- Advertisement -
- Advertisement -
ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆ ಕಗ್ಗಲೀಪುರ ಠಾಣೆಯಲ್ಲಿ ಬುಧವಾರ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಮುನಿರತ್ನ, ಅವರ ಗನ್‌ಮ್ಯಾನ್ ವಿಜಯಕುಮಾರ್, ಸುಧಾಕರ್,ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಹಾಗೂ ಲೋಕಿ ಸೇರಿ 7 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಸಮಾಜ ಸೇವಕಿಯಾಗಿರುವ ಸಂತ್ರಸ್ತೆ ಡಿವೈಎಸ್‌ಪಿ ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ದೂರು ದಾಖಲಿಸಿದ್ದಾರೆ. 2020ರಿಂದ 2022ರ ನಡುವೆ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ. ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾಗಿ ವರದಿಗಳು ಹೇಳಿವೆ.
ಇದನ್ನೂ ಓದಿ : ಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!


