ಸೆಂಟ್ರಲ್ ಕೋಲ್ಕತ್ತಾ(Kolkata)ದಲ್ಲಿ ಶನಿವಾರ ಸ್ಪೋಟ ಸಂಭವಿಸಿದ್ದು, ಚಿಂದಿ ಆಯುವವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಬ್ಲೋಚ್‌ಮನ್ ಸ್ಟ್ರೀಟ್ ಮತ್ತು ಎಸ್‌ಎನ್ ಬ್ಯಾನರ್ಜಿ ರಸ್ತೆಯ ಕ್ರಾಸಿಂಗ್‌ನಲ್ಲಿ “ಪ್ಲಾಸ್ಟಿಕ್ ಚೀಲದಲ್ಲಿ” ಸ್ಫೋಟ ಸಂಭವಿಸಿದೆ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಗಾಯಗೊಂಡ ವ್ಯಕ್ತಿಯನ್ನು 58 ವರ್ಷದ ಬಾಪಿ ದಾಸ್ ಎಂದು ಗುರುತಿಸಲಾಗಿದೆ. ಅವರು ಎಸ್ ಎನ್ ಬ್ಯಾನರ್ಜಿ ರಸ್ತೆಯ ಪಕ್ಕದ ಫುಟ್‌ಪಾತ್‌ನಲ್ಲಿ ವಾಸಿಸುತ್ತಿದ್ದಾರೆ. ಅವರು ಚಿಂದಿ ಆಯುವವರು” ಎಂದು ಅಧಿಕಾರಿ ಹೇಳಿದ್ದಾರೆ. ಗಾಯಗೊಂಡ ವ್ಯಕ್ತಿಯ ಬಲ ಮಣಿಕಟ್ಟಿಗೆ ಗಾಯಗಳಾಗಿದ್ದು, ನಿಲ್ ರತನ್ ಸಿರ್ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.Kolkata
ಇದನ್ನೂಓದಿ: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎಫ್‌ಐಆರ್ ದಾಖಲು
ಘಟನೆ ಮಧ್ಯಾಹ್ನ 1.45 ರ ಸುಮಾರಿಗೆ ಸಂಭವಿಸಿದೆ ಎಂದು ವರದಿಗಳು ಹೇಳಿವೆ. “ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ತಲುಪಿದೆ. ಅವರು ಬ್ಯಾಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. “ಬಿಡಿಡಿಎಸ್ ಸಿಬ್ಬಂದಿ ಆಗಮಿಸಿ, ಬ್ಯಾಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿ, ಅವರ ಕ್ಲಿಯರೆನ್ಸ್ ನಂತರ, ಸಂಚಾರಕ್ಕೆ ಅವಕಾಶ ನೀಡಲಾಯಿತು” ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ.
ಏತನ್ಮಧ್ಯೆ, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕೋಲ್ಕತ್ತಾ ಪೊಲೀಸರು ಕೋಲ್ಕತ್ತಾದ ಸಾಲ್ಟ್ ಲೇಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನಿಯರ್ ವೈದ್ಯರ ಪ್ರತಿಭಟನಾ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಈ ಹಿಂದೆ, ‘ಅಲ್ಟ್ರಾ-ಲೆಫ್ಟ್ ಮತ್ತು ಲೆಫ್ಟ್’ ಸಂಘಟನೆಗಳು ಪ್ರತಿಭಟನಾನಿರತ ವೈದ್ಯರ ಮೇಲೆ ‘ದಾಳಿ’ ನಡೆಸಲು ತಯಾರಿ ನಡೆಸುತ್ತಿವೆ ಎಂದು ಟಿಎಂಸಿ ಹೇಳಿಕೊಂಡಿತ್ತು.
ಮಂಗಳವಾರ ವೈದ್ಯರಿಗೆ ಕೆಲಸ ಪುನರಾರಂಭಿಸಲು ಸುಪ್ರೀಂ ಕೋರ್ಟ್ ಗಡುವು ವಿಧಿಸಿದ ನಂತರವೂ ಕಿರಿಯ ವೈದ್ಯರು ಕೋಲ್ಕತ್ತಾದ ಸ್ವಾಸ್ಥ್ಯ ಭವನದ ಬಳಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


