Homeಮುಖಪುಟತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು. ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ ಅವರು ಹೊರಬಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿನ ಭಾರಿ ಮಳೆಯ ನಡುವೆಯೇ ಕೇಜ್ರಿವಾಲ್ ಅವರು ಜೈಲು ಆವರಣದಿಂದ ನಿರ್ಗಮಿಸಿದರು. ಅವರ ಪತ್ನಿ ಸುನೀತಾ ಕೇಜ್ರಿವಾಲ್, ಮನೀಷ್ ಸಿಸೋಡಿಯಾ, ಅತಿಶಿ, ಸಂಜಯ್ ಸಿಂಗ್, ಭಗವಂತ್ ಮಾನ್ ಸೇರಿದಂತೆ ಎಎಪಿಯ ಹಿರಿಯ ನಾಯಕರು ಹಾಜರಿದ್ದರು.

ಕಾರಿನ ಸನ್‌ರೂಫ್ ಮೂಲಕ ನಿಂತು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ತಿಹಾರ್ ಜೈಲಿನ ಹೊರಗೆ ಜಮಾಯಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. “ಜೈಲ್ ಕೆ ಟೇಲ್ ಟೂಟ್ ಗಯೇ, ಕೇಜ್ರಿವಾಲ್ಜಿ ಛೂಟ್ ಗಯೇ” ಎಂದು ಎಎಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

“ಮಳೆಯಲ್ಲಿ ನನಗಾಗಿ ಕಾದಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು, ಅವರು ನನ್ನನ್ನು ಜೈಲಿಗೆ ಹಾಕಿದರು, ಅವರು ಕೇಜ್ರಿವಾಲ್ ಅವರನ್ನು ಕಂಬಿ ಹಿಂದೆ ಹಾಕಿದರೆ ನೈತಿಕ ಸ್ಥೈರ್ಯ ಕುಗ್ಗುತ್ತದೆ ಎಂದು ಅವರು ಭಾವಿಸಿದರು. ಇಂದು ನಾನು ಜೈಲಿನಿಂದ ಹೊರಬಂದಿದ್ದೇನೆ ಎಂದು ಹೇಳಲು ಬಯಸುತ್ತೇನೆ. ನನ್ನ ನೈತಿಕ ಸ್ಥೈರ್ಯ 100ರಷ್ಟು ಹೆಚ್ಚಾಗಿದೆ. ನನ್ನ ಶಕ್ತಿ 100 ಪಟ್ಟು ಹೆಚ್ಚಾಗಿದೆ” ಎಂದು ಕೇಜ್ರಿವಾಲ್ ಹೇಳಿದರು.

“ನನ್ನ ಜೀವನ ದೇಶಕ್ಕೆ ಮುಡಿಪಾಗಿದೆ, ನನ್ನ ಜೀವನದ ಪ್ರತಿ ಕ್ಷಣ, ಪ್ರತಿ ರಕ್ತ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ನಾನು ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ನೋಡಿದ್ದೇನೆ, ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ, ದೇವರು ನನ್ನನ್ನು ಪ್ರತಿ ಹೆಜ್ಜೆಯಲ್ಲಿಯೂ ಬೆಂಬಲಿಸಿದ್ದಾನೆ. ಏಕೆಂದರೆ, ನಾನು ಸತ್ಯವಂತ ಮತ್ತು ಪ್ರಾಮಾಣಿಕನಾಗಿದ್ದೆ” ಎಂದು ಅವರು ಹೇಳಿದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಕೇಜ್ರಿವಾಲ್‌ಗೆ ರಿಲೀಫ್ ನೀಡಿತು. ಆದರೆ, ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವುದನ್ನು ಅಥವಾ ಯಾವುದೇ ಅಧಿಕೃತ ದಾಖಲೆಗಳಿಗೆ ಸಹಿ ಮಾಡುವುದನ್ನು ನಿರ್ಬಂಧಿಸಿತು.

ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಮೇ 10 ರಂದು ಮಧ್ಯಂತರ ಜಾಮೀನು ಪಡೆದಿದ್ದರು.

ಕೇಜ್ರಿವಾಲ್ ಅವರ ಜಾಮೀನಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ, ಸುಪ್ರೀಂ ಕೋರ್ಟ್ ಅವರಿಗೆ ಕೇವಲ ಷರತ್ತುಬದ್ಧ ಜಾಮೀನು ನೀಡಿರುವುದರಿಂದ ಮುಖ್ಯಮಂತ್ರಿ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಯಾಗಿ ಮುಂದುವರಿದಿದ್ದಾರೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ, ಅರವಿಂದ್ ಕೇಜ್ರಿವಾಲ್ ಅವರಂತಹ “ಕಠಿಣ ಪ್ರಾಮಾಣಿಕ” ನಾಯಕನನ್ನು ಜೈಲಿನಲ್ಲಿಟ್ಟಿದ್ದಕ್ಕಾಗಿ ಆಡಳಿತ ಪಕ್ಷವು ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಅಬಕಾರಿ ನೀತಿ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ಆದೇಶವು ಬಿಜೆಪಿಯ “ಸುಳ್ಳು”ನ್ನು ಬಹಿರಂಗಪಡಿಸಿದೆ ಎಂದು ಪಕ್ಷವು ಹೇಳಿದೆ.

“ಇದು ಕೇಜ್ರಿವಾಲ್‌ಗೆ ನೀಡಿದ ಜಾಮೀನಿನ ವಿಷಯವಲ್ಲ. ಬಿಜೆಪಿ ನೇತೃತ್ವದ ಕೇಂದ್ರಕ್ಕೆ ತನ್ನ ಸರ್ವಾಧಿಕಾರವನ್ನು ನಿಲ್ಲಿಸುವಂತೆ ನ್ಯಾಯಾಲಯವು ದೊಡ್ಡ ಸಂದೇಶವನ್ನು ನೀಡಿದೆ” ಎಂದು ಹಿರಿಯ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ; ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...