ಪ್ರತಿಭಟನಾನಿರತ ವೈದ್ಯರೊಂದಿಗೆ ಎರಡು ಬಾರಿ ನಡೆದ ಮಾತುಕತೆ ವಿಫಲಗೊಂಡ ನಂತರವೂ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪಶ್ಚಿಮ ಬಂಗಾಳ ಸರ್ಕಾರವು ಮತ್ತೊಮ್ಮೆ ವೈದ್ಯರನ್ನು ಸಂಪರ್ಕಿಸಿದೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್ ಅವರು ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿದ್ದು, “ಸಭೆಗೆ ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ” ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆದರೆ ಸಭೆಯನ್ನು ವೀಡಿಯೊಗ್ರಾಫ್ ಮಾಡಲು ಅಥವಾ ಲೈವ್-ಸ್ಟ್ರೀಮ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ. ಇದೇ ಕಾರಣಕ್ಕೆ ಹಿಂದಿನ ಸಭೆಗಳು ರದ್ದಾಗಿದ್ದವು.
“ಇದು ಐದನೇ ಮತ್ತು ಕೊನೆಯ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ನಿಮ್ಮ ಪ್ರತಿನಿಧಿಗಳ ನಡುವಿನ ಸಭೆಗಾಗಿ ನಾವು ನಿಮ್ಮನ್ನು ಸಂಪರ್ಕಿಸುತ್ತಿದ್ದೇವೆ. ಹಿಂದಿನ ದಿನದ ನಮ್ಮ ಚರ್ಚೆಗೆ ಅನುಗುಣವಾಗಿ, ನಾವು ಮತ್ತೊಮ್ಮೆ ಮಾನ್ಯ ಮುಖ್ಯಮಂತ್ರಿಗಳೊಂದಿಗಿನ ಸಭೆಗೆ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ. ಅವರು ಕಾಳಿಘಾಟ್ ನಿವಾಸದಲ್ಲಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲಿದ್ದಾರೆ” ಎಂದು ಪತ್ರದಲ್ಲಿ ಆಹ್ವಾನಿಸಲಾಗಿದೆ.
ಇದನ್ನೂಓದಿ: ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು
ಏತನ್ಮಧ್ಯೆ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಸೋಮವಾರ ಕೂಡಾ ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ. ವೈದ್ಯರ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ತಮ್ಮ ಕೆಲಸ ತೊರೆದು ನಡೆಸುತ್ತಿರುವ 36 ನೇ ದಿನದ ಮುಷ್ಕರವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ತಮ್ಮ ಧರಣಿ ನಡೆಸುವ ಮೂಲಕ ಮುಂದುವರೆಸಿದ್ದಾರೆ. ಅವರು ತಮ್ಮ ಬೇಡಿಕೆಗಳಾದ ಕೋಲ್ಕತ್ತಾ ಪೊಲೀಸ್ ಕಮಿಷನರ್ ಮತ್ತು ಹಿರಿಯ ರಾಜ್ಯ ಆರೋಗ್ಯ ಅಧಿಕಾರಿಗಳನ್ನು ವಜಾಗೊಳಿಸುವವರೆಗೂ ಮುಂದುವರಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸುತ್ತೇವೆ. ರಾಜ್ಯ ಸರಕಾರ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಧರಣಿ ನಿರತ ಕಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಭಟನಾ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ವೈದ್ಯರಿಗೆ ಅವರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಿಂದ ಸ್ನಾತಕೋತ್ತರ ಮಹಿಳಾ ವೈದ್ಯರ ಶವ ಪತ್ತೆಯಾಗಿತ್ತು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆ ನಡೆಸುತ್ತಿದೆ.
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


