ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ 40 ವರ್ಷದ ಮಹಿಳೆಯೊಬ್ಬರು ದಾಖಲಿಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ನಿನ್ನೆ (ಸೆ.20) ಬಂಧಿಸಿದ್ದ ಪೊಲೀಸರು, ಇಂದು (ಸೆ.21) ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅ.5ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನು ಪಡೆದಿದ್ದ ಮುನಿರತ್ನ ಅವರು, ನಿನ್ನೆ ಬೆಳಿಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು.
ರಾಮನಗರ ಜಿಲ್ಲೆ ಕಗ್ಗಲೀಪುರ ಠಾಣೆಯಲ್ಲಿ 40 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಮುನಿರತ್ನ, ಅವರ ಗನ್‌ಮ್ಯಾನ್ ವಿಜಯಕುಮಾರ್, ಸುಧಾಕರ್,ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಹಾಗೂ ಲೋಕಿ ಸೇರಿ 7 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ : ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? – ಸಚಿವ ಭೈರೆಗೌಡ ಪ್ರಶ್ನೆ


