ಉತ್ತರ ಪ್ರದೇಶದ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರ ಅಧಿಕೃತ ಎಕ್ಸ್ ಹ್ಯಾಂಡಲ್ ಖಾತೆಯನ್ನು ಹ್ಯಾಕ್ ಮಾಡಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಪಪ್ಪು’ ಎಂದು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಸೋಹನ್ ಸಿಂಗ್ (34) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 14 ರಂದು ಆತನನ್ನು ಬಂಧಿಸಲಾಗಿದ್ದು, ಆಕ್ಷೇಪಾರ್ಹ ಕಾಮೆಂಟ್ ಮಾಡಿದ ಆರೋಪದ ಮೇಲೆ ಆತನ ಮೊಬೈಲ್ ಫೋನ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
“ಗೌತಮ್ ಬುದ್ಧ ನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ, ಅನುಚಿತ/ರಾಜಕೀಯ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ನೋಯ್ಡಾ ಸೆಕ್ಟರ್ 20 ಪೊಲೀಸರು ಬಂಧಿಸಿದ್ದಾರೆ” ಎಂದು ನೋಯ್ಡಾ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 13 ರಂದು, ಗೌತಮ್ ಬುದ್ಧ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮನೀಶ್ ವರ್ಮಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ವಿವಾದದ ನಂತರ ವರ್ಮಾ ಸ್ಪಷ್ಟನೆ ನೀಡಿದ್ದು, ಕೆಲವು ಸಮಾಜವಿರೋಧಿಗಳು ತಮ್ಮ ಎಕ್ಸ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಪೋಸ್ಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
“ಇದನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಎಫ್‌ಐಆರ್ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ, ತಪ್ಪು ಟ್ವೀಟ್/ಕಾಮೆಂಟ್ ಕುರಿತು ಸೈಬರ್ ಸೆಲ್ ತನಿಖೆ ನಡೆಸುತ್ತಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರು ತಮ್ಮ ಸಂಭಾಷಣೆಯ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು “ಇತಿಹಾಸವನ್ನು ರಚಿಸಲಾಗಿದೆ ಮತ್ತು ಬದಲಾಯಿಸಲಾಗುವುದಿಲ್ಲ. ನರೇಂದ್ರ ಮೋದಿ ಅವರಿಗೆ ಇತಿಹಾಸವು ಹೇಗೆ ನೆನಪಿಸಿಕೊಳ್ಳುತ್ತದೆ ಎಂದು ತಿಳಿದಿದೆ ಮತ್ತು ಅದಕ್ಕಾಗಿಯೇ ಅವರು ಚಿಂತಿತರಾಗಿದ್ದಾರೆ ಎಂದು ಹೇಳಿದ್ದರು.
ಅವರ ಗೌತಮ್ ಬುಧ್ ನಗರ ಜಿಲ್ಲಾ ಮ್ಯಾಜಿಸ್ಟ್ರೇಟ್‌ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ಕಾಮೆಂಟ್ ಮಾಡಲಾಗಿತ್ತು. ನಂತರ, ಅದನ್ನು ಅಳಿಸಲಾಗಿದೆ. “ನೀವು ನಿಮ್ಮ ಬಗ್ಗೆ ಮತ್ತು ನಿಮ್ಮ ಪಪ್ಪು ಬಗ್ಗೆ ಯೋಚಿಸಬೇಕು” ಎಂದು ಹಿಂದಿಯಲ್ಲಿ ಪ್ರತಿಕ್ರಿಯಿಸಿದ್ದರು.
ಆಕ್ಷೇಪಾರ್ಹ ಕಾಮೆಂಟ್‌ಗಳಿಂದ ಕೋಪಗೊಂಡ ಶ್ರೀನಾಟೆ, ಅಳಿಸಲಾದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. “ಅವರು ಡಿಎಂ ನೋಯ್ಡಾ, ಅವರು ಇಡೀ ಜಿಲ್ಲೆಗೆ ಜವಾಬ್ದಾರರು, ಅವರು ದೇಶದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷೆ ಮತ್ತು ಆಲೋಚನೆಗಳನ್ನು ನೋಡಬೇಕು” ಎಂದು ಹೇಳಿದರು.
“ಆಡಳಿತಾತ್ಮಕ ಸಿಬ್ಬಂದಿ ಸಂಘಿಗಳಿಂದ ತುಂಬಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈಗ ಅವರು ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತು ದ್ವೇಷವನ್ನು ಹೆಚ್ಚಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದರು.
ಇದನ್ನೂ ಓದಿ; ‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್ ಜೊತೆ…’


