Homeಮುಖಪುಟ'ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ' | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

‘ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಆಡಳಿತ’ | ದೆಹಲಿ ಮುಂದಿನ ಸಿಎಂ ಆಗಿ ಎಎಪಿ ನಾಯಕಿ ಆತಿಶಿ ಆಯ್ಕೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕೆಲವೇ ಗಂಟೆಗಳ ನಂತರ, ಎಎಪಿ ನಾಯಕಿ ಅತಿಶಿ ಅವರು ಕೇಜ್ರಿವಾಲ್ ಮಾರ್ಗದರ್ಶನದಲ್ಲಿ ಸರ್ಕಾರವನ್ನು ನಡೆಸುವುದಾಗಿ ಮಂಗಳವಾರ ಹೇಳಿದ್ದಾರೆ. ಇಷ್ಟು “ದೊಡ್ಡ ಜವಾಬ್ದಾರಿ”ಯನ್ನು ತನಗೆ ನೀಡಿ ತನ್ನ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದಕ್ಕೆ ನಂಬಿದ್ದಕ್ಕಾಗಿ ಕೇಜ್ರಿವಾಲ್ ಅವರಿಗೆ ಆತಿಶಿ ಧನ್ಯವಾದ ಅರ್ಪಿಸಿದ್ದಾರೆ.ದೆಹಲಿ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ದೆಹಲಿಯಲ್ಲಿ ಒಬ್ಬರೇ ಸಿಎಂ ಇದ್ದಾರೆ ಮತ್ತು ಅವರು ಅರವಿಂದ್ ಕೇಜ್ರಿವಾಲ್… ಅವರನ್ನು ಮತ್ತೆ ಸಿಎಂ ಮಾಡುವುದು ನಮ್ಮ ಏಕೈಕ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

“ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ದೆಹಲಿಯ ಪ್ರೀತಿಯ ಮುಖ್ಯಮಂತ್ರಿ ಮತ್ತು ನನ್ನ ಗುರು ಅರವಿಂದ್ ಕೇಜ್ರಿವಾಲ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನೊಬ್ಬ ಸಾಮಾನ್ಯ ರಾಜಕಾರಣಿ ಮತ್ತು ನಾನು ಬೇರೆ ಯಾವುದೇ ಪಕ್ಷದಲ್ಲಿದ್ದರೆ ನನಗೆ ಟಿಕೆಟ್ ಸಿಗುತ್ತಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ ಕೇಜ್ರಿವಾಲ್ ಅವರು ನನ್ನ ಮೇಲೆ ತುಂಬಾ ನಂಬಿಕೆ ಇಟ್ಟಿದ್ದಾರೆ. ನಾನು ನನ್ನ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ”ಎಂದು 43 ವರ್ಷದ ಹಿರಿಯ ಎಎಪಿ ನಾಯಕಿ ಹೇಳಿದ್ದಾರೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಿಜೆಪಿ ಸಂಚು ರೂಪಿಸಿದ್ದು, ಕೇಜ್ರಿವಾಲ್ ಅವರನ್ನು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಿದೆ ಎಂದು ಅವರು ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಅವರಿಗೆ ಈಗ ಜಾಮೀನು ನೀಡಿದ್ದು, ಜೊತೆಗೆ ತನಿಖಾ ಸಂಸ್ಥೆಯನ್ನು ಪಂಜರದ ಗಿಳಿ ಎಂದು ಕರೆಯುವ ಮೂಲಕ ಕೇಂದ್ರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಹೇಳಿದ್ದಾರೆ.

“ಜೈಲಿನಿಂದ ಹೊರಬಂದ ನಂತರ ಅರವಿಂದ್ ಕೇಜ್ರಿವಾಲ್ ಮಾಡಿದ್ದನ್ನು ಜಗತ್ತಿನಲ್ಲಿ ಯಾರೂ ಮಾಡಿಲ್ಲ ಅಥವಾ ವಿಶ್ವದ ಯಾವುದೇ ನಾಯಕರು ಮಾಡಿಲ್ಲ. ಅವರ ಪ್ರಾಮಾಣಿಕತೆಯನ್ನು ದೆಹಲಿಯ ಜನರು ಪ್ರಮಾಣೀಕರಿಸಿದ ನಂತರವೇ ಅವರು ಸಿಎಂ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ” ಎಂದು ಅತಿಶಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

“ಇಂದು, ದೆಹಲಿಯ ಜನರು ಬಿಜೆಪಿಯ ಪಿತೂರಿಯಿಂದ ತುಂಬಾ ಅಸಮಾಧಾನಗೊಂಡಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ಜನರು ಕೇಜ್ರಿವಾಲ್ ಅವರಂತಹ ಪ್ರಾಮಾಣಿಕ ನಾಯಕರನ್ನು ಮಾತ್ರ ತಮ್ಮ ಸಿಎಂ ಎಂದು ಬಯಸುತ್ತಾರೆ. ಏಕೆಂದರೆ ಅವರು ಸಿಎಂ ಮಾತ್ರ ಆಗಿರುವುದಿಲ್ಲ ಎಂದು ಅವರಿಗೆ ತಿಳಿದಿದೆ.” ಎಂದು ಆತಿಶಿ ಹೇಳಿದ್ದಾರೆ.

ಶಿಕ್ಷಣ, ಹಣಕಾಸು, ಕಾನೂನು, ಪ್ರವಾಸೋದ್ಯಮ ಮತ್ತು ಇತರ ಹಲವಾರು ಇಲಾಖೆಗಳ ಖಾತೆಯನ್ನು ಹೊಂದಿರುವ ಆತಿಶಿ ಅವರು, ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಆದ್ದರಿಂದ ಇದು ಸಂತೋಷದಾಯಕ ವಿಷಯಲ್ಲ. ಹಾಗಾಗಿ ನನಗೆ ಹಾರ ಹಾಕಿ ಸಂಭ್ರಮಿಸಬೇಡಿ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಅತಿಶಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರನ್ನು ನಾಳೆ ಭೇಟಿಯಾಗುವ ಸಾಧ್ಯತೆಯಿದೆ. ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲು ಸಂಜೆ 4.30 ಕ್ಕೆ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರನ್ನು ಭೇಟಿಯಾಗಲಿದ್ದಾರೆ. ಹೊಸ ಮುಖ್ಯಮಂತ್ರಿಯ ಪ್ರಸ್ತಾಪವನ್ನು ಸಕ್ಸೇನಾ ಅವರಿಗೆ ಕಳುಹಿಸಿದ ನಂತರ, ಅವರು ಅದನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ರವಾನಿಸುತ್ತಾರೆ, ನಂತರ ಅತಿಶಿ ಅವರು ದೆಹಲಿ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊನೋಡಿ: ತಾರತಮ್ಯವನ್ನು ಬೋಧಿಸುವ ಕೃತಿ ಭಗವದ್ಗೀತೆ: ಡಾ.ಜಿ.ರಾಮಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...