Homeಕರ್ನಾಟಕಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

ಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರವು ವಕ್ಫ್ ಮಸೂದೆಗೆ ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತಿರುವ ಮತ್ತು ಸಂಸದೀಯ ಸಮಿತಿಯು ತಿದ್ದುಪಡಿಗಳನ್ನು ಪರಿಶೀಲಿಸುತ್ತಿರುವ ಸಮಯದಲ್ಲೆ, ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯು ಅದರ ಆಸ್ತಿಗಳ ಸಮೀಕ್ಷೆ ಮತ್ತು ಗೆಜೆಟ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ತನ್ನ ಸ್ವಾಧೀನದಲ್ಲಿರುವ 1,07,651 ಎಕರೆ ಭೂಮಿಯಲ್ಲಿ, 90,000 ಎಕರೆ ಭೂಮಿಯ ವ್ಯಾಜ್ಯ ವಿವಿಧ ನ್ಯಾಯಾಲಯಗಳಲ್ಲಿ ಇವೆ ಎಂದು ಮಂಡಳಿಯ ಅಂಕಿಅಂಶಗಳ ಹೇಳುತ್ತವೆ. ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕರ್ನಾಟಕ ಸ್ಟೇಟ್ ಬೋರ್ಡ್ ಆಫ್ ಔಕಾಫ್‌ನ ಅಧ್ಯಕ್ಷ ಕೆ. ಅನ್ವರ್ ಬಾಷಾ ಅವರು ಮಾತನಾಡಿ, “ಸದ್ಯ, ಮಂಡಳಿಯು ತನ್ನ ಸ್ವಾಧೀನದಲ್ಲಿ 1,07,651 ಎಕರೆ ಭೂಮಿಯನ್ನು ಹೊಂದಿದೆ. ಆದರೆ ಈ ಆಸ್ತಿಗಳ ಪಾಲಕರು ಅವುಗಳನ್ನು ಬಳಸುತ್ತಿರುವ 40,840 ಸಂಸ್ಥೆಗಳು. ಭೂಮಿ ಅವರಿಗೆ ಸೇರಿದ್ದು” ಎಂದು ಹೇಳಿದ್ದಾರೆ.

ಈ ಹಿಂದೆ ಮಂಡಳಿಯು 1.10 ಲಕ್ಷ ಎಕರೆಗೂ ಹೆಚ್ಚು ಭೂಮಿ ಹೊಂದಿತ್ತು. ಆದರೆ ಇನಾಮ್ ನಿರ್ಮೂಲನೆ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ವಿವಿಧ ಭೂಸುಧಾರಣೆಗಳಿಂದಾಗಿ ಹಲವು ಎಕರೆಗಳು ನಷ್ಟವಾಗಿವೆ. “ಜನರು 1828 ರಿಂದಲೂ ವಕ್ಫ್ ಮಂಡಳಿಗೆ ಭೂಮಿಯನ್ನು ದಾನ ಮಾಡಲು ಪ್ರಾರಂಭಿಸಿದ್ದರು” ಎಂದು ಅವರು ಹೇಳಿದ್ದಾರೆ.ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

“ಆಲಮಟ್ಟಿ ಅಣೆಕಟ್ಟು ಮತ್ತು ಇತರ ಯೋಜನೆಗಳಂತಹ ವಿವಿಧ ಯೋಜನೆಗಳಿಗಾಗಿ ಮಂಡಳಿಯು 75,000 ಎಕರೆಗಳನ್ನು ಸರ್ಕಾರಕ್ಕೆ ನೀಡಿತ್ತು. ಅದರಲ್ಲಿ ನಮಗೆ ಸೂಕ್ತ ಪರಿಹಾರ ನೀಡಲಾಗಿದೆ. ಈಗ ನಾವು ವ್ಯಾಜ್ಯದಲ್ಲಿರುವ 90,000 ಎಕರೆಗೆ ಬದಲಾಗಿ ಪರಿಹಾರ ಅಥವಾ ಭೂಮಿಯನ್ನು ಕೇಳುತ್ತಿದ್ದೇವೆ” ಎಂದು ಹೆಸರು ಹೇಳಲು ಇಚ್ಛಿಸದ ಮಂಡಳಿಯ ಮತ್ತೊಬ್ಬ ಸದಸ್ಯರು ಹೇಳಿದ್ದಾರೆ. ಹಸ್ತಾಂತರಿಸಿದ ಭೂಮಿಯನ್ನು ದರ್ಗಾ, ಮಸೀದಿ, ಸ್ಮಶಾನ ಮತ್ತು ಇತರ ಸೌಲಭ್ಯಗಳನ್ನು ಸ್ಥಾಪಿಸಲು ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ವಕ್ಫ್ ಭೂಮಿಗೆ ಜಿಯೋ ಟ್ಯಾಗ್: ಸರ್ಕಾರಿ ಅಧಿಕಾರಿ

ಎಲ್ಲಾ ವಕ್ಫ್ ಆಸ್ತಿಗಳ ಮೊದಲ ಸಮೀಕ್ಷೆಯನ್ನು 1972-73 ರಲ್ಲಿ ಮಾಡಲಾಯಿತು, ಎರಡನೇ ಸರ್ವೆ 2020 ರಲ್ಲಿ ಪೂರ್ಣಗೊಂಡಿತ್ತು. ವಕ್ಫ್ ಮಂಡಳಿ ಹೊಂದಿರುವ ಯಾವುದೇ ಭೂಮಿ ಸರ್ಕಾರ ಮಂಡಳಿಗೆ ನೀಡಿದ್ದಲ್ಲ. ಈ ಎಲ್ಲಾ ಭೂಮಿ ಜನರು ವಿವಿಧ ಉದ್ದೇಶಗಳಿಗಾಗಿ ದಾನ ಮಂಡಳಿಗೆ ಮಾಡಿದ್ದಾರೆ. ಈಗ ಹೆಚ್ಚಿನ ದೇಣಿಗೆಯೊಂದಿಗೆ, ಎಲ್ಲಾ ಆಸ್ತಿಗಳ ಮರು ಸಮೀಕ್ಷೆಯನ್ನು ಮಾಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಮಂಡಳಿಯ ಸಿಇಒ ಜಿಲಾನಿ ಮೊಕಾಶಿ ಹೇಳಿದ್ದಾರೆ.

ಆದರೆ, ಮಂಡಳಿಯು ಪಟ್ಟಿ ಮಾಡಿರುವ ಭೂಮಿಯ ವಿವರಗಳು ಕಂದಾಯ ಇಲಾಖೆಗಿಂತ ಭಿನ್ನವಾಗಿವೆ. ಕಂದಾಯ ಇಲಾಖೆಯ ಭೂಮಿ ಆ್ಯಪ್‌ನ ಮಾಹಿತಿಯಂತೆ ರಾಜ್ಯದಲ್ಲಿ 3,454.6 ಎಕರೆ ಭೂಮಿಯನ್ನು ವಕ್ಫ್ ಭೂಮಿ ಎಂದು ಗುರುತಿಸಲಾಗಿದೆ. ದಾಖಲೆಗಳನ್ನು ಪರಿಶೀಲಿಸಲು ಜಮೀನುಗಳ ವಿವರವಾದ ಸಮೀಕ್ಷೆ ಮತ್ತು ಜಿಯೋ ಟ್ಯಾಗ್ ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಕ್ಫ್ ಆಸ್ತಿ ದೇವರ ಆಸ್ತಿ ಮತ್ತು ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಸ್ಮಶಾನ ಬಿಟ್ಟರೆ ಸರ್ಕಾರ ಮಂಡಳಿಗೆ ಬೇರಾವುದೇ ಭೂಮಿ ನೀಡಿಲ್ಲ” ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇತ್ತಿಚೆಗೆ ಹೇಳಿದ್ದರು. ಅನೇಕ ದಾನಿಗಳು ಕಾಲೇಜುಗಳು ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಭೂಮಿಯನ್ನು ದಾನ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...