ಚಿಕ್ಕಮಗಳೂರಿನ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುವ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದಕ್ಕಾಗಿ ಪೊಲೀಸರು ನಾಲ್ವರು ಅಪ್ರಾಪ್ತರನ್ನು ಸೋಮವಾರ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ ಮಿನಟ್ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಬಂಧಿತ ಅಪ್ರಾಪ್ತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಹುಡುಗರು ಪ್ಯಾಲೆಸ್ತೀನ್ ಧ್ವಜ ಹೇಗೆ ಪಡೆದರು ಮತ್ತು ಧ್ವಜವನ್ನು ಹಿಡಿದುಕೊಂಡು ನಗರದಾದ್ಯಂತ ಸಂಚಾರ ಮಾಡಲು ಅವರಿಗೆ ಯಾರಾದರೂ ಸೂಚಿಸಲಾಗಿದೆಯೇ ಅಥವಾ ಅವರು ಸ್ವಯಂ ಪ್ರೇರಿತರಾಗಿ ಇದನ್ನು ಮಾಡಿದ್ದಾರೆಯೆ ಎಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.
ಇದನ್ನೂಓದಿ: ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಸಲಿರುವ ರಾಜ್ಯ ಸರ್ಕಾರ
ಘಟನೆಯ ತನಿಖೆಗಾಗಿ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚಿಸಲಾಗಿದೆ. ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಲಂಕುಷವಾಗಿ ತನಿಖೆ ನಡೆಸುತ್ತಿದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಾಗಲಿರುವುದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ವಯಸ್ಕ ಬಾಲಕರು ದ್ವಿಚಕ್ರ ವಾಹನದಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಬೀಸುತ್ತಾ ತೆರಳಿದ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನಲೆ ಅಧಿಕಾರಿಗಳು ಘಟನೆಯ ವೀಡಿಯೋವನ್ನು ಪಡೆದುಕೊಂಡು ತನಿಖೆ ನಡೆಸಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದ ಹಿಂಸಾಚಾರದ ನಂತರ ರಾಜ್ಯದಲ್ಲಿ ಸಂಭವಿಸಿದ ಸೂಕ್ಷ್ಮ ಪರಿಸ್ಥಿತಿಯ ಹಿನ್ನಲೆ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಅವರು ಈ ಘಟನೆಯನ್ನು ಖಂಡಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಗೆ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಶಾಂತಿ ಕದಡುವ ಸಂಘಟಿತ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, “ಅಂತರರಾಜ್ಯ ಮತ್ತು ಅಂತರಾಷ್ಟ್ರೀಯ ಸಂಪರ್ಕಗಳನ್ನು ಹೊಂದಿದೆ ಎಂದು ನಂಬಲಾದ ಈ ಸಂಘಟಿತ ಮತ್ತು ಪ್ರಾಯೋಜಿತ ಜಾಲವನ್ನು ಭೇದಿಸಲು ಸ್ಥಳೀಯ ಪೊಲೀಸರಿಗೆ ಕಷ್ಟವಾಗುತ್ತಿದೆ. ಆದ್ದರಿಂದ, ಮುಂದಿನ ತನಿಖೆಗಾಗಿ ಈ ಪ್ರಕರಣಗಳನ್ನು ತಕ್ಷಣ ಎನ್‌ಐಎಗೆ ಒಪ್ಪಿಸುವಂತೆ ನಾನು ಗೃಹ ಸಚಿವ ಜಿ ಪರಮೇಶ್ವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


