Homeಕರ್ನಾಟಕಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

- Advertisement -
- Advertisement -

‘ಮಾದಿಗ’ ಸಮುದಾಯದ ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವಕನನ್ನು ಗುಡದಪ್ಪ ಮುಳ್ಳಣ್ಣ (21) ಎಂದು ಗುರುತಿಸಲಾಗಿದೆ. ಗ್ರಾಮದ ನಾಗನಗೌಡ, ಯಲ್ಲಪ್ಪ, ಭೀಮಪ್ಪ, ಹನುಮಗೌಡ , ಪ್ರಜ್ವಲ್ ಹಾಗೂ ನವೀನ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ಆರೋಪಿಗಳು ಮಾದಿಗ ಎಂಬ ಕಾರಣಕ್ಕೆ ಗುಡದಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಈ ದಿನ.ಕಾಮ್ ವರದಿ ಮಾಡಿದೆ.

“ಸೆ.9ರಂದು ಬೆಳಗ್ಗೆ ಗ್ರಾಮದ ಕಟ್ಟೆಯ ಮೇಲೆ ಕುಳಿತುಕೊಂಡು ಸಿಗರೇಟ್ ಸೇದುತ್ತಿದ್ದೆ. ಅಲ್ಲಿಗೆ ಬಂದ ವಾಲ್ಮೀಕಿ ಸಮುದಾಯದ ಯುವಕರು ಸಿಗರೇಟ್ ಸೇದಬಾರದು ಎಂದು ನನ್ನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾದರು. ನಾನು ಭಯಗೊಂಡು ಅಲ್ಲಿಂದ ಮನೆ ಕಡೆಗೆ ಹೋದೆ” ಎಂದು ಸಂತ್ರಸ್ತ ಯುವಕ ತಿಳಿಸಿರುವುದಾಗಿ ವರದಿ ಹೇಳಿದೆ.

“ಅದೇ ದಿನ ಸಂಜೆ ಗಣಪತಿ ವಿಸರ್ಜನೆ ವೀಕ್ಷಿಸಲು ಹೋದಾಗ ಮದ್ಯ ಸೇವಿಸಿದ್ದ ಅದೇ ಯುವಕರು ನನ್ನ ಮೇಲೆ ಹಲ್ಲೆ ಮಾಡಿ, ತಲೆಗೆ ಹೊಡೆದಿದ್ದಾರೆ. ಬಳಿಕ ನಾನು ತೊಟ್ಟಿದ್ದ ಬಟ್ಟೆಯನ್ನು ಬಿಚ್ಚಿಸಿದ್ದಾರೆ. ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕೈಗೆ ಸಿಕ್ಕ ಬಡಿಗೆ, ಚಪ್ಪಲಿಯಲ್ಲಿ ಹೊಡೆದಿದ್ದಾರೆ” ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂತ್ರಸ್ತ ಯುವಕ ಗುಡದಪ್ಪ ವಿವರಿಸಿದ್ದಾರೆ. ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿರುವ ಹಲ್ಲೆಗೊಳಗಾದ ಯುವಕ ಗುಡದಪ್ಪ ಮುಳ್ಳಣ್ಣ, “ಮಾದಿಗ ಜಾತಿ ಎಂಬ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಬೆಳಿಗ್ಗೆ ನಾನು ಸಿಗರೇಟ್ ಸೇದಲು ಕುಳಿತಿದ್ದಾಗ ಯುವಕರ ತಂಡ ಸಿಗರೇಟ್ ಸೇದಬಾರದು, ಇಲ್ಲಿಂದ ಹೋಗು ಎಂದಾಗ ಮಾತಿನ ಚಕಮಕಿ ನಡೆದಿತ್ತು. ಅಂದು ಸಂಜೆ 6ರ ಸುಮಾರಿಗೆ ಕಿರಾಣಿ ಅಂಗಡಿಗೆ ತೆರಳುತ್ತಿದ್ದಾಗ ನಾಗನಗೌಡ ಎಂಬಾತ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಆ ಬಳಿಕ ಕಂಬಕ್ಕೆ ಕಟ್ಟಿ, ಸಿಕ್ಕ ಸಿಕ್ಕ ವಸ್ತುವಿನಲ್ಲಿ ಇತರರೂ ಹಲ್ಲೆ ಮಾಡಿದ್ದಾರೆ. ಗಲಾಟೆಯ ವಿಷಯ ತಿಳಿದು ನಮ್ಮ ಕುಟುಂಬಸ್ಥರು ಜಗಳ ಬಿಡಿಸಲು ಬಂದಾಗ, ಅವರನ್ನೂ ಕೂಡ ಅವಾಚ್ಯ ಪದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ತಿಳಿಸಿದ್ದಾನೆ.

ಇದನ್ನೂ ಓದಿ : ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...