Homeಮುಖಪುಟತೆಲಂಗಾಣ: 6 ವರ್ಷದ ಬಾಲಕಿ ಮೇಲೆ ಶಾಲಾ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ, ಪ್ರತಿಭಟನಾಕಾರಿಂದ ಶಾಲೆ ಮೇಲೆ...

ತೆಲಂಗಾಣ: 6 ವರ್ಷದ ಬಾಲಕಿ ಮೇಲೆ ಶಾಲಾ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ, ಪ್ರತಿಭಟನಾಕಾರಿಂದ ಶಾಲೆ ಮೇಲೆ ದಾಳಿ

- Advertisement -
- Advertisement -

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಶಾಲೆಯೊಂದರಲ್ಲಿ ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ಹಾಗೂ ಶಾಲೆ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿ ಗುಂಪು, ಪೋಷಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಮರೆಡ್ಡಿ ಪೊಲೀಸ್ ವರಿಷ್ಠಾಧಿಕಾರಿ ಸಿಂಧು ಶರ್ಮಾ ಪ್ರಕಾರ, ಜೀವಧನ್ ಶಾಲೆಯಲ್ಲಿ ಆಪಾದಿತ ಹಲ್ಲೆಯ ಬಗ್ಗೆ ಸೋಮವಾರ ದೂರು ಸ್ವೀಕರಿಸಲಾಗಿದೆ. ದೂರಿನ ಆಧಾರದ ಮೇಲೆ ಪೋಕ್ಸೋ ಕಾಯಿದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ನಾಗರಾಜನನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಪೋಷಕರ ಗುಂಪು ಹಾಗೂ ವಿದ್ಯಾರ್ಥಿ ಸಂಘದ ಮುಖಂಡರು ಸೇರಿದಂತೆ ಪ್ರತಿಭಟನಾಕಾರರು ಮಂಗಳವಾರ ಶಾಲೆಯ ಆವರಣಕ್ಕೆ ನುಗ್ಗಲು ಪ್ರಯತ್ನಿಸಿದರು.

ಘಟನಾ ಸ್ಥಳಕ್ಕೆ ಆಗಮಿಸಿದ ಉನ್ನತ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರಾದರೂ, ಶಾಂತಿ ಕಾಪಾಡುವ ಪ್ರಯತ್ನ ವಿಫಲವಾಯಿತು. ಉದ್ರಿಕ್ತ ಪ್ರತಿಭಟನಾಕಾರರು ಶಾಲೆಯ ಮೇಲೆ ಕಲ್ಲು ತೂರಿದ್ದರಿಂದ ಅಧಿಕಾರಿಯೊಬ್ಬರು ಗಾಯಗೊಂಡರು.

ನಂತರ, ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿದ ಪ್ರತಿಭಟನಾಕಾರರು ಆರೋಪಿ ಮೇಲೆ  ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿದ ಎಸ್‌ಪಿ ಶರ್ಮಾ, ‘ಘಟನೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ಪ್ರಚೋದಿಸಿದ ಮತ್ತು ಶಾಲೆಯಲ್ಲಿ ವಿನಾಶವನ್ನು ಉಂಟುಮಾಡಿದ ವ್ಯಕ್ತಿಗಳನ್ನು ಗುರುತಿಸಲಾಗಿದೆ” ಎಂದು ಹೇಳಿದ್ದಾರೆ.

ಶಾಲೆಯ ಆಸ್ತಿ ಧ್ವಂಸ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೆಚ್ಚುವರಿಯಾಗಿ, ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡಿದ ಇತರ ಇಬ್ಬರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ; ‘ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..’; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...