Homeಮುಖಪುಟಅಬಕಾರಿ ನೀತಿ ಪ್ರಕರಣ | ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಪ್ರಕಟ

ಅಬಕಾರಿ ನೀತಿ ಪ್ರಕರಣ | ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಪ್ರಕಟ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ನಿರಾಕರಣೆ ಮತ್ತು ಸಿಬಿಐ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಲಿದೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಸೆಪ್ಟೆಂಬರ್ 13 ರ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ತೀರ್ಪು ಪ್ರಕಟಿಸಲು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 5 ರಂದು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು. ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಕೇಂದ್ರೀಯ ಸಂಸ್ಥೆ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಮಾಡಿರುವ ತನ್ನ ಬಂಧನದ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಆಗಸ್ಟ್ 5 ರ ಆದೇಶವನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ತನ್ನ ಮನವಿಯೊಂದಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಹೈಕೋರ್ಟ್ ಅವರಿಗೆ ಸ್ವಾತಂತ್ರ್ಯವನ್ನು ನೀಡಿತ್ತು.

ಇದನ್ನೂಓದಿ: ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ : 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಆರೋಪದ ನಂತರ ದೆಹಲಿ ಸರ್ಕಾರವು ಕಾಯ್ದೆಯನ್ನು ವಾಪಾಸು ಪಡೆದಿತ್ತು. ಆರೋಪದ ನಂತರ ಜಾರಿ ನಿರ್ದೇಶನಾಲಯ (ಇಡಿ) ಪ್ರತ್ಯೇಕ ಮನಿ ಲಾಂಡರಿಂಗ್ ಪ್ರಕರಣವನ್ನು ಸಹ ದಾಖಲಿಸಿತ್ತು.

ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ನೀಡಲಾಗಿದೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜುಲೈ 12 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ವಿಡಿಯೊ ನೋಡಿ: ‘ಅಭಿವೃದ್ಧಿ ಎಂಬ ವಿನಾಶ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬಿ ಶ್ರೀಪಾದ ಭಟ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...