Homeಮುಖಪುಟಸೆಸ್ ಹೆಚ್ಚಳದಿಂದ ರಾಜ್ಯಗಳ ತೆರಿಗೆ ಪಾಲು ಕುಗ್ಗುತ್ತಿದೆ: ಕೇರಳ ಸಿಎಂ ಆರೋಪ

ಸೆಸ್ ಹೆಚ್ಚಳದಿಂದ ರಾಜ್ಯಗಳ ತೆರಿಗೆ ಪಾಲು ಕುಗ್ಗುತ್ತಿದೆ: ಕೇರಳ ಸಿಎಂ ಆರೋಪ

- Advertisement -
- Advertisement -

ಕೇಂದ್ರವು ವಿಧಿಸಿರುವ ಸೆಸ್ ಮತ್ತು ಸರ್‌ಚಾರ್ಜ್‌ಗಳು “ಏರುತ್ತಿರುವ” ಪರಿಣಾಮವಾಗಿ ತೆರಿಗೆಗಳ ಹಂಚುವಿಕೆಯಲ್ಲಿ ರಾಜ್ಯಗಳ ಪಾಲು “ಕುಗ್ಗುತ್ತಿದೆ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 16ನೇ ಹಣಕಾಸು ಆಯೋಗಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಕೇರಳ ಆಯೋಜಿಸಿದ್ದ ಐದು ಬಿಜೆಪಿಯೇತರ ರಾಜ್ಯಗಳ ಸಮಾವೇಶದಲ್ಲಿ ವಿಜಯನ್ ಮಾತನಾಡಿದರು.ಸೆಸ್ ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳದ ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ತೆಲಂಗಾಣ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ, ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ, ತಮಿಳುನಾಡು ಹಣಕಾಸು ಸಚಿವ ತಂಗಂ ತೆನ್ನರಸು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಸರ್ಕಾರದ ಮಾಜಿ ಆರ್ಥಿಕ ಸಲಹೆಗಾರ ಡಾ ಅರವಿಂದ್ ಸುಬ್ರಮಣಿಯನ್, ಕೇರಳದ ಮಾಜಿ ಹಣಕಾಸು ಸಚಿವ ಟಿ ಎಂ ಥಾಮಸ್ ಐಸಾಕ್ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ಪ್ರೊ ವಿ ಕೆ ರಾಮಚಂದ್ರನ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.

ಇದನ್ನೂಓದಿ:ಹರಿಯಾಣ ಚುನಾವಣೆ | 5 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

“ಕೇಂದ್ರವು ಸಂಗ್ರಹಿಸುವ ತೆರಿಗೆಯ ನಿವ್ವಳ ಆದಾಯದಿಂದ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡುವಂತೆ ಹಣಕಾಸು ಆಯೋಗವು ಶಿಫಾರಸು ಮಾಡುತ್ತಿರುವ ಸಮಯದಲ್ಲೆ, ತೆರಿಗೆ ಹಂಚಿಕೆ ಇಲ್ಲದ ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಏರಿಕೆಯಾಗಿದೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಹಂಚಿಕೆ ಮಾಡುವ ಪಾಲಿನಲ್ಲಿ ರಾಜ್ಯಗಳ ಪಾಲನ್ನು ಕಳೆದ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇಕಡಾ 41 ಕ್ಕಿಂತ ಹೆಚ್ಚು ಹೆಚ್ಚಿಸಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ. ಈ ಪಾಲನ್ನು ಶೇ.50ಕ್ಕೆ ಹೆಚ್ಚಿಸುವಂತೆ ಕೇರಳ ಸೇರಿ ಹಲವು ರಾಜ್ಯಗಳು ಈ ಹಿಂದೆಯೂ ಈ ಬೇಡಿಕೆ ಇಟ್ಟಿವೆ ಎಂದು ಅವರು ಹೇಳಿದ್ದಾರೆ.

“ಕೇಂದ್ರವು ಸಂಗ್ರಹಿಸುವ ತೆರಿಗೆಯಲ್ಲಿ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡಬೇಕೆಂಬ ಬೇಡಿಕೆಯು ನಿರಂತರ ಪ್ರಸ್ತುತತೆಯನ್ನು ಹೊಂದಿದೆ. ಇದನ್ನು ಗಟ್ಟಿಯಾಗಿ ರೂಪಿಸಲು ಇಲ್ಲಿರುವ ಖ್ಯಾತ ವಿದ್ವಾಂಸರು ಮತ್ತು ಸಹೋದ್ಯೋಗಿಗಳಿಗೆ ನಾನು ವಿನಂತಿಸುತ್ತೇನೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.ಸೆಸ್ ಹೆಚ್ಚಳ

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....