ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರೂ ನಾಯಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನಾಗಮಂಗಲ ಟೌನ್ ಪೊಲೀಸ್ ಠಾಣೆಯ ಗುಪ್ತಚರ ವಿಭಾಗದ ಪೊಲೀಸ್ ಅಧಿಕಾರಿ ಎಂ ರಮೇಶ ಅವರು ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕೋಮುಗಲಭೆ ಭುಗಿಲೆದ್ದ ನಂತರ ಆರೋಪಿಗಳ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು “ಅಶಾಂತಿಯನ್ನು ಪ್ರಚೋದಿಸುವ” ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.
ಸಚಿವೆ ಶೋಭಾ ಅವರು ಸೆಪ್ಟೆಂಬರ್ 13 ರಂದು ತಮ್ಮ ಎಕ್ಸ್ ಖಾತೆಯಲ್ಲಿ ತಪ್ಪುದಾರಿಗೆಳೆಯುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಶೋಭಾ ಬೇರೆ ಫೋಟೋಗಳನ್ನು ಪೋಸ್ಟ್ ಮಾಡಿ, ಅದು ನಾಗಮಂಗಲದ ಚಿತ್ರ ಎಂದು ಪ್ರತಿಪಾದಿಸಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ.
ಪೊಲೀಸ್ ಅಧಿಕಾರಿಯೊಬ್ಬರು ಗಣೇಶನ ವಿಗ್ರಹವನ್ನು ತಬ್ಬಿಕೊಂಡಿರುವ ಚಿತ್ರಗಳನ್ನು ಹಂಚಿ, ವಿಗ್ರಹವನ್ನು “ಬಂಧಿಸಲಾಗಿದೆ” ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ನಾಗಮಂಗಲದ “ಘಟನೆಗಳ ಸುಳ್ಳು ನಿರೂಪಣೆಯನ್ನು ಪ್ರಸ್ತುತಪಡಿಸಿ ಸಾಮಾಜಿಕ ಅಶಾಂತಿಯನ್ನು ಪ್ರಚೋದಿಸಲು” ಪೋಸ್ಟ್ ಪ್ರಯತ್ನಿಸಿದೆ ಎಂದು ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ.
ಇದನ್ನೂಓದಿ: ದಿನೇಶ್ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್ ತರಾಟೆ
ಆರ್ ಅಶೋಕ ಅವರು X ನಲ್ಲಿ ಸಂಬಂಧವಿಲ್ಲದ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ. ತಪ್ಪಾದ ವಿಡಯೊ ಹಾಕಿ ನಾಗಮಂಗಲ ಗಣೇಶ ವಿಸರ್ಜನೆಯ ಮೆರವಣಿಗೆಯ ಹಿಂಸಾಚಾರ ಎಂದು ಬಿಂಬಿಸಲಾಗಿದೆ. ಆದರೆ ಈ ದೃಶ್ಯಾವಳಿಗಳು ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿಲ್ಲ ಎಂದು ಎಫ್‌ಐಆರ್ ಹೇಳಿದೆ. ಅಶೋಕ ಅವರ ಪೋಸ್ಟ್‌ಗಳು, ಹಿಂಸಾಚಾರದ ಘಟನೆಗಳು ದೊಡ್ಡ ಕೋಮು ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಮೂಲಕ ಮತ್ತಷ್ಟು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿದ್ದವು ಎಂದು ಆರೋಪಿಸಲಾಗಿದೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂಸಾಚಾರದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರ್. ಅಶೋಕ ಹೇಳಿಕೊಂಡಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೀಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಈ ಘಟನೆಗಳ ಹಿಂದೆ ನಿಷೇಧಿತ ಸಂಘಟನೆಗಳ ಕೈವಾಡವಿದ್ದು, ಕೋಮುಗಲಭೆಗೆ ಮತ್ತಷ್ಟು ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದರು. ಪ್ರಚೋದನಕಾರಿ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆಪ್ಟೆಂಬರ್ 12 ರ ಬುಧವಾರ ರಾತ್ರಿ ಗಣೇಶ ಚತುರ್ಥಿ ಮೆರವಣಿಗೆ ವೇಳೆ ಮಸೀದಿ ಬಳಿ ಸಾಗುತ್ತಿದ್ದಾಗ ಕೋಮು ಘರ್ಷಣೆ ಸಂಭವಿಸಿದೆ. ಈ ವೇಳೆ ಕಿಡಿಗೇಡಿಗಳು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯು ನಾಗಮಂಗಲ ಟೌನ್ ಬಳಿ ಮೈಸೂರು ರಸ್ತೆ ಬಳಿ ಸಾಗುತ್ತಿದ್ದಾಗ ಘರ್ಷಣೆ ಸಂಭವಿಸಿತ್ತು.
ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ


