Homeಮುಖಪುಟಮಧ್ಯಪ್ರದೇಶ | ಸೇನಾ ಅಧಿಕಾರಿಯಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ; ಬಂಧನ

ಮಧ್ಯಪ್ರದೇಶ | ಸೇನಾ ಅಧಿಕಾರಿಯಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ; ಬಂಧನ

- Advertisement -
- Advertisement -

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸೇನಾ ಅಧಿಕಾರಿಯನ್ನು ಇಂದೋರ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಆರೋಪಿಯು ಸೇನೆಯ ನಾಯಕ್ ಶ್ರೇಣಿಯ ಅಧಿಕಾರಿಯಾಗಿದ್ದು, ಮಹಿಳೆ ತನ್ನ ವಿರುದ್ಧ ಮಾಡಿರುವ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದೋರ್ ಮಹಿಳಾ ಠಾಣೆಯ ತಂಡವು ಎಂಐಜಿ ಪ್ರದೇಶದ ಐಷಾರಾಮಿ ಹೋಟೆಲ್‌ನಿಂದ ಅಧಿಕಾರಿಯನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದೋರ್‌ನಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಪತ್ನಿಯಾಗಿರುವ ಮಹಿಳೆ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಪ್ರತಿಭಟನಾನಿರತ ವೈದ್ಯರ ಮೇಲೆ ಹಲ್ಲೆಗೆ ಸಂಚು ಎಂದು ಟಿಎಂಸಿ ಆರೋಪಿಸಿದ ನಂತರ ಸಿಪಿಐ(ಎಂ) ಮುಖಂಡ ಸೇರಿ ಇಬ್ಬರ ಬಂಧನ! 

ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸ್ ತಂಡವು ಹೋಟೆಲ್ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾಗಿ ಇಂದೋರ್ ಮಹಿಳಾ ಠಾಣಾ ಉಸ್ತುವಾರಿ ಕೌಶಲ್ಯ ಚೌಹಾಣ್ ಹೇಳಿದ್ದಾರೆ. ಪೂರ್ವ ಯುಪಿ ಮೂಲದ ಸೇನಾಧಿಕಾರಿಯನ್ನು ಕಳೆದ ವರ್ಷ ಇಂದೋರ್ ಜಿಲ್ಲೆಯ ಮೊವ್ ಕಂಟೋನ್ಮೆಂಟ್ ಪಟ್ಟಣದಲ್ಲಿ ನಿಯೋಜಿಸಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಧ್ಯಪ್ರದೇಶ

ಇಂದೋರ್‌ನಲ್ಲಿ ನಿಯೋಜನೆಯಾಗಿದ್ದ ವೇಳೆ ವಿವಾಹಿತ ಮಹಿಳೆಯನ್ನು ಭೇಟಿಯಾಗಿದ್ದ ಸೇನಾ ಅಧಿಕಾರಿ ಸ್ನೇಹ ಸಂಪಾದಿಸಿದ್ದರು. ಅದಾಗ್ಯೂ, ಆರೋಪಿಯು ತನ್ನ ಆಕ್ಷೇಪಾರ್ಹ ವಿಡಿಯೋ ಹೊಂದಿದ್ದು, ಅದನ್ನು ಬಳಸಿ ಬಲವಂತವಾಗಿ ದೈಹಿಕ ಸಂಬಂಧ ಒತ್ತಾಯಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ.

ಶುಕ್ರವಾರ, ಇಂದೋರ್‌ನ ಹೋಟೆಲ್‌ಗೆ ಬರುವಂತೆ ಹೇಳಿ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಕೆಯ ಖಾಸಗಿ ಜಾಗದಲ್ಲಿ ಗ್ಲಾಸ್ ತೂರಿಸಲು ಯತ್ನಿಸಿದ್ದಾನೆ ಎಂದು ಮಹಿಳಾ ಠಾಣಾ ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಆರೋಪಿಯು ಆರೋಪಗಳನ್ನು ನಿರಾಕರಿಸಿದ್ದು, ತಾನು ಮತ್ತು ಮಹಿಳೆ ಸಮ್ಮತಿಯ ಲೈಂಗಿಕ ಸಂಬಂಧವನ್ನು ಹೊಂದಿದ್ದೇವೆ ಎಂದು ಹೇಳಿಕೊಂಡಿದ್ದಾನೆ.

ವೀಡಿಯೊನೋಡಿ: ಬಹಳ ಚೆಂದ ಹಾಡಿದ್ದೀರಿ ಮತ್ತು ಜೀವ ತುಂಬಿದ್ದೀರಿ ನಿಮಗೆ ಶರಣು ರಮೇಶ್ ಗಬ್ಬೂರ್ ಸರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...