Homeಮುಖಪುಟಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ 125 ಸ್ಥಾನಗಳ ಭಿನ್ನಾಭಿಪ್ರಾಯಗಳು ನಿವಾರಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಉಳಿದ 163 ಸ್ಥಾನಗಳು ಯಾರಿಗೆ ಎಂಬ ವಿಚಾರದಲ್ಲಿ ಮಿತ್ರಪಕ್ಷಗಳ ನಡುವೆ ಇನ್ನೂ ತೀರ್ಮಾನವಾಗಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಆದಾಗ್ಯೂ, ಗಣೇಶ ಹಬ್ಬದ ನಂತರ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಲಿವೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಮಾತನಾಡಿ, “ಎಂವಿಎ ಮೈತ್ರಿಕೂಟದ ಪಕ್ಷಗಳ ನಡುವೆ ವಿಧಾನಸಭೆಯ 125 ಸ್ಥಾನಗಳ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಉಳಿದ 163 ಸ್ಥಾನಗಳ ಬಗ್ಗೆಗಿನ ಭಿನ್ನಾಭಿಪ್ರಾಯಗಳನ್ನು ಇನ್ನಷ್ಟೆ ಪರಿಹರಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಗಣೇಶ ಹಬ್ಬದ ನಂತರ ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಲಿವೆ ಎಂದು ಅವರು ಹೇಳಿದ್ದಾರೆ.

“ನಾವು ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಆಂತರಿಕ ಮತ್ತು ಬಾಹ್ಯ ಸಮೀಕ್ಷೆಗಳು ಎಂವಿಎ ಪ್ರಬಲವಾಗಿದೆ ಮತ್ತು ಲೋಕಸಭೆಯ ಕಾರ್ಯಕ್ಷಮತೆ ಪುನರಾವರ್ತನೆಯಾಗುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದೆ. ಹಾಗಾಗಿ ಫಲಿತಾಂಶ ಇನ್ನೂ ಉತ್ತಮವಾಗಿ ಬರಬಹುದು”ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂಓದಿ:ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

“ಮಹಾರಾಷ್ಟ್ರ ವಿರೋಧಿ ಮಹಾಯುತಿ ಸರ್ಕಾರವನ್ನು ಅಧಿಕಾರದಿಂದ ಹೊರಹಾಕಲು ಮತ್ತು ಸ್ಥಳೀಯ ಜನರು ಮತ್ತು ರೈತರ ಹಿತಾಸಕ್ತಿಗಳ ಪರವಾಗಿರುವ ಸರ್ಕಾರವನ್ನು ಮರಳಿ ತರಲು ಮಹಾರಾಷ್ಟ್ರದ ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಆಧಾರದ ಮೇಲೆ ಪಕ್ಷವು 110ಕ್ಕೂ ಹೆಚ್ಚು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 13 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ತಾನು ಸ್ಪರ್ಧಿಸಿದ್ದ 10 ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತಾನು ಸ್ಪರ್ಧಿಸಿದ್ದ 21 ಸ್ಥಾನಗಳ ವಿರುದ್ಧ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು.

ಎನ್‌ಸಿಪಿ (ಎಸ್‌ಪಿ) ಕೂಡ ವಿಧಾನಸಭೆ ಚುನಾವಣೆಯಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಕೇಳುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಹೊಂದಾಣಿಕೆ ಮಾಡಿಕೊಂಡಿತ್ತು. ಜೊತೆಗೆ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಗಿಂತ ಕಡಿಮೆ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿತ್ತು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನಕ್ಕೆ ಒಪ್ಪಿಕೊಳ್ಳಲು ಪಕ್ಷವೂ ಸಿದ್ಧವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಶಿವಸೇನೆ (ಯುಬಿಟಿ) ಕೂಡ 100ಕ್ಕೂ ಹೆಚ್ಚು ಸ್ಥಾನಗಳನ್ನು ಕೇಳುತ್ತಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...