ಲಂಚ ಹಾಗೂ ಜಾತಿ ನಿಂದನೆ ಆರೋಪದಡಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನ ನಂಗಲಿ ಎಂಬಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅವರ ವಿರುದ್ಧ ಜಾತಿ ನಿಂದನೆ ಮತ್ತು ಲಂಚ ಪಡೆದ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. ಆರೋಪಿ ಆಂದ್ರಪ್ರದೇಶಕ್ಕೆ ಪರಾರಿಯಾಗಲು ಯತ್ನಿಸತ್ತಿರುವಾಗ ಪೊಲೀಸರು ಅವರ ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅರನ್ನು ಕರ್ನಾಟಕ– ಆಂಧ್ರಪ್ರದೇಶದ ಗಡಿಯಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ವರದಿಗಳು ಹೇಳಿವೆ. ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಇದನ್ನೂಓದಿ: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ : ಬಿಜೆಪಿ ಶಾಸಕನ ವಿರುದ್ದ ಎಫ್‌ಐಆರ್ ದಾಖಲು
ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ನೀಡಿದ ದೂರು ಆಧರಿಸಿ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಈ ಪ್ರಕರಣ ದಾಖಲಿಸಲಾಗಿತ್ತು. ಜೊತೆಗೆ ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕನ ವಿರುದ್ಧ ಮತ್ತೊಂದು ಎಫ್‌ಐಆರ್ ಕೂಡಾ ದಾಖಲಾಗಿತ್ತು. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.
ಈ ನಡುವೆ, ಮುನಿರತ್ನ ವಿರುದ್ಧ ಲಂಚ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಬಿಜೆಪಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋಪದ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಕೇಳಿದ್ದಾರೆ. ನೋಟಿಸ್ ತಲುಪಿದ 5 ದಿನಗಳ ಒಳಗಾಗಿ ಶಿಸ್ತು ಸಮಿತಿ ಮುಂದೆ ಹಾಜರಾಗಿ ಸ್ಪಷ್ಟಿಕರಣ ನೀಡಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


