Homeಫ್ಯಾಕ್ಟ್‌ಚೆಕ್FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

“ಚಂಡೀಗಢ ಟೋಲ್‌ ಪ್ಲಾಝಾದಲ್ಲಿ ಮುಸ್ಲಿಮರು ಗಲಾಟೆ ಮಾಡಿ, ಟೋಲ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲೂ ಹಿಂದೂ ಸಿಬ್ಬಂದಿ ಮೇಲೆಯೇ ದೌರ್ಜನ್ಯ ನಡೆಸಲಾಗಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ, ಮುಸ್ಲಿಮರ ಟೋಪಿ ಧರಿಸಿದ ಒಂದಷ್ಟು ಜನರು ಟೋಲ್ ಪ್ಲಾಝಾವೊಂದರ ಬಳಿಗೆ ಟೆಂಪೋದಲ್ಲಿ ಬರುವುದು ಮತ್ತು ಅದರಲ್ಲಿದ್ದ ವ್ಯಕ್ತಿಯೊಬ್ಬರು ಟೋಲ್ ಗೇಟ್ ತೆರೆಯುವಂತೆ ಒತ್ತಾಯಿಸಿ ಅದನ್ನು ಮುರಿದು ಹಾಕುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 18 ಸೆಪ್ಟೆಂಬರ್‌ 2023ರಲ್ಲಿ ಬಾಂಗ್ಲಾದೇಶದ ದಿ ಡೈಲಿ ಗೋನಾಕನಾಥೋ ಎಂಬ ಪತ್ರಿಕೆಯಲ್ಲಿ ಕುರಿಲ್‌ ಟೋಲ್‌ ಪ್ಲಾಝಾದಲ್ಲಿ ನಡೆದದ್ದು ಏನು? ಎಂಬ ಶೀರ್ಷಿಕೆಯೊಂದಿಗೆ ಘಟನೆಯ ವಿವರವನ್ನು ನೀಡಿರುವುದು ಕಂಡು ಬಂದಿದೆ.

ಈ ವರದಿಯ ಪ್ರಕಾರ, ಸರಕು ಸಾಗಾಟ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಲಾಗಿತ್ತು. ಬಾಂಗ್ಲಾದೇಶದ ಹಲವೆಡೆ ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟವನ್ನು ನಿಷೇಧಿಸಲಾಗಿದೆ. ಹೀಗಿದ್ದರೂ, ಟೋಲ್‌ ಬಳಿ ಬಂದ ಈ ವಾಹನವನ್ನು ಅಲ್ಲಿನ ಸಿಬ್ಬಂದಿ ತಡೆದಿದ್ದಾರೆ. ಅಲ್ಲದೆ, ಸರಕು ವಾಹಣದಲ್ಲಿ ಬಂದವರು ಟೋಲ್‌ ಹಣ ಕಟ್ಟುವುದಿಲ್ಲ ಎಂದು ವಾಗ್ವಾದ ನಡೆಸಿದ್ದಾರೆ. ಇದರಿಂದ ಗಲಾಟೆ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದೇ ವಿಷಯ ಹಲವು ವರದಿಗಳಲ್ಲಿ ಕೂಡ ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಭಾರತದಲ್ಲ ಮತ್ತು ಭಾರತದ ಮುಸಲ್ಮಾನರಿಗೂ ಈ ವಿಡಿಯೋಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂಬುವುದು ಸ್ಪಷ್ಟವಾಗಿದೆ.

ಒಟ್ಟಿನಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ವಿಡಿಯೋಗೂ ಭಾರತಕ್ಕೂ ಸಂಬಂಧವಿಲ್ಲ. ವೈರಲ್‌ ವಿಡಿಯೋದಲ್ಲಿನ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದ್ದು, ಈ ವಿಡಿಯೋವನ್ನು ಸುಳ್ಳು ಮತ್ತು ಕೋಮು ದ್ವೇಷದ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...