Homeಮುಖಪುಟತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

- Advertisement -
- Advertisement -

ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು ಮತ್ತು ತೆಲಂಗಾಣದ ಹಣಕಾಸು ಸಚಿವರು ಕೇಂದ್ರ ಸರ್ಕಾರ ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಹೆಚ್ಚಿಸುವುದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಇದು 16 ನೇ ಹಣಕಾಸು ಆಯೋಗದ ನಿಧಿಗಳ ಪರಿಣಾಮಕಾರಿ ಹಂಚಿಕೆಯನ್ನು ಕಡಿಮೆ ಮಾಡುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯ ವಿರೋಧಿಸಿ ಹಾಗೂ ವಿವಿಧ ವಿಷಯಗಳ ಕುರಿತು ಹಣಕಾಸು ಆಯೋಗಕ್ಕೆ ಜಂಟಿಯಾಗಿ ಒತ್ತಡ ಹೇರಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ (ಸೆ.12) ತಿರುವನಂತಪುರಂನಲ್ಲಿ ವಿರೋಧ ಪಕ್ಷದ ಆಡಳಿತದ ರಾಜ್ಯಗಳ ಹಣಕಾಸು ಸಚಿವರ ಸಮಾವೇಶ ಆಯೋಜಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಸೆಸ್ ಮತ್ತು ಹೆಚ್ಚುವರಿ ಶುಲ್ಕದ ಮೇಲೆ ಐದು ಶೇಕಡಾ ಮಿತಿಯನ್ನು ಸೂಚಿಸಿದರು. ಕೇಂದ್ರ ತೆರಿಗೆಯಲ್ಲಿ 50 ಪ್ರತಿಶತ ಪಾಲು ನೀಡಬೇಕು ಎಂದು ಆಗ್ರಹಿಸಿದರು.

“ಕಳೆದ ವರ್ಷ, ಕೇಂದ್ರದಿಂದ ಸಂಗ್ರಹಿಸಲಾದ ಸೆಸ್ ಮತ್ತು ಸರ್‌ಚಾರ್ಜ್‌ನಿಂದಾಗಿ ಕರ್ನಾಟಕ ಸುಮಾರು 53,000 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದೆ. ಆದ್ದರಿಂದ, ನಾವು ಸೆಸ್ ಮತ್ತು ಹೆಚ್ಚುವರಿ ಶುಲ್ಕದ ಮೇಲೆ ಐದು ಶೇಕಡಾ ಮಿತಿಯನ್ನು ಶಿಫಾರಸು ಮಾಡಿದ್ದೇವೆ” ಎಂದರು.

ರಾಜ್ಯಗಳಿಗೆ ಅನುದಾನ ಹಂಚಿಕೆ ಮಾಡಲು 2011ರ ಜನಗಣತಿಯನ್ನು ಆಧಾರವನ್ನಾಗಿ ಪರಿಗಣಿಸುವ ಹಣಕಾಸು ಆಯೋಗದ ಕ್ರಮವನ್ನು ದಕ್ಷಿಣ ಎಲ್ಲಾ ರಾಜ್ಯಗಳು ವಿರೋಧಿಸಿದವು. ಕೇಂದ್ರದ ಈ ಕ್ರಮವು ಜನಸಂಖ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ದಂಡ ವಿಧಿಸಿದಂತಿದೆ. ಈ ವಿಚಾರದಲ್ಲಿ ವಿಫಲವಾಗಿರುವ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿದಂತಾಗಿದೆ ಎಂಬ ಅಭಿಪ್ರಾಯ ಸಮಾವೇಶದಲ್ಲಿ ವ್ಯಕ್ತವಾಯಿತು.

ತೆರಿಗೆ ಪಾಲಿನಲ್ಲಿ ಆಗುತ್ತಿರುವ ತಾರತಮ್ಯ ವಿಚಾರವಾಗಿ ಹಣಕಾಸುನ ಆಯೋಗದ ಮೇಲೆ ಒತ್ತಡ ಹೇರುವ ಉದ್ದೇಶಕ್ಕಾಗಿ ‘ಸಂಯುಕ್ತ ರಂಗ’ ರಚಿಸು ಅಗತ್ಯತೆಯನ್ನು ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವರು ಪ್ರತಿಪಾದಿಸಿದರು.

ಇದನ್ನೂ ಓದಿ : ಸೆಸ್ ಹೆಚ್ಚಳದಿಂದ ರಾಜ್ಯಗಳ ತೆರಿಗೆ ಪಾಲು ಕುಗ್ಗುತ್ತಿದೆ: ಕೇರಳ ಸಿಎಂ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...