ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ಮುಂದಿನ ದೆಹಲಿ ಮುಖ್ಯಮಂತ್ರಿ ಯಾರು? ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಗೇಮ್ ಪ್ಲಾನ್ ಏನು ಎಂಬ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ಅದಾಗ್ಯೂ, ಅವರ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರ ಕಡೆಗೆ ಎಲ್ಲರ ಚಿತ್ರ ಹೊರಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪಕ್ಷದ ವರಿಷ್ಠರಾಗಿರುವ ಕೇಜ್ರಿವಾಲ್ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ ಒಂದು ದಿನದ ನಂತರ ಸೋಮವಾರ ಮನೀಶ್ ಸಿಸೋಡಿಯಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಕೇಜ್ರಿವಾಲ್ ಅವರು ರಾಜೀನಾಮೆ ನೀಡುವ ವೇಳೆ, ಜನರು ತನಗೆ “ಪ್ರಾಮಾಣಿಕತೆಯ ಪ್ರಮಾಣಪತ್ರ” ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂಓದಿ:ಜಿಲ್ಲಾ ಮ್ಯಾಜಿಸ್ಟ್ರೇಟ್ ‘ಎಕ್ಸ್’ ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್; ವ್ಯಕ್ತಿ ಬಂಧನ
ದೆಹಲಿ ಅಸೆಂಬ್ಲಿಯ ಅವಧಿಯು ಫೆಬ್ರವರಿ 23, 2025 ರಂದು ಕೊನೆಗೊಳ್ಳಲಿದ್ದು, ಚುನಾವಣೆಯು ಫೆಬ್ರವರಿ ಆರಂಭದಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ರಾಜೀನಾಮೆಯನ್ನು ಘೋಷಿಸಿದ ನಂತರ ಹೊಸ ಮುಖ್ಯಮಂತ್ರಿಯನ್ನು ನೇಮಿಸಲಾಗುವುದು ಮತ್ತು ಇನ್ನೆರಡು ದಿನಗಳಲ್ಲಿ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಸೋಡಿಯಾ-ಕೇಜ್ರಿವಾಲ್ ಭೇಟಿಯಾಗಲಿದ್ದು, ಈ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. “ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ” ಎಂದು ಎಎಪಿಯ ನಾಯಕರ ಹೇಳಿಕೆಯನ್ನ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ರಾಜೀನಾಮೆ ಘೋಷಿಸುವ ವೇಳೆ ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು,”ನಾವು ಪ್ರಾಮಾಣಿಕರು ಎಂದು ಜನರು ಹೇಳಿದಾಗ ಮಾತ್ರ ನಾನು ಮುಖ್ಯಮಂತ್ರಿಯಾಗುತ್ತೇನೆ ಮತ್ತು ಮನೀಶ್ ಸಿಸೋಡಿಯಾ ಅವರ ಉಪ ಉಖ್ಯಮಂತ್ರಿಯಾಗಲಿದ್ದಾರೆ” ಎಂದು ಹೇಳಿದ್ದಾರೆ.
ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


