Homeಕರ್ನಾಟಕಬೆಂಗಳೂರು | ಉದ್ಯಮಿಯಿಂದ 1.5 ಕೋಟಿ ಸುಲಿಗೆ ಮಾಡಿದ 4 ಜಿಎಸ್‌ಟಿ ಅಧಿಕಾರಿಗಳು

ಬೆಂಗಳೂರು | ಉದ್ಯಮಿಯಿಂದ 1.5 ಕೋಟಿ ಸುಲಿಗೆ ಮಾಡಿದ 4 ಜಿಎಸ್‌ಟಿ ಅಧಿಕಾರಿಗಳು

- Advertisement -
- Advertisement -

ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಉದ್ಯಮಿ ಒಬ್ಬರಿಂದ 1.5 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು ಬುಧವಾರ ಬಂಧಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದ್ದು, ಬೆಂಗಳೂರಿನಲ್ಲಿ ಇಡಿ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ದೆಹಲಿ ಮೂಲದ ಅಭಿಷೇಕ್, ಸಹಾಯಕ ಅಧಿಕಾರಿ ಸಂತೋಷ್, ಜಿಎಸ್‌ಟಿ ಅಧಿಕಾರಿ ಮನೋಜ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರಲ್ಲಿ ಬೆಂಗಳೂರು ವಲಯದ ಕೇಂದ್ರ ತೆರಿಗೆ ಅಧಿಕಾರಿ ಸೂಪರಿಂಟೆಂಡೆಂಟ್, ಜಿಎಸ್‌ಟಿ ಬೆಂಗಳೂರು ವಲಯದ ಇಬ್ಬರು ಹಿರಿಯ ಗುಪ್ತಚರ ಅಧಿಕಾರಿಗಳು ಮತ್ತು ಬೆಂಗಳೂರು ವಲಯ ಜಿಎಸ್‌ಟಿಯ ಗುಪ್ತಚರ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘‘ಉದ್ಯಮಿಯೊಬ್ಬರನ್ನು ಅಪಹರಿಸಿ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಮಾರು ನಾಲ್ಕೈದು ಮಂದಿ ತನ್ನನ್ನು ಕರೆದುಕೊಂಡು ಹೋಗಿ ಅಪಾರ ಪ್ರಮಾಣದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. 1.5 ಕೋಟಿ ಪಡೆದ ನಂತರ ಉದ್ಯಮಿಯನ್ನು ಬಿಟ್ಟು ಬಿಟ್ಟಿದ್ದಾರೆ” ಎಂದು ಬೆಂಗಳೂರು ಆಯುಕ್ತ ಬಿ ದಯಾನಂದ ಹೇಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂಓದಿ:ಅಯೋಧ್ಯೆ | ಬಿಜೆಪಿ ಮತ್ತು ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಾಂತರ ರೂ.ಗಳ ಭೂ ಹಗರಣ: ಅಖಿಲೇಶ್ ಯಾದವ್ ಆರೋಪ

ಬೆಂಗಳೂರು ವಲಯ ಘಟಕದ (ಕೇಂದ್ರ ಜಿಎಸ್‌ಟಿ) ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶಕರ ಅಧಿಕಾರಿಗಳು ಅನುಮತಿಯಿಲ್ಲದೆ ದಾಳಿ ನಡೆಸಿದ್ದಾರೆ ಎಂದು ತನಿಖೆಯ ಸಂದರ್ಭದಲ್ಲಿ ಪೊಲೀಸರು ಕಂಡುಕೊಂಡಿದ್ದಾರೆ ಆಯುಕ್ತರು ತಿಳಿಸಿದ್ದಾರೆ.

ಮಂಜೂರಾತಿ ಇಲ್ಲದೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿರುವುದು ಕಂಡುಬಂದಿದ್ದು, ಉದ್ಯಮಿಯನ್ನು ಎರಡು ದಿನಗಳ ಕಾಲ ಅಕ್ರಮ ಬಂಧನದಲ್ಲಿರಿಸಿರುವುದು ಕೂಡಾ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗಕ್ಕೆ (ಸಿಸಿಬಿ) ವರ್ಗಾಯಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.ಉದ್ಯಮಿ

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...