Homeಫ್ಯಾಕ್ಟ್‌ಚೆಕ್FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

- Advertisement -
- Advertisement -

ವ್ಯಕ್ತಿಗಳಿಬ್ಬರು ರಸ್ತೆ ಬದಿಯಲ್ಲಿರುವ ಅಂಗಡಿಯೊಂದರ ಬಾಗಿಲನ್ನು ಆಯಧಗಳನ್ನು ಬಳಸಿ ಒಡೆದು ಹಾಕುತ್ತಿರುವ ಸಂದರ್ಭದಲ್ಲಿ ಇಬ್ಬರು ಸೇನಾ ಸಿಬ್ಬಂದಿ ತಮ್ಮ ವಾಹನವನ್ನು ನಿಲ್ಲಿಸಿ ಅವರ ಮೇಲೆ ಗನ್‌ಪಾಯಿಂಟ್‌ ತೋರಿಸಿ ನೆಲದ ಮೇಲೆ ಕುಳಿತುಕೊಳ್ಳಲು ಹೇಳುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ಭಾರತೀಯ ಸೈನಿಕರು ಎಷ್ಟು ಪ್ರಾಮುಖ್ಯತೆ ಪಡೆದಿದೆ ಎಂಬುದನ್ನು ತಪ್ಪದೆ ಅರ್ಥ ಮಾಡಿಕೊಳ್ಳಿ. ಏಕೆಂದರೆ ಜಿಹಾದಿಗಳಿಗೆ ನಮ್ಮ ಹೆಮ್ಮೆಯ ಖಡಕ್ ಸೈನಿಕರು ಮಾತ್ರ ಬುದ್ಧಿ ಕಲಿಸಬಲ್ಲರು. ಜಾಗೋ ಭಾರತ್ ಭಾರತೀಯ ಸನಾತನ ಹಿಂದೂ ನಾವೆಲ್ಲ ಒಂದು. ಜಿಹಾದಿಗಳ ಹುಟ್ಟಡಗಿಸಲು ಬಿಜೆಪಿ ಭಾರತ ದೇಶಕ್ಕೆ, ಬಹಳ ಮುಖ್ಯವಾಗಿ ಬೇಕಾಗಿದೆ”ಎಂಬ ಬರಹದೊಂದಿಗೆ 17, ಸೆಪ್ಟೆಂಬರ್ 2024 ರಂದು ಮಲ್ಲಿಕಾರ್ಜುನ ಎಂಬ ಎಕ್ಸ್ ಖಾತೆ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಘಟನೆ ಭಾರತದಲ್ಲಿ ನಡೆದಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋದಲ್ಲಿ ನಡೆದ ಘಟನೆ ಭಾರತದಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಹುಡುಕಿದಾಗ, ಆಗಸ್ಟ್ 17, 2024 ರಂದು ಬಾಂಗ್ಲಾದೇಶದ ಮಾಧ್ಯಮ ಜಮುನಾ ಟಿವಿ ತನ್ನ ಯೂಟ್ಯೂಬ್‌ ಚಾನಲ್‌ನಲ ಅಪ್ಲೋಡ್ ಮಾಡಿರುವ ವಿಡಿಯೋವೊಂದು ಕಂಡು ಬಂದಿದೆ. ವಿಡಿಯೋಗೆ ನೀಡಿದ ವಿವರಣೆಯ ಪ್ರಕಾರ ಬಾಂಗ್ಲಾದೇಶದ ಫರೀದ್‌ಪುರದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಸೇನೆಯು ವ್ಯಕ್ತಿಗಳನ್ನು ಬಂಧಿಸಿದೆ.

ಆಗಸ್ಟ್ 17, 2024 ರಂದು ಬಾಂಗ್ಲಾದೇಶದ ವೆಬ್​ಸೈಟ್ ಢಾಕಾ ಪೋಸ್ಟ್  ಪ್ರಕಟಿಸಿದ ವರದಿ ಪ್ರಕಾರ, ಆಗಸ್ಟ್ 14 ರಂದು ಫರೀದ್‌ಪುರದ ಬೋಲ್ಮರಿಯಲ್ಲಿ ಬಿಎನ್​​ಪಿ ಬಣಗಳ ನಡುವಿನ ಗಲಾಟೆಯ ಸಂದರ್ಭ ಬಾಂಗ್ಲಾದೇಶ ಸೇನೆಯು ಈ ವ್ಯಕ್ತಿಗಳನ್ನು ಬಂಧಿಸಿದೆ. ಒಂದು ಪಕ್ಷದ ಕಾರ್ಯಕರ್ತರು ಇನ್ನೊಂದು ಪಕ್ಷದ ಅಂಗಡಿಗಳನ್ನು ಧ್ವಂಸಗೊಳಿಸಲು ಮುಂದಾಗಿದ್ದರು. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ತುತುಲ್ ಹೊಸೈನ್ (28) ಮತ್ತು ದುಖು ಮಿಯಾ (30) ಎಂದು ಗುರುತಿಸಲಾಗಿದೆ. ವೈರಲ್ ವಿಡಿಯೋದಲ್ಲಿರುವ ಇಬ್ಬರನ್ನು ಸೇನೆಯು ಬಂಧಿಸಿ ಪೊಲೀಸರಿಗೆ ಒಪ್ಪಿಸಿದೆ ಎಂದು ಬೋಲ್ಮರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಶಾಹಿದುಲ್ ಇಸ್ಲಾಂ ಹೇಳಿದ್ದಾರೆ’ ಎಂದು ವರದಿಯಲ್ಲಿದೆ.

ಒಟ್ಟಿನಲ್ಲಿ, ಅಂಗಡಿ ಬಾಗಿಲುಗಳನ್ನು ಒಡೆಯುತ್ತಿದ್ದ ಇಬ್ಬರು ಜಿಹಾದಿಗಳನ್ನು ಭಾರತೀಯ ಸೈನಿಕರು ಬಂಧಿಸಿದ್ದಾರೆ ಎಂದು ಬಾಂಗ್ಲಾದೇಶದ ಫರೀದ್‌ಪುರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...