Homeಮುಖಪುಟದೆಹಲಿ ಗಲಭೆ ಪ್ರಕರಣ : 10 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣ : 10 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಗೋಕುಲಪುರಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ 10 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ದೆಹಲಿಯ ಕಾರ್ಕರ್ದೂಮ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಸೆಪ್ಟೆಂಬರ್ 12 ರಂದು ಹೊರಡಿಸಿದ ಆದೇಶದಲ್ಲಿ ಮೊಹಮ್ಮದ್ ಶಾನವಾಝ್ ಅಲಿಯಾಸ್ ಶಾನು, ಮೊಹಮ್ಮದ್ ಶೋಯೆಬ್ ಅಲಿಯಾಸ್ ಚುತ್ವಾ, ಶಾರುಖ್, ರಶೀದ್ ಅಲಿಯಾಸ್ ರಾಜಾ, ಆಝಾದ್, ಅಶ್ರಫ್ ಅಲಿ, ಪರ್ವೇಝ್, ಮೊಹಮ್ಮದ್ ಫೈಝಲ್, ರಾಶಿದ್ ಅಲಿಯಾಸ್ ಮೋನು ಮತ್ತು ಮೊಹಮ್ಮದ್ ತಾಹಿರ್ ಅವರ ವಿರುದ್ದದ ಎಲ್ಲಾ ಆರೋಪಗಳನ್ನು ತೆರವುಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಆರೋಪಿಗಳ ವಿರುದ್ದದ ಸಾಕ್ಷ್ಯವು ಅವರನ್ನು ಅಪರಾಧಿಗಳು ಎಂದು ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂದಿರುವ ನ್ಯಾಯಾಧೀಶರು, ಗಲಭೆ, ಬೆಂಕಿ ಹಚ್ಚುವಿಕೆ ಮತ್ತು ಲೂಟಿ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ಮೇಲೆ ದಾಖಲಾಗಿದ್ದ ಪ್ರಕರಣಗಳಿಂದ ಮುಕ್ತಗೊಳಿಸಿದ್ದಾರೆ.

ಫೆಬ್ರವರಿ 24,2020 ರಂದು ಶಿವ ವಿಹಾರ್‌ನ ಬ್ರಿಜ್‌ಪುರಿ ರಸ್ತೆಯ ಚಮನ್ ಪಾರ್ಕ್‌ನಲ್ಲಿ ಸುಮಾರು 1,500 ಜನರ ಗುಂಪು ನನ್ನ ಆಸ್ತಿಯನ್ನು ಧ್ವಂಸಗೊಳಿಸಿದೆ ಎಂದು ಆರೋಪಿಸಿ ನರೇಂದರ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು. ದೂರಿನ ಪ್ರಕಾರ, ಆರೋಪಿಗಳು ಚಿನ್ನ, ಬೆಳ್ಳಿ ಮತ್ತು ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ. ಮನೆಗೆ ಬೆಂಕಿ ಹಚ್ಚಿ ದೊಡ್ಡ ಮಟ್ಟದ ಹಾನಿ ಉಂಟು ಮಾಡಿದ್ದಾರೆ ಎಂದು ನರೇಂದರ್ ಹೇಳಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ಜುಲೈ 14,2020 ರಂದು ಮೊದಲ ಚಾರ್ಜ್‌ಶೀಟ್ ಸಲ್ಲಿಸಿದರು, ನಂತರ ಜನವರಿ ಮತ್ತು ಸೆಪ್ಟೆಂಬರ್ 2023ರಲ್ಲಿ ಪೂರಕ ಆರೋಪ ಪಟ್ಟಿಗಳನ್ನು ಸಲ್ಲಿಸಿದ್ದರು. ಸಾಕ್ಷ್ಯಗಳು ಮತ್ತು ಬಹು ಆರೋಪ ಪಟ್ಟಿಗಳ ಹೊರತಾಗಿಯೂ, ಪ್ರಾಸಿಕ್ಯೂಷನ್ ಆರೋಪಗಳನ್ನು ನಿರ್ಣಾಯಕವಾಗಿ ರುಜುವಾತುಪಡಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಎಲ್ಲಾ 10 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಇದನ್ನೂ ಓದಿ : ದೆಹಲಿ ಗಲಭೆ ಪ್ರಕರಣ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...