Homeಮುಖಪುಟಆಗ್ರಾದಲ್ಲಿ ನಿರಂತರ ಮಳೆ | ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ!

ಆಗ್ರಾದಲ್ಲಿ ನಿರಂತರ ಮಳೆ | ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ!

- Advertisement -
- Advertisement -

ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆಗ್ರಾದ ತಾಜ್ ಮಹಲ್ ಮುಖ್ಯ ಗುಮ್ಮಟ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ. ಗುರುವಾರ ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆ ಆಗಿರುವ ವಿಡಿಯೋ ವೈರಲ್ ಆಗಿತ್ತು. ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿದೆಯಾದರೂ, ಅದಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗುರುವಾರ ಸಂಜೆ ಹೊರಹೊಮ್ಮಿದ 20 ಸೆಕೆಂಡ್‌ಗಳ ವೀಡಿಯೊವು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಇದರಲ್ಲಿ ಸ್ಮಾರಕದ ಉದ್ಯಾನವೊಂದು ಮಳೆ ನೀರಿನಿಂದ ಮುಳುಗಿದ್ದು ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ಮುಖ್ಯಸ್ಥ ರಾಜ್‌ಕುಮಾರ್ ಪಟೇಲ್, “ಹೌದು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ಅದರ ನಂತರ ನಾವು ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ. ನಾವು ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ಬಿರಿಯಾನಿ ತಂದ ವಿದ್ಯಾರ್ಥಿಯ ಅಮಾನತು ಪ್ರಕರಣ | ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆಗೆ ಆದೇಶ

ವಿಡಿಯೊ ಪ್ರವಾಸಿಗರ ಗಮನ ಸೆಳೆದಿದ್ದು, ಹಾಗಾಗಿ ಹಲವಾರು ಜನರು ತಾಜ್ ಮಹಲ್‌ಗೆ ಭೇಟಿ ನೀಡಿ, ಅದರ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ಸರ್ಕಾರಿ ಅನುಮೋದಿತ ಪ್ರವಾಸಿ ಮಾರ್ಗದರ್ಶಿಯಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ನಿವಾಸಿಯೊಬ್ಬರು, “ಸ್ಮಾರಕವನ್ನು ಸರಿಯಾದ ಕಾಳಜಿ ವಹಿಸಿ ನಿರ್ವಹಿಸಬೇಕು. ಏಕೆಂದರೆ ಪ್ರವಾಸೋದ್ಯಮ ಉದ್ಯಮದ ಜನರಿಗೆ ಇದು ಏಕೈಕ ಭರವಸೆಯಾಗಿದೆ” ಎಂದು ಹೇಳಿದರು.

ತಾಜ್ ಮಹಲ್ ಆಗ್ರಾ ಮತ್ತು ಇಡೀ ರಾಷ್ಟ್ರದ ಹೆಮ್ಮೆಯಾಗಿದೆ, ಇದು ನೂರಾರು ಸ್ಥಳೀಯರಿಗೆ ಮತ್ತು ಪ್ರವಾಸೋದ್ಯಮ ಉದ್ಯಮದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗವನ್ನು ನೀಡುತ್ತದೆ ಎಂದು ಸರ್ಕಾರದ ಅನುಮೋದಿತ ಪ್ರವಾಸಿ ಮಾರ್ಗದರ್ಶಿ ಮೋನಿಕಾ ಶರ್ಮಾ ಹೇಳಿದ್ದಾರೆ.

ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯೊಂದು ಮಳೆ ನೀರಿನಿಂದ ಕೊಚ್ಚಿ ಹೋಗಿದ್ದು, ಮಳೆ ನೀರಿನಿಂದ ಬೆಳೆಗಳು ಮುಳುಗಡೆಯಾಗಿದ್ದು, ನಿರಂತರ ಮಳೆಯಿಂದಾಗಿ ನಗರದ ಐಷಾರಾಮಿ ಪ್ರದೇಶಗಳು ನೀರು ನುಗ್ಗಿವೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆಗ್ರಾ ಆಡಳಿತ ಆದೇಶಿಸಿದೆ.

ವಿಡಿಯೊನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...