Homeಮುಖಪುಟ'ತಿರುಪತಿ ಲಡ್ಡು ತಯಾರಿಕೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ' ಎಂದ ಸಿಎಂ ನಾಯ್ಡು; ಆರೋಪ ನಿರಾಕರಿಸಿದ ವೈಎಸ್ಆರ್...

‘ತಿರುಪತಿ ಲಡ್ಡು ತಯಾರಿಕೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ’ ಎಂದ ಸಿಎಂ ನಾಯ್ಡು; ಆರೋಪ ನಿರಾಕರಿಸಿದ ವೈಎಸ್ಆರ್ ಕಾಂಗ್ರೆಸ್

- Advertisement -
- Advertisement -

ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷವು ಈ ಆರೋಪವನ್ನು ತಳ್ಳಿಹಾಕಿದೆ.

ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಜಗನ್ ಮೋಹನ್ ರೆಡ್ಡಿ ಸರ್ಕಾರದ ಅಡಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡೂಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಹೇಳಿದ್ದಾರೆ.

“ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ, ಅವರು ‘ಅನ್ನದಾನ’ (ಉಚಿತ ಊಟ) ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಪವಿತ್ರ ತಿರುಮಲ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ. ಆದರೆ, ನಾವು ಈಗ ಶುದ್ಧ ತುಪ್ಪವನ್ನು ಬಳಸಿ, ಟಿಟಿಡಿಯ ಪಾವಿತ್ರ್ಯತೆಯನ್ನು ಕಾಪಾಡಲು ಪ್ರಯತ್ನಿಸುತ್ತಿದ್ದೇವೆ” ಎಂದಿದ್ದಾರೆ.

ನಾಯ್ಡು ಅವರು ತಿರುಮಲ ದೇಗುಲದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ ಎಂದು ವೈಎಸ್ಆರ್ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ ಆರೋಪಿಸಿದ್ದಾರೆ.

“ಚಂದ್ರಬಾಬು ನಾಯ್ಡು ಅವರು ತಿರುಮಲದ ಪಾವಿತ್ರ್ಯತೆ ಮತ್ತು ಕೋಟ್ಯಂತರ ಹಿಂದೂಗಳ ನಂಬಿಕೆಯನ್ನು ತೀವ್ರವಾಗಿ ಹಾಳು ಮಾಡಿದ್ದಾರೆ. ತಿರುಮಲ ಪ್ರಸಾದದ ಬಗ್ಗೆ ಅವರ ಟೀಕೆಗಳು ಅತ್ಯಂತ ದುರುದ್ದೇಶಪೂರಿತವಾಗಿವೆ. ಯಾವುದೇ ವ್ಯಕ್ತಿ ಇಂತಹ ಮಾತುಗಳನ್ನು ಮಾತನಾಡುವುದಿಲ್ಲ ಅಥವಾ ಅಂತಹ ಆರೋಪಗಳನ್ನು ಮಾಡುವುದಿಲ್ಲ” ಎಂದು ರೆಡ್ಡಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದಿದ್ದಾರೆ.

“ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವ ಮಟ್ಟಕ್ಕೂ ಬಗ್ಗುತ್ತಾರೆ ಎಂಬುದು ಮತ್ತೆ ಸಾಬೀತಾಗಿದೆ. ಭಕ್ತರ ನಂಬಿಕೆ ಗಟ್ಟಿಗೊಳಿಸಲು ನಾನು ಕುಟುಂಬ ಸಮೇತ ತಿರುಮಲ ಪ್ರಸಾದದ ವಿಚಾರವಾಗಿ ಪರಮಾತ್ಮನ ಮುಂದೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧ. ಚಂದ್ರಬಾಬು ನಾಯ್ಡು ತಮ್ಮ ಕುಟುಂಬದೊಂದಿಗೆ ಅದೇ ರೀತಿ ಮಾಡಲು ಸಿದ್ಧರಿದ್ದಾರೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ‘ಒಂದು ರಾಷ್ಟ್ರ, ಒಂದು ಚುನಾವಣೆ..’; ಕೋವಿಂದ್ ಸಮಿತಿ ವರದಿ ಅನುಮೋದಿಸಿದ ಕೇಂದ್ರ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...