Homeಮುಖಪುಟಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

- Advertisement -
- Advertisement -

ಮಹಿಳಾ ನಟಿಯೊಬ್ಬರ ದೂರಿನ ಮೇರೆಗೆ ಆಡಳಿತಾರೂಢ ಸಿಪಿಐ(ಎಂ)ನ ಶಾಸಕ ಹಾಗೂ ನಟ ಎಂ ಮುಖೇಶ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಔಪಚಾರಿಕವಾಗಿ ಬಂಧಿಸಿದೆ ಎಂದು ವರದಿಯಾಗಿದೆ. ”ಶಾಸಕರನ್ನು ಬಂಧಿಸಲಾಗಿದ್ದು, ಅವರ ವೈದ್ಯಕೀಯ ಪರೀಕ್ಷೆ ಮತ್ತು ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಯಿತು. ಈ ತಿಂಗಳ ಆರಂಭದಲ್ಲಿ ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಅವರ ವಕೀಲರು ದೃಢಪಡಿಸಿದ್ದಾರೆ. ಅತ್ಯಾಚಾರ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಟನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅವರನ್ನು ವಿಚಾರಣೆಗೆ ಕರೆದ ನಂತರ ಅವರ ಬಂಧನವನ್ನು ದಾಖಲಿಸಲಾಗಿದೆ. ಬೆಳಗ್ಗೆ 9.45ಕ್ಕೆ ಕೊಚ್ಚಿಯ ಕರಾವಳಿ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿರುವ ಎಸ್‌ಐಟಿ ಎದುರು ಮುಕೇಶ್‌ ಹಾಜರಿದ್ದು, ಮೂರೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ಮುಖೇಶ್ ವಿರುದ್ಧ ಎರಡು ಪ್ರಕರಣಗಳನ್ನು ವಡಕ್ಕಂಚೇರಿ ಪೊಲೀಸರು ಮತ್ತು ಇನ್ನೊಂದು ಮರಡು ಪೊಲೀಸರು ದಾಖಲಿಸಿದ್ದಾರೆ. ಎರ್ನಾಕುಲಂ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾಲಯ ಸೆಪ್ಟಂಬರ್ 5 ರಂದು ಮುಕೇಶ್ ವಿರುದ್ಧ ಮಹಿಳಾ ನಟಿ ಮಾಡಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಿತ್ತು.

ಮಹಿಳೆಯ ಆರೋಪದ ನಂತರ, ಮುಖೇಶ್ ವಿರುದ್ಧ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅದರೆ ನಟ ಮುಖೇಶ್ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ದೂರುದಾರ ಮಹಿಳೆಯ ಬ್ಲ್ಯಾಕ್‌ಮೇಲ್ ಪ್ರಯತ್ನಗಳಿಗೆ ಮಣಿಯಲು ನಿರಾಕರಿಸಿದ ಪರಿಣಾಮವೇ ಈ ಆರೋಪಗಳು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಬದ್ಲಾಪುರ್ ಲೈಂಗಿಕ ದೌರ್ಜನ್ಯ ಆರೋಪಿ ಎನ್‌ಕೌಂಟರ್ ಪ್ರಕರಣ; ಪೊಲೀಸರ ಮೇಲೆ ಕುಟುಂಬಸ್ಥರಿಂದ ಗಂಭೀರ ಆರೋಪ

ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯಲ್ಲಿ ಬಹಿರಂಗಗೊಂಡಿರುವ ವಿವಿಧ ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ನಂತರ ಹಲವಾರು ‘ಗಣ್ಯ’ ಮಲಯಾಳಂ ಚಿತ್ರರಂಗದ ವ್ಯಕ್ತಿಗಳ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

2017 ರಲ್ಲಿ ನಟಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ನಂತರ ಕೇರಳ ಸರ್ಕಾರವು ಸಮಿತಿಯನ್ನು ರಚಿಸಿತ್ತು. ಸಮಿತಿಯ ವರದಿಯು ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಮತ್ತು ಶೋಷಣೆಯ ನಿದರ್ಶನಗಳನ್ನು ಎತ್ತಿ ತೋರಿಸಿದೆ. ಹಲವಾರು ನಟರು ಮತ್ತು ನಿರ್ದೇಶಕರನ್ನು ಒಳಗೊಂಡ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಈ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಅದರ ತನಿಖೆಗಾಗಿ ಏಳು ಸದಸ್ಯರ ವಿಶೇಷ ತನಿಖಾ ತಂಡವನ್ನು ಆಗಸ್ಟ್ 25 ರಂದು ರಾಜ್ಯ ಸರ್ಕಾರವು ಘೋಷಿಸಿತು.

ಕೇರಳ ಹೈಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮಲಯಾಳಂ ನಟ ಸಿದ್ದಿಕ್ ಅವರನ್ನು ಬಂಧಿಸಲು ಪೊಲೀಸರು ಲುಕ್‌ಔಟ್ ಸುತ್ತೋಲೆ ಹೊರಡಿಸಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ. ಯುವ ನಟಿಯೊಬ್ಬರು ಸಿದ್ದಿಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ನಟ ದೇಶದಿಂದ ಪಲಾಯನ ಮಾಡುವುದನ್ನು ತಡೆಯಲು ವಿಮಾನ ನಿಲ್ದಾಣಗಳಲ್ಲಿ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಅತ್ಯಾಚಾರ ಪ್ರಕರಣ

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ಇದನ್ನೂನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು. ಅತ್ಯಾಚಾರ ಪ್ರಕರಣ ಅತ್ಯಾಚಾರ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...