Homeಮುಖಪುಟಶ್ರೀಲಂಕಾ ಸಂಸತ್ ವಿಸರ್ಜಿಸಿದ ನೂತನ ಅಧ್ಯಕ್ಷ ದಿಸ್ಸನಾಯಕೆ : ನವೆಂಬರ್ 14ರಂದು ಚುನಾವಣೆ

ಶ್ರೀಲಂಕಾ ಸಂಸತ್ ವಿಸರ್ಜಿಸಿದ ನೂತನ ಅಧ್ಯಕ್ಷ ದಿಸ್ಸನಾಯಕೆ : ನವೆಂಬರ್ 14ರಂದು ಚುನಾವಣೆ

- Advertisement -
- Advertisement -

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಎಡಪಂಥೀಯ ನಾಯಕ ಅನುರ ಕುಮಾರ ದಿಸ್ಸನಾಯಕೆ ಮಂಗಳವಾರ (ಸೆ.24) ದೇಶದ ಸಂಸತ್ತನ್ನು ವಿಸರ್ಜಿಸಿದ್ದಾರೆ ಮತ್ತು ಒಂದು ತಿಂಗಳೊಳಗೆ ಕ್ಷಿಪ್ರ ಚುನಾವಣೆಗೆ ಕರೆ ನೀಡಿದ್ದಾರೆ.

ಈ ಮೂಲಕ ರಾಜಕೀಯ ಕುಟುಂಬಗಳ ಕೈಯಲ್ಲಿದ್ದ ಶ್ರೀಲಂಕಾದ ದಶಕಗಳ ಹಳೆಯ ಆಡಳಿತದಲ್ಲಿ ಬದಲಾವಣೆಯನ್ನು ತರುವ ತನ್ನ ಚುನಾವಣಾ ಭರವಸೆಯನ್ನು ಈಡೇರಿಸುವಲ್ಲಿ ದಿಸ್ಸನಾಯಕೆ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ.

ಸಂಸತ್ ವಿಸರ್ಜನೆ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಮುಂದಿನ ನವೆಂಬರ್ 14 ರಂದು ಹೊಸದಾಗಿ ಚುನಾವಣೆ ನಡೆಯಲಿದೆ ಎಂದು ವಿಶೇಷ ಗೆಜೆಟ್ ಅಧಿಸೂಚನೆ ತಿಳಿಸಿದೆ. ಕೊನೆಯದಾಗಿ 2020ರಲ್ಲಿ ಶ್ರೀಲಂಕಾ ಸಂಸತ್‌ಗೆ ಚುನಾವಣೆ ನಡೆದಿತ್ತು. ಸರ್ಕಾರದ ಅವಧಿ 2025ರ ಆಗಸ್ಟ್‌ವರೆಗೆ ಇದೆ. ಆದರೂ, 11 ತಿಂಗಳಿಗಿಂತ ಮುಂಚಿತವಾಗಿ ಸಂಸತ್ ವಿಸರ್ಜಿಸಿರುವ ಅಧ್ಯಕ್ಷ ಚುನಾವಣೆಗೆ ಆದೇಶಿಸಿದ್ದಾರೆ.

2020ರಲ್ಲಿ ಹೊಸ ಸರ್ಕಾರ ಬಂದ ಬಳಿಕ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿತ್ತು. ಅದು ತೀವ್ರ ರೂಪಕ್ಕೆ ಹೋಗಿ, 2022ರಲ್ಲಿ ಜನರು ಸರ್ಕಾರದ ವಿರುದ್ದ ದಂಗೆಯೆದ್ದಿದ್ದರು. ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ದ ಬೀದಿಗಿಳಿದು ಪ್ರತಿಭಟಿಸಿದ್ದರು. ಆ ಸಮಯದಲ್ಲಿ ರಾಜಪಕ್ಸೆ ಅವರು ರಾಷ್ಟ್ರದಿಂದ ಪಲಾಯನ ಮಾಡಿದ್ದರು. ಇದರಿಂದ ಇನ್ನಷ್ಟು ಆಕ್ರೋಶಿತರಾದ ಸಾವಿರಾರು ಜನರು ಕೊಲಂಬೊದಲ್ಲಿರುವ ಅಧ್ಯಕ್ಷರ ಭವನಕ್ಕೆ ನುಗ್ಗಿದ್ದರು. ಕೈಗೆ ಸಿಕ್ಕ ವಸ್ತುಗಳನ್ನು ಎತ್ತಿಕೊಂಡು ಬಂದಿದ್ದರು.

ನಂತರ, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಅಧಿಕಾರ ವಹಿಸಿಕೊಂಡಿದ್ದರು. ಪ್ರಧಾನಿಯಾಗಿ ದಿನೇಶ್ ಗುಣವರ್ಧನ ನೇಮಕಗೊಂಡಿದ್ದರು. ರಾನಿಲ್ ವಿಕ್ರಮಸಿಂಘೆ ಲಂಕಾ ಆರ್ಥಿಕತೆಗೆ ಸ್ಥಿರತೆ ತರಲು ಮತ್ತು ದೇಶದಲ್ಲಿ ಶಾಂತಿ ಸ್ಥಾಪಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಆರ್ಥಿಕ ಬಿಕ್ಕಟ್ಟಿನ ಬಳಿಕ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಕಳೆದ ವಾರ ಚುನಾವಣೆ ನಡೆದಿದ್ದು, ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಳಿಕ ಅವರು, ಹರಿಣಿ ಅಮರಸೂರ್ಯ ಅವರನ್ನು ಹೊಸ ಪ್ರಧಾನಿಯಾಗಿ ನೇಮಿಸಿದ್ದಾರೆ.

ಇದನ್ನೂ ಓದಿ : ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...