Homeಕರ್ನಾಟಕರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

ರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

- Advertisement -
- Advertisement -

ರಾಜ್ಯಾದ್ಯಂತ ಸುಮಾರು 2000 ಸರ್ಕಾರಿ ವೈದ್ಯರ ಹುದ್ದೆಗಳು ಭರ್ತಿಯಾಗದೆ ಹಾಗೆ ಬಿದ್ದಿವೆ ಎಂದು TNIE ವರದಿ ಶನಿವಾರ ಹೇಳಿವೆ. ಇದರಿಂದಾಗಿ ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳು ತೀವ್ರ ಬಿಕ್ಕಟ್ಟಿಗೆ ಸಿಲುಕಿವೆ ಎಂದು ವರದಿ ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷ ವೈದ್ಯಕೀಯ ಅಧಿಕಾರಿಗಳು ಮತ್ತು ಇತರರು ಸೇರಿದಂತೆ 744 ತಜ್ಞರು, 613 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು ಮತ್ತು 558 ವೈದ್ಯಕೀಯ ವೃತ್ತಿಪರರ ಕೊರತೆಯಿದೆ ಎಂದು ಜೂನ್‌ವರೆಗಿನ ಅಂಕಿ ಅಂಶಗಳು ಸೂಚಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ದಂತ ವೈದ್ಯಕೀಯ ವಿಭಾಗದಲ್ಲಿಯೂ ಒಟ್ಟು 425 ಮಂಜೂರಾದ ಹುದ್ದೆಗಳಲ್ಲಿ 25 ಹುದ್ದೆಗಳು ಖಾಲಿ ಇವೆ ಎಂದು ಅವರು ಹೇಳಿದೆ.

ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕೆಲಸ ಮಾಡುತ್ತಿರುವುದಾಗಿ ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಹೇಳಿದ್ದಾಗಿ ವರದಿ ತಿಳಿಸಿದೆ. “ಆದರೆ, ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ನೀತಿಗಳನ್ನು ವ್ಯಾಖ್ಯಾನಿಸುವ ಸ್ಪಷ್ಟ ನೀತಿಗಳ ಕೊರತೆ ಇದಕ್ಕೆ ಸಹಾಯ ಮಾಡುತ್ತಿಲ್ಲ” ಅವರು ವಿಷಾದಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಗಳು ನಡೆಯುತ್ತಿದ್ದರೂ, ಸಾರ್ವಜನಿಕ ವಲಯಕ್ಕೆ ಅಭ್ಯರ್ಥಿಗಳನ್ನು ಆಕರ್ಷಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರು ಸಾಮಾನ್ಯವಾಗಿ ಆರೋಗ್ಯ ಶ್ರುಶ್ರೋಷಕರು ಮತ್ತು ನಿರ್ವಾಹಕರ ದ್ವಿಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ದೆಹಲಿ ಮುಂದಿನ ಮುಖ್ಯಮಂತ್ರಿ ಯಾರು? | ಸಿಸೋಡಿಯಾರತ್ತ ಎಲ್ಲರ ಚಿತ್ತ!

“ಗ್ರಾಮೀಣ ಭಾಗದ ವೈದ್ಯರು ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸುವ ಹೆಚ್ಚುವರಿ ಒತ್ತಡವನ್ನು ಎದುರಿಸುತ್ತಾರೆ. ಇದು ರೋಗಿಗಳ ಆರೈಕೆಯಿಂದ ಕ್ಲಿನಿಕಲ್ ಅಲ್ಲದ ಆಡಳಿತಾತ್ಮಕ ಕಾರ್ಯಗಳಿಗೆ ವೈದ್ಯರ ಗಮನವನ್ನು ತಿರುಗಿಸುತ್ತದೆ. ಇದು ರೋಗಿಗಳ ಆರೈಕೆಯ ಮೇಲೆ ಪರಿಣಾಮ ಬೀರುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರಾಗಿ ಹುದ್ದೆಗಳನ್ನು ವಹಿಸಿಕೊಳ್ಳುವುದನ್ನು ನಿರುತ್ಸಾಹಗೊಳಿಸುತ್ತದೆ. ಜೊತೆಗೆ ಈ ಒತ್ತಡ ಅವರ ವೈದ್ಯಕೀಯ ಕೌಶಲ್ಯಗಳನ್ನು ನಿರಾಕರಿಸುತ್ತದೆ ಎಂದು ಹಲವಾರು ವೈದ್ಯರು ಭಾವಿಸುತ್ತಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ವೈದ್ಯಕೀಯ ವೃತ್ತಿಪರರ ಆಸಕ್ತಿಯ ಕೊರತೆಯ ಕಾರಣಕ್ಕೆ ತಾತ್ಕಾಲಿಕವಾಗಿ ಈ ಅಂತರವನ್ನು ತುಂಬಲು ಅಲ್ಪಾವಧಿಯ ನೇಮಕಾತಿಯನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ನಿರ್ದಿಷ್ಟವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅವರು ಎದುರಿಸುತ್ತಿರುವ ಸವಾಲುಗಳು ಆಡಳಿತಾತ್ಮಕ ಹೊರೆಯನ್ನು ಮೀರಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಸೌಲಭ್ಯಗಳ ಕೊರತೆ, ಕಳಪೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯು ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ವೈದ್ಯರೊಬ್ಬರು ಮಾತನಾಡಿ, ಹಲವು ಗ್ರಾಮೀಣ ಆರೋಗ್ಯ ಕೇಂದ್ರಗಳು ಸೀಮಿತ ಸಂಪನ್ಮೂಲಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ ನೀಡುವುದು ಕಷ್ಟಕರವಾಗಿದೆ. ಸಿಬ್ಬಂದಿ ವಾಸಿಸುವ ಕ್ವಾರ್ಟರ್ಸ್‌ಗಳು ಸಾಮಾನ್ಯವಾಗಿ ಕೆಳದರ್ಜೆಯದ್ದಾಗಿರುತ್ತವೆ. ಮೂಲಭೂತ ಸೌಕರ್ಯಗಳ ಲಭ್ಯತೆ ಮತ್ತು ಅವರ ಮಕ್ಕಳಿಗೆ ಉತ್ತಮ ಶಾಲೆಗಳ ಲಭ್ಯತೆ ಸೀಮಿತವಾಗಿರುತ್ತದೆ. ಈ ಕಾರಣಕ್ಕಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರಲ್ಲಿ ಹಿಂಜರಿಯುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...