Homeಫ್ಯಾಕ್ಟ್‌ಚೆಕ್FACT CHECK : ಮುಂಬೈನಲ್ಲಿ ಮುಸ್ಲಿಮರಿಂದ ಶಕ್ತಿ ಪ್ರದರ್ಶನ ಎಂದು ಸಂಬಂಧವಿಲ್ಲದ ವಿಡಿಯೋ

FACT CHECK : ಮುಂಬೈನಲ್ಲಿ ಮುಸ್ಲಿಮರಿಂದ ಶಕ್ತಿ ಪ್ರದರ್ಶನ ಎಂದು ಸಂಬಂಧವಿಲ್ಲದ ವಿಡಿಯೋ

- Advertisement -
- Advertisement -

ರಸ್ತೆಯೊಂದರಲ್ಲಿ ಸಾವಿರಾರು ಜನರು ಮತ್ತು ವಾಹನಗಳು ತೆರಳುತ್ತಿರುವ ವಿಡಿಯೋವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲ ಹರಿದಾಡುತ್ತಿದೆ.

ಕೆಲವರು ಅದನ್ನು ಮುಂಬೈನಲ್ಲಿ ನಡೆದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಸಮಾವೇಶ ಎಂದು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಪ್ರವಾದಿ ವಿರುದ್ದ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಮರು ಮುಂಬೈನಲ್ಲಿ ಒಟ್ಟು ಸೇರಿ ಪ್ರತಿಭಟಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎಂದಿದ್ದಾರೆ.

ಶ್ರವಣ್ ಬಿಷ್ಣೋಯ್ (@SharwanKumarBi7) ಎಂಬ ಎಕ್ಸ್ ಬಳಕೆದಾರ ಸೆಪ್ಟೆಂಬರ್ 23ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ. ಇದು ಇರಾಕ್, ಇರಾನ್ ಅಥವಾ ಅಫ್ಘಾನಿಸ್ತಾನವೂ ಅಲ್ಲ. ಇದು ಮುಂಬೈ, ನಾವು ಹಿಂದೂಗಳು ನಿದ್ದೆಯಲ್ಲಿರುವಾಗ ಮುಸ್ಲಿಮರು ತಮ್ಮ ಶಕ್ತಿ ಪ್ರದರ್ಶಿಸಲು ಬೀದಿಗೆ ಬಂದಿದ್ದಾರೆ. ಇದು ಚಲೋ ಮುಂಬೈನ ಬೆಂಗಾವಲು ಪಡೆ. ಎಐಎಂಐಎಂನ ಕರೆಗೆ ಇಡೀ ಭಾರತೀಯ ಮುಸ್ಲಿಮರು ಮುಂಬೈಗೆ ಬಂದಿದ್ದಾರೆ” ಎಂದು ಬರೆದುಕೊಂಡಿದ್ದರು.

ಹಾಗೆಯೇ ಫೇಸ್‌ಬುಕ್ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡು “ಸಾಧುವಿನ ವೇಷದಲ್ಲಿದ್ದ ಹಿಂದುತ್ವ ಉಗ್ರನೊಬ್ಬ ನಮ್ಮ ಪ್ರವಾದಿ (ಸ)ಬಗ್ಗೆ ಕೀಳಾಗಿ ಮಾತನಾಡಿದ, ಪ್ರತಿಭಟಿಸುತ್ತಾ ಪೈಗಂಬ‌ರ್ ಪ್ರೇಮಿಗಳು ಮುಂಬೈ ಎಡೆಗೆ ದೌಡಾಯಿಸಿ ಬಂದಿರುವ ದೃಶ್ಯವಿದು” ಎಂದು ಬರೆದುಕೊಂಡಿದ್ದರು.

ಸಂತ ರಾಮಗಿರಿ ಮತ್ತು ಬಿಜೆಪಿ ಶಾಸಕ ನಿತೀಶ್ ರಾಣೆ ಅವರ ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷದ ನಾಯಕ ಇಮ್ತಿಯಾಝ್ ಜಲೀಲ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆಸಿದ ಐತಿಹಾಸಿಕ ರ್‍ಯಾಲಿ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ಮುಂಬೈನಲ್ಲಿ ಅಂತಹದ್ದೊಂದು ರ್‍ಯಾಲಿ ನಡೆದಿರುವುದು, ಅದರಲ್ಲಿ ಭಾರೀ ಸಂಖ್ಯೆಯ ಜನರು ಪಾಲ್ಗೊಂಡಿರುವುದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ ಸೆಪ್ಟೆಂಬರ್ 12,2024ರಂದು ನೈಜೀರಿಯನ್ ಕ್ಯಾಥೋಲಿಕ್ಸ್ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ “ಶೇ.100ರಷ್ಟು ಕ್ಯಾಥೋಲಿಕ್ ಕ್ರೈಸ್ತರು ಇರುವ ಟಿಮೊಲೆಸ್ಟೆ ದೇಶದಲ್ಲಿ ಪೋಪ್ ಫ್ರಾನ್ಸಿನ್‌ ಅವರಿಗೆ ಐತಿಹಾಸಿಕ ಸ್ವಾಗತ ಕೋರಿಲಾಯಿತು”ಎಂದು ಬರೆದುಕೊಂಡಿರುವುದು ಕಂಡು ಬಂದಿದೆ.

ಸೆಪ್ಟೆಂಬರ್ 16,2024ರಂದು ಮೊರಾಕೊ ನ್ಯೂಸ್ (@Moroccolitik)ಎಂಬ ಎಕ್ಸ್‌ ಖಾತೆಯಲ್ಲೂ ವೈರಲ್ ವಿಡಿಯೋವನ್ನು ಪೋಸ್ಟ್‌ ಮಾಡಿ ಪೋಪ್ ಫ್ರಾನ್ಸಿಸ್ ಟಿಮೋರ್-ಲೆಸ್ಟೆಗೆ ಭೇಟಿ ನೀಡಿರುವುದು ಎಂದು ಬರೆಯಲಾಗಿತ್ತು.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಸೆಪ್ಟೆಂಬರ್ 10, 2024ರಂದು ಅಸೋಸಿಯೇಟೆಡ್ ಪ್ರೆಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲೂ ಪೋಪ್ ಫ್ರಾನ್ಸಿಸ್ ಟಿಮೋರ್-ಲೆಸ್ಟೆನಲ್ಲಿ ಹಮ್ಮಿಕೊಂಡಿದ್ದ ಪ್ರಾರ್ಥನೆಯಲ್ಲಿ ಸುಮಾರು 60 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ವಿವರಿಸಲಾಗಿದೆ.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಮುಂಬೈನಲ್ಲಿ ನಡೆದ ಯಾವುದೇ ಕಾರ್ಯಕ್ರಮದಲ್ಲ. ಅದು ಕ್ಯಾಥೋಲಿಕ್ ದೇಶ ಟಿಮೋರ್ ಲೆಸ್ಟ್‌ಗೆ ಕ್ರೈಸ್ತ ಧರ್ಮದ ಗುರು ಪೋಪ್ ಫ್ರಾನ್ಸಿಸ್ ಭೇಟಿ ನೀಡಿದ್ದಾಗ ಅಲ್ಲಿನ ಜನರು ಸ್ವಾಗತಿಸಿದ ದೃಶ್ಯವಾಗಿದೆ.

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...