ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಇಂದು (ಸೆ.19) ದಾಖಲೆ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರು ಬಿಎಸ್ವೈ ಹಾಗೂ ಹೆಚ್‌ಡಿಕೆ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ಗೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, “ರಾಜ್ಯಪಾಲರು ಕೆಲ ಪ್ರಕರಣಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಪ್ಪು ಮಾಡಿದವರಿಗೆ ರಾಜ್ಯಪಾಲರು ರಕ್ಷಣೆ ನೀಡುತ್ತಿದ್ದಾರೆ. ಮಠದ ಹಳ್ಳಿ, ಗಂಗೇನಹಳ್ಳಿ ಬಡಾವಣೆ 7/1 ಬಿ, ಸಿ ಹಾಗೂ ಡಿ ಸರ್ವೆ ನಂಬರ್‌ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧಿನಗೊಂಡಿರುತ್ತದೆ. ಇದನ್ನು ಡಿನೋಟಿಫೈ ಮಾಡಬೇಕು ಅಂತ ಯಾರೋ ರಾಜಶೇಖರಯ್ಯ ಅನ್ನೋರು ಅರ್ಜಿ ಕೊಡ್ತಾರೆ. ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 22.08.2007 ರಲ್ಲಿ ಅರ್ಜಿ ಬಂದ ಅದೇ ದಿನ ಸಿಎಂ ಆಗಿದ್ದ ಹೆಚ್‌ಡಿಕೆ ಡಿನೋಟಿಫೈ ಮಾಡಲು ಸೂಚಿಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.
ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನೂ ಭೂಸ್ವಾಧೀನ ಆಗಿತ್ತು. ಯಾವುದು ಭೂ ಸ್ವಾಧೀನ ಆಗಿತ್ತೋ, ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಅನಿತಾ ಕುಮಾರಸ್ವಾಮಿ ತಾಯಿ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ, ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಯಡಿಯೂರಪ್ಪ ಸಿಎಂ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2010 ಜೂನ್ 5ರಂದು ರಂದು ಭೂಸ್ವಾಧೀನದಿಂದ ಕೈ ಬಿಡುತ್ತಾರೆ ಎಂದು ಹೇಳಿದರು.
ಡಿ ನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರಿಗೆ ಶುದ್ದ ಕ್ರಯಪತ್ರ ಆಗುತ್ತದೆ . ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಹೌದೋ ಅಲ್ವೋ? ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಫ್ ಮಾಡಿದ ಫೈಲ್‌ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದೀರ ಕುಮಾರಸ್ವಾಮಿಯವರೇ ಎಂದು ಆರೋಪಿಸಿದರು.
ಲೋಕಾಯುಕ್ತದವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ವಿರುದ್ದ ಎಫ್‌ಐಆರ್ ದಾಖಲಾಗಿ ಒಂಭತ್ತು ವರ್ಷಗಳಾಗಿದೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ? ಎಂದು ಪ್ರಶ್ನಿಸಿದರು.
ಡಿನೋಟಿಫಿಕೇಷನ್ ಆದ ಗಂಗೇನಳ್ಳಿಯ 1 ಎಕರೆ 11 ಗುಂಟೆ ಜಮೀನು ಕೆಲವೇ ದಿನಗಳಲ್ಲಿ ಕುಮಾರಸ್ವಾಮಿ ಅವರ ಭಾಮೈದನ ಹೆಸರಿಗೆ ರಿಜಿಸ್ಟರ್ ಆಗುತ್ತದೆ. ಇದೊಂದು ವ್ಯವಸ್ಥಿತವಾದ ದರೋಡೆ.
ನೂರಾರು ಕೋಟಿ ಬೆಲೆ ಬಾಳುವ 1.11 ಎಕರೆ ಜಮೀನನ್ನು ಡಿ ನೋಟಿಫಿಕೇಶನ್ ಮಾಡಿ, ಬಿಡಿಎ ಬಡವರಿಗೆ ಎಂದು ಮೀಸಲಿಟ್ಟಿದ್ದ ಭೂಮಿಯನ್ನು ನುಂಗಿ ಹಾಕಿರುವುದು ನ್ಯಾಯವೇ?
-… pic.twitter.com/OBvsdHiGVL— Karnataka Congress (@INCKarnataka) September 19, 2024
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ “ಯಾವ ಜಮೀನನ್ನು ಡಿ-ನೋಟಿಫಿಕೇಷನ್ ಮಾಡಲು ಸಾಧ್ಯವೇ ಇಲ್ಲವೋ ಅದನ್ನು ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಇಬ್ಬರೂ ಸೇರಿಕೊಂಡು ಡಿ-ನೋಟಿಫೈ ಮಾಡಿದ್ದಾರೆ. ಈ ಲೂಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ಪಾಲು ಪಡೆದಿದ್ದಾರೆ? ಇದರ ಬಗ್ಗೆ ಇಬ್ಬರೂ ಉತ್ತರ ನೀಡಬೇಕು” ಎಂದರು.
ಯಾವ ಜಮೀನನ್ನು ಡಿ-ನೋಟಿಫಿಕೇಷನ್ ಮಾಡಲು ಸಾಧ್ಯವೇ ಇಲ್ಲವೋ ಅದನ್ನು ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಇಬ್ಬರೂ ಸೇರಿಕೊಂಡು ಡಿ-ನೋಟಿಫೈ ಮಾಡಿದ್ದಾರೆ.
ಈ ಲೂಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ಪಾಲು ಪಡೆದಿದ್ದಾರೆ? ಇದರ ಬಗ್ಗೆ ಇಬ್ಬರೂ ಉತ್ತರ ನೀಡಬೇಕು.
– @dineshgrao pic.twitter.com/wrneRAhDnV— Karnataka Congress (@INCKarnataka) September 19, 2024
ಸಚಿವ ಸಂತೋಷ್ ಲಾಡ್ ಮಾತನಾಡಿ “ದಾಖಲೆ ಸಮೇತ ನಾವು ಮಾಡಿದ ಆರೋಪಗಳಿಗೆ ಹೆಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯವರು ಉತ್ತರ ನೀಡಬೇಕು. ಡಿನೋಟಿಫಿಕೇಷನ್ ಅಕ್ರಮದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು. ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ರಾಜ್ಯಪಾಲರಿಗೆ ನೀಡಿ ಮತ್ತೊಮ್ಮೆ ತನಿಖೆಗೆ ಆದೇಶಿಸಿ ಎಂದು ಅವರಲ್ಲಿ ಮನವಿ ಮಾಡಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ಪತ್ರ ಬರೆಯಬೇಕು” ಎಂದು ಹೇಳಿದರು.
ದಾಖಲೆ ಸಮೇತ ನಾವು ಮಾಡಿದ ಆರೋಪಗಳಿಗೆ ಹೆಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯವರು ಉತ್ತರ ನೀಡಬೇಕು.
ಡಿನೋಟಿಫಿಕೇಷನ್ ಅಕ್ರಮದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು.
ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು… pic.twitter.com/gE9mH07GGQ
— Karnataka Congress (@INCKarnataka) September 19, 2024
ಇದನ್ನೂ ಓದಿ : ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್


