Homeಮುಖಪುಟಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

ಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

- Advertisement -
- Advertisement -

ತನ್ನ ಅನುಮತಿಯಿಲ್ಲದೆ ದೇಶಾದ್ಯಂತ ಖಾಸಗಿ ಆಸ್ತಿಗಳನ್ನು ನೆಲಸಮ ಮಾಡುವುದನ್ನು ಅಕ್ಟೋಬರ್ 1 ರವರೆಗೆ ನಿಲ್ಲಿಸಬೇಕು ಎಂದು ಸುಪ್ರಿಂಕೋರ್ಟ್‌ ಮಂಗಳವಾರ ಆದೇಶಿಸಿದೆ. ಪ್ರಕರಣಗಳ ಮುಂದಿನ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶವನ್ನು ನೀಡಿದೆ. ಆದಾಗ್ಯೂ, ಅನಧಿಕೃತ ನಿರ್ಮಾಣವನ್ನು ತೆರವುಗೊಳಿಸಲು ಅಗತ್ಯವಿರುವ ಪ್ರಕರಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಬುಲ್ಡೋಜರ್ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ನೀಡಿದ ಈ ಆದೇಶಕ್ಕೆ ಆಕ್ಷೇಪ ಎತ್ತಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಶಾಸನಬದ್ಧ ಅಧಿಕಾರಿಗಳ ಕೈಗಳನ್ನು ಈ ರೀತಿ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ಎರಡು ವಾರಗಳ ಕಾಲ ಕೆಡವುವುದನ್ನು ನಿಲ್ಲಿಸಿದರೆ ಸ್ವರ್ಗ ಕುಸಿಯುವುದಿಲ್ಲ. ನಿಮ್ಮ ಹಾಗೆ ಇರಿ, 15 ದಿನಗಳಲ್ಲಿ ಏನಾಗುತ್ತದೆ?” ಎಂದು ಕೇಳಿದ್ದಾರೆ.

“ಮುಂದಿನ ದಿನಾಂಕದವರೆಗೆ ಈ ನ್ಯಾಯಾಲಯದ ಅನುಮತಿ ಪಡೆಯದೆ ಯಾವುದೇ ಆಸ್ತಿಗಳನ್ನು ಕೆಡವಬಾರದು. ಆದರೆ ಸಾರ್ವಜನಿಕ ಬೀದಿಗಳು, ಫುಟ್‌ಪಾತ್‌ಗಳು, ರೈಲ್ವೆ ಮಾರ್ಗಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ನಿರ್ಮಾಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂಓದಿ: ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

ಸಂವಿಧಾನದ 142ನೇ ಪರಿಚ್ಛೇದದ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಅನ್ವಯಿಸುವ ಮೂಲಕ ತಾನು ಈ ನಿರ್ದೇಶನವನ್ನು ನೀಡಿದ್ದೇನೆ ಎಂದು ನ್ಯಾಯಾಲಯ ಹೇಳಿದೆ. ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಸೇರಿದ ಖಾಸಗಿ ಕಟ್ಟಡಗಳನ್ನು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಶಿಕ್ಷಾರ್ಹ ಕ್ರಮವಾಗಿ ಕೆಡವಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸುತ್ತಿದೆ.

ಸೆಪ್ಟೆಂಬರ್ 2 ರಂದು ನ್ಯಾಯಾಲಯ ಮಾಡಿದ ಟೀಕೆಗಳ ನಂತರವೂ ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡ ಮತ್ತು ವೈಭವೀಕರಿಸಿದ ಸಚಿವರು ಮತ್ತು ವಿವಿಧ ರಾಜಕಾರಣಿಗಳನ್ನು ನ್ಯಾಯಾಲಯವು ತೀವ್ರವಾಗಿ ಟೀಕಿಸಿತು. “ಆದೇಶದ ನಂತರ ಕೂಡಾ ಬುಲ್ಡೋಜರ್ ಮುಂದುವರಿಯುತ್ತದೆ ಎಂದು ಹೇಳಿಕೆಗಳು ಬಂದಿವೆ…” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದದ್ದಾರೆ.

“ಸೆಪ್ಟೆಂಬರ್ 2 ರ ನಂತರ ಕೂಡಾ ಇಂತಹ ನಿಲುವು ಮತ್ತು ಸಮರ್ಥನೆ ಕಂಡುಬಂದಿದೆ. ಇದು ನಮ್ಮ ದೇಶದಲ್ಲಿ ಆಗಬೇಕೇ? ಚುನಾವಣಾ ಆಯೋಗವು ಗಮನಿಸಬೇಕೇ? ನಾವು ನಿರ್ದೇಶನಗಳನ್ನು ರೂಪಿಸುತ್ತೇವೆ” ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದ್ದಾರೆ. ದೇಶದ ಪುರಸಭೆಯ ಕಾನೂನುಗಳ ಅಡಿಯಲ್ಲಿ ಆಸ್ತಿಗಳನ್ನು ಯಾವಾಗ ಮತ್ತು ಹೇಗೆ ಕೆಡವಬಹುದು ಎಂಬುದರ ಕುರಿತು ನಿರ್ದೇಶನಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.ಬುಲ್ಡೋಜರ್ ದಾಳಿ

ವಿಡಿಯೊ ನೋಡಿ: ಬಾಲಗೋಪಾಲ್ ಅವರ ಬಹಳಷ್ಟು ಲೇಖನಗಳು ಕನ್ನಡಕ್ಕೆ ಬರುವ ಅಗತ್ಯವಿದೆ: ಬಂಜಗೆರೆ ಜಯಪ್ರಕಾಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...