Homeಮುಖಪುಟಪ್ರತಿಭಟನಾನಿರತ ವೈದ್ಯರ ಮೇಲೆ ಹಲ್ಲೆಗೆ ಸಂಚು ಎಂದು ಟಿಎಂಸಿ ಆರೋಪಿಸಿದ ನಂತರ ಸಿಪಿಐ(ಎಂ) ಮುಖಂಡ ಸೇರಿ...

ಪ್ರತಿಭಟನಾನಿರತ ವೈದ್ಯರ ಮೇಲೆ ಹಲ್ಲೆಗೆ ಸಂಚು ಎಂದು ಟಿಎಂಸಿ ಆರೋಪಿಸಿದ ನಂತರ ಸಿಪಿಐ(ಎಂ) ಮುಖಂಡ ಸೇರಿ ಇಬ್ಬರ ಬಂಧನ!

- Advertisement -
- Advertisement -

ಕೋಲ್ಕತ್ತಾದಲ್ಲಿ ಪ್ರತಿಭಟನಾ ನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಟಿಎಂಸಿ ನಾಯಕ ಆರೋಪಿಸಿದ ನಂತರ ಪೊಲೀಸರು ಸಿಪಿಐ(ಎಂ) ನಾಯಕ ಕಲಾತನ್ ದಾಸ್‌ಗುಪ್ತ ಸೇರಿ ಇಬ್ಬರನ್ನು ಶನಿವಾರ ಬಂಧಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಪಿಐ(ಎಂ) ನಾಯಕರು “ಪೊಲೀಸರು ಪ್ರತಿಭಟನೆ ನಡೆಸುವವರ ಬೇಡಿಕೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಪಿತೂರಿಯಾಗಿದ್ದು, ಆರ್ ಜಿ ಕರ್ ಪ್ರಕರಣದಲ್ಲಿ ನ್ಯಾಯ ಕೇಳುವವರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯದ ಮಮತಾ ಬ್ಯಾನರ್ಜಿ ಸರ್ಕಾರದ ಮಾನಹಾನಿ ಮಾಡುವ ಉದ್ದೇಶದಿಂದ ಸಾಲ್ಟ್ ಲೇಕ್‌ನಲ್ಲಿರುವ ಸ್ವಾಸ್ಥ್ಯ ಭವನದ ಹೊರಗೆ ಪ್ರತಿಭಟನಾ ನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂದು ಆರೋಪಿಸಿ ಟಿಎಂಸಿ ನಾಯಕ ಕುನಾಲ್ ಘೋಷ್ ಅವರು ದೂರವಾಣಿ ಕರೆಯ ಆಡಿಯೋ ಕ್ಲಿಪ್ ಅನ್ನು ಬಿಡುಗಡೆ ಮಾಡಿದ್ದರು. ಈ ಘಟನೆ ನಂತರ ಸಿಪಿಐಎಂ ನಾಯಕರನ್ನು ಬಂಧಿಸಲಾಗಿದೆ. ಆಡಿಯೋ ಕ್ಲಿಪ್‌ಗೆ ಸಂಬಂಧಿಸಿದಂತೆ ಬಿಧಾನನಗರ ಪೊಲೀಸ್ ಕಮಿಷನರೇಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ತನಿಖೆಯ ಸಮಯದಲ್ಲಿ, ಸಂಜಿಬ್ ದಾಸ್ ಎಂದು ಗುರುತಿಸಲಾದ ವ್ಯಕ್ತಿಯನ್ನು ನಿನ್ನೆ ರಾತ್ರಿ ದಕ್ಷಿಣ ಕೋಲ್ಕತ್ತಾದ ಕಸ್ಬಾದ ಹಲ್ತು ಪ್ರದೇಶದಿಂದ ಈ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿಯಾಗಿದೆ. ಆಡಿಯೋ ಕ್ಲಿಪ್‌ನಲ್ಲಿ ಧ್ವನಿ ಕೇಳಿದ ಇಬ್ಬರಲ್ಲಿ ಸಂಜೀಬ್ ದಾಸ್ ಒಬ್ಬರು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ:ಲಂಚ ಮತ್ತು ಜಾತಿ ನಿಂದನೆ | ಹಿರಿಯ ಬಿಜೆಪಿ ಶಾಸಕ ಮುನಿರತ್ನ ಬಂಧನ

ಕಲಾತನ್ ಮತ್ತು ಪಕ್ಷದ ಇನ್ನೊಬ್ಬ ಸಹೋದ್ಯೋಗಿ ಲಾಲ್‌ಬಜಾರ್‌ನಲ್ಲಿರುವ ಕೋಲ್ಕತ್ತಾ ಪೊಲೀಸ್ ಪ್ರಧಾನ ಕಛೇರಿಯ ಪಕ್ಕದಲ್ಲಿರುವ ಮಧ್ಯ ಕೋಲ್ಕತ್ತಾದ ಫಿಯರ್ಸ್ ಲೇನ್‌ನಲ್ಲಿ ಎಡರಂಗದ ರಾತ್ರಿಯ ಧರಣಿ ಪ್ರತಿಭಟನೆಯಿಂದ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಅವರನ್ನು ಮಧ್ಯದಲ್ಲಿ ತೆಡೆದು ವಶಕ್ಕೆ ಪಡೆಯಲಾಗಿತ್ತು. ಅವರನ್ನು ಆರಂಭದಲ್ಲಿ ವಿಚಾರಣೆಗಾಗಿ ವಶಕ್ಕೆ ಪಡೆದು, ನಂತರ ಬಂಧಿಸಲಾಯಿತು.

ಕಲಾತನ್‌ ಅವರನ್ನು ಬಂಧಿಸಿದ ಕೂಡಲೇ ಎಲೆಕ್ಟ್ರಾನಿಕ್ಸ್ ಕಾಂಪ್ಲೆಕ್ಸ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಸಂಜೀಬ್ ದಾಸ್ ಜೊತೆಗೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಆಡಿಯೊ ಕ್ಲಿಪ್‌ನ ತಾಂತ್ರಿಕ ಮೌಲ್ಯಮಾಪನವನ್ನು ಮಾಡಿದ್ದೇವೆ ಮತ್ತು ತಜ್ಞರಿಂದ ಅಭಿಪ್ರಾಯವನ್ನು ತೆಗೆದುಕೊಂಡಿದ್ದೇವೆ. ಆಡಿಯೋ ಕ್ಲಿಪ್‌ನಲ್ಲಿರುವ ಒಂದು ಧ್ವನಿ ತನಗೆ ಸೇರಿದ್ದು ಎಂದು ಸಂಜಿಬ್ ದಾಸ್ ಈಗಾಗಲೇ ಒಪ್ಪಿಕೊಂಡಿದ್ದಾರೆ. ನಾವು ಇಬ್ಬರನ್ನೂ ಕಸ್ಟಡಿಗೆ ಕೋರುತ್ತೇವೆ” ಎಂದು ಬಿಧಾನನಗರದ ಉಪ ಪೊಲೀಸ್ ಆಯುಕ್ತ ಅನೀಶ್ ಸರ್ಕಾರ್ ಹೇಳಿದ್ದಾರೆ. ಕ್ಲಿಪ್‌ನಲ್ಲಿ ಹೆಸರಿಸಲಾದ ‘ಬಪ್ಪಾ’, ‘ಸಾಹೇಬ್’ ಮತ್ತು ‘ದಾದು’ ಅವರನ್ನು ಗುರುತಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಂಧಿತ ಇಬ್ಬರನ್ನೂ ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಕೋರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಠಾಣೆಯೊಳಗೆ ಕರೆದೊಯ್ಯುವಾಗ ಮಾತನಾಡಿದ ಬಂಧಿತ ಸಿಪಿಐ(ಎಂ) ಮುಖಂಡ ಕಲಾತಾನ್ ಅವರು, “ಆರ್‌ಜಿ ಕರ್ ಮೆಡಿಕ್ ಅತ್ಯಾಚಾರ ಮತ್ತು ಕೊಲೆಗೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದೇವೆ. ಪೊಲೀಸರು ಬೇಡಿಕೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸತ್ತಿದ್ದಾರೆ. ಇದು ನನ್ನ ವಿರುದ್ಧದ ಪಿತೂರಿ” ಎಂದು ಆರೋಪಿಸಿದ್ದಾರೆ.

ಇದನ್ನೂಓದಿ:ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

“ಇದು ಪೊಲೀಸರ ಅಪಕ್ವ ನಡೆ. ರಾಜ್ಯ ಪೊಲೀಸರು ಮೊದಲು ಟಿಎಂಸಿ ನಾಯಕ ಕುನಾಲ್ ಘೋಷ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಬೇಕು. ಅವರು ಈ ಕ್ಲಿಪ್ ಹೇಗೆ ಪಡೆದರು ಎಂಬುದನ್ನು ಕಂಡುಹಿಡಿಯಬೇಕು. ಅದರ ಬದಲು ಆರ್ ಜಿ ಕರ್ ಪ್ರಕರಣದಲ್ಲಿ ನ್ಯಾಯ ಕೇಳುವವರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ಇದರ ಅಂತ್ಯವನ್ನು ನಾವು ನೋಡಲಿದ್ದೇವೆ” ಎಂದು ಕೋಲ್ಕತ್ತಾದ ಮಾಜಿ ಮೇಯರ್ ಮತ್ತು ಸಿಪಿಐ(ಎಂ) ರಾಜ್ಯಸಭಾ ಸಂಸದ ಬಿಕಾಶ್ ಭಟ್ಟಾಚಾರ್ಯ ಹೇಳಿದ್ದಾರೆ.

ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿದ ಅವರು, ಪಿತೂರಿ ಎಷ್ಟು ಆಳವಾಗಿದೆ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ. ಸಿಪಿಐ(ಎಂ) ನಾಯಕರಾದ ಸುಜನ್ ಚಕ್ರವರ್ತಿ ಮತ್ತು ಸತರುಪ್ ಘೋಷ್ ಅವರು ಕಲಾತನ್ ದಾಸ್‌ಗುಪ್ತಾ ಬಂಧನವನ್ನು ಟೀಕಿಸಿದ್ದು, ಆಡಿಯೊ ಕ್ಲಿಪ್ ಅನ್ನು ಎಐ ತಂತ್ರಜ್ಞಾನವನ್ನು ಬಳಸಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಭದ್ರತೆ ಮತ್ತು ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳನ್ನು ವಜಾಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳೊಂದಿಗೆ ವೈದ್ಯಾಧಿಕಾರಿಗಳು ಮಂಗಳವಾರದಿಂದ ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ಮೊಕ್ಕಾಂ ಹೂಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...