, ಸೇನೆಗೆ ಸೇರ್ಪಡೆಯಾಗಲು ಇವರೆಲ್ಲ (ಕೇರಳಿಗರು) ಲಿಖಿತ ಸಮ್ಮತಿ ನೀಡಿದ್ದಾರೆ ಎಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ತಿಳಿದು ಬಂದಿದೆ ಎಂದು ಅಜಿತ್ ಕೊಲಶ್ಶೇರಿ ಮಾಹಿತಿ ನೀಡಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ತ್ರಿಶೂರ್ ಜಿಲ್ಲೆಯ 36 ವರ್ಷದ ಸಂದೀಪ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ, ಅವರಲ್ಲಿ (ಕೇರಳಿಗರು) ಕೆಲವರು ಭಾರತಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೆಲವರ ಮನೆಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕಳೆದ ವಾರ ಪಿಣರಾಯಿ ವಿಜಯನ್ ಅವರು ರಷ್ಯಾದ ಸೇನಾ ಶಿಬಿರಗಳಿಂದ ಕೇರಳಿಗರನ್ನು ಮರಳಿ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಕೇರಳದಿಂದ ಇನ್ನೂ ಎಷ್ಟು ಮಂದಿ ಇದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ನಾಲ್ವರು ಹಿಂತಿರುಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಕೇರಳಕ್ಕೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಏಕೆಂದರೆ ಅಲ್ಲಿ ತಿಂಗಳಿಗೆ 2.5 ಲಕ್ಷ ರೂ. ವೇತನ ಸಿಗುತ್ತಿದ್ದೆ. ಊರಿನಲ್ಲಿ ಅವರೆಲ್ಲ ಎಲೆಕ್ಟ್ರಿಷಿಯನ್, ಪ್ಲಂಬಿಂಗ್, ಅಡುಗೆ ಕೆಲಸದಂತಹ ಉದ್ಯೋಗ ಮಾಡುತಿದ್ದರು. ಇದು ಕೇರಳ ಮಟ್ಟಿಗೆ ತುಂಬಾ ಅಸಹಜ ವಲಸೆಯಾಗಿದೆ” ಎಂದು ಕೊಲಸ್ಸೆರಿ ಹೇಳಿದ್ದಾರೆ.

ಭಾರತೀಯರನ್ನು ಮಾನವ ಕಳ್ಳಸಾಗಾಣಿಕೆ ಮಾಡಿದ ಆರೋಪದ ಮೇಲೆ ಹಲವು ಪ್ರವಾಸಿ ಏಜೆಂಟ್‌ಗಳ ವಿರುದ್ದಈ ವರ್ಷದ ಮಾರ್ಚ್‌ನಲ್ಲಿ ದೆಹಲಿಯ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಕೇರಳದ ಕೆಲವರು ಸೇರಿದಂತೆ ಹಲವಾರು ಭಾರತೀಯರನ್ನುರಷ್ಯಾ ಸೇನೆಯೊಂದಿಗೆ ಕೆಲಸ ಮಾಡಲು, ಅಲ್ಲಿಗೆ ಕಳ್ಳಸಾಗಾಣಿಕೆ ಮಾಡಿದ ಆರೋಪ ಈ ಏಜೆಂಟ್‌ಗಳ ವಿರುದ್ದ ಇದೆ. ಉಕ್ರೇನ್ ವಿರುದ್ಧದ ರಷ್ಯಾದ ಯುದ್ಧದಲ್ಲಿ ಇಬ್ಬರು ಭಾರತೀಯ ಯುವಕರು ಸಾವನ್ನಪ್ಪಿದ ನಂತರ ಏಜೆಂಟರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಫಾತಕಾರಿ ವಿಷಯವೆಂದರೆ, ಮಾರ್ಚ್ ತಿಂಗಳಲ್ಲಿ ಉದ್ಯೋಗ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದರೂ, ಸೇನೆಯ ಕೆಲಸಕ್ಕೆ ಸೇರಲು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಂಡಿರುವ ಕೆಲವರು ಏಪ್ರಿಲ್‌ನಲ್ಲಿ ಅಲ್ಲಿಗೆ ಪ್ರಯಾಣಿಸಿದ್ದಾರೆ.

ಈ ಪೈಕಿ ಕೆಲವರು ನಮ್ಮ ಜೊತೆ ಮಾತನಾಡಿದ್ದು, “ನಮಗೆ ಸೇನಾ ಶಿಬಿರದಲ್ಲಿ ನಿಯೋಜಿಸುವ ಮಾಹಿತಿ ನೀಡಲಾಗಿತ್ತಾದರೂ, ಯುದ್ಧಭೂಮಿಯಲ್ಲಿ ಸೈನ್ಯದಲ್ಲಿ ಕೆಲಸ ಮಾಡುವ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ರಷ್ಯಾದಿಂದ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಕೇರಳಿಗರಲ್ಲಿ ಒಬ್ಬರಾದ ಸಂತೋಷ್, ತಾನು ಮತ್ತು ಇತರ ಇಬ್ಬರು ಮೂರು ತಿಂಗಳವರೆಗೆ ಮಾನ್ಯವಾಗಿರುವ ಖಾಸಗಿ ವೀಸಾದಲ್ಲಿ ರಷ್ಯಾಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

“ಶಿಬಿರಗಳಲ್ಲಿ ಸೇನೆಗೆ ನೆರವು ಸಿಬ್ಬಂದಿಯಾಗಿ ಸೇವೆಗೆ ಸೇರಲು, ನಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದ ನಂತರ ನಾವು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಳ್ಳಬೇಕಾಗಿತ್ತು. ಆದರೆ, ಸಂದೀಪ್ ಸಾವಿನ ನಂತರ ನಾವು ಭಾರತಕ್ಕೆ ಮರಳಲು ನಿರ್ಧರಿಸಿದ್ದೇವೆ. ಇದಕ್ಕಾಗಿ ನಾವು ಮೊದಲು ಸೇನೆಯೊಂದಿಗಿನ ನಮ್ಮ ಒಪ್ಪಂದವನ್ನು ರದ್ದುಗೊಳಿಸಬೇಕಿದೆ. ನಂತರ ಖಾಯಂ ನಿವಾಸತ್ವ ರದ್ದುಗೊಳಿಸಬೇಕು. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಭಾರತೀಯ ರಾಯಭಾರ ಕಚೇರಿ ನಮಗೆ ಸಹಾಯ ಮಾಡುತ್ತಿದೆ” ಎಂದು ಸಂತೋಷ್ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಸಂದೀಪ್ ಅವರ ಕುಟುಂಬವು ಅವರ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ಮಾಡಲು ಕಾಯುತ್ತಿದೆ. ಈ ಕುರಿತು ಮಾತನಾಡಿರುವ ಸಂದೀಪ್ ಸಂಬಂಧಿ ಸರನ್ “ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಂದೀಪ್ ಅವರ ದೇಹವನ್ನು ಇನ್ನಷ್ಟೇ ಪಡೆಯಬೇಕಿದೆ. ಯುದ್ಧಭೂಮಿಯಿಂದ ಸಂದೀಪ್ ದೇಹ ರಸ್ತೆ ಮಾರ್ಗದ ಮೂಲಕ ಮಾತ್ರ ರಾಜಧಾನಿ ಮಾಸ್ಕೋಗೆ ತರಲು ಸಾಧ್ಯವಿದೆ ಎಂದು ನಮಗೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

Courtesy : indianexpress.com

ಇದನ್ನೂ ಓದಿ : ಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Is Russians are mad to offer 2.5 kakhs pm just to logistics work in their Army. Going for earning heptic money and something happens blaming Indian Government. Government has to make Law that no Indian should go to other country for Army related jobs.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...