Homeಮುಖಪುಟಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

ಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

- Advertisement -
- Advertisement -

2012 ರಲ್ಲಿ ಕೂಡಂಕುಳಂ ಪರಮಾಣು ಸ್ಥಾವರದ ವಿರುದ್ಧದ ಪ್ರತಿಭಟನೆಗಳ ಕುರಿತು ಚಲನಚಿತ್ರವನ್ನು ನಿರ್ಮಿಸಿದ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದು ಭಾರತ ಪ್ರವೇಶಿಸದಂತೆ ಬಂಧಿಲಾಗಿದ್ದು, ನಂತರ ಅವರನ್ನು ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಸೆಪ್ಟೆಂಬರ್ 10 ರಂದು ನಡೆದಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

73 ವರ್ಷದ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ತಮ್ಮ ಮಕ್ಕಳಾದ ನಕೀಟಾ ಬ್ರಾಡ್‌ಬರಿ (21) ಮತ್ತು ಒಮರ್ ಬ್ರಾಡ್‌ಬರಿ (14) ಅವರೊಂದಿಗೆ ಎರಡು ವಾರಗಳ ಭಾರತ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಈ ಅವರ ಮಕ್ಕಳಿಗೆ ಭಾರತ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಬ್ರಾಡ್ಬರಿ ಅವರನ್ನು 24 ಗಂಟೆಗಳ ಕಾಲ ಬಂಧಿಸಿ ಗಡಿಪಾರು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಚಲನಚಿತ್ರ ನಿರ್ಮಾಪಕಿ ಮತ್ತು ಹೋರಾಟಗಾರ್ತಿಯು ಆಗಿರುವ ಅವರ ಪತ್ನಿ ಟ್ರೀನಾ ಐದು ತಿಂಗಳ ಹಿಂದೆ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ. ಬ್ರಾಡ್‌ಬರಿ ಅವರು ಭಾರತಕ್ಕೆ ಬಂದಿಳಿದ ಕೂಡಲೇ ಅವರನ್ನು ಬಂಧಿಸಿ 24 ಗಂಟೆಗಳ ಕಾಲ ಶೌಚಾಲಯಕ್ಕೆ ತೆರಳಲು ಕೂಡಾ ಅನುಮತಿ ನೀಡದೆ ಅಶುಚಿಯಾದ ಮತ್ತು “ಅಸಹ್ಯಕರ” ಸ್ಥಳದಲ್ಲಿ ಇರಿಸಲಾಯಿತು ಎಂದು ಆರೋಪಿಸಿದ್ದಾರೆ.

ಇದನ್ನೂಓದಿ: ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಅಷ್ಟೆ ಅಲ್ಲದೆ, ಅವರಿಗೆ ಆಸ್ಟ್ರೇಲಿಯನ್ ರಾಯಭಾರ ಕಚೇರಿಯೊಂದಿಗೆ ಸಂಪರ್ಕಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ, ಬ್ರಾಡ್‌ಬರಿ ಅವರಿಗೆ ಔಷಧಿಗಳನ್ನು ಕೂಡಾ ನಿರಾಕರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಅವರ ಮಕ್ಕಳು ಉಳಿಸಿಕೊಂಡು, ಅವರನ್ನು ಭಾರತದಿಂದ ಗಡೀಪಾರು ಮಾಡಲಾಯಿತು ಎಂದು ಅದು ಹೇಳಿದೆ.

ಅವರ ಪ್ರಸ್ತುತ ಭೇಟಿಯ ಉದ್ದೇಶ, ಅವರ 2012 ರ ಭಾರತ ಭೇಟಿಯ ಕಾರಣ ಮತ್ತು ದೇಶದಲ್ಲಿ ಅವರ ಸಂಪರ್ಕಗಳನ್ನು ವಿವರಿಸಲು ಕೇಳಲಾಯಿತು ಎಂದು ಬ್ರಾಡ್ಬರಿ ಅವರು ಹೇಳಿದ್ದಾರೆ. ತನ್ನ ಫೋನ್ ಅನ್ನು ಅನ್ಲಾಕ್ ಮಾಡಲು ಮತ್ತು ಭಾರತದಲ್ಲಿನ ತನ್ನ ಸಹಚರರ ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಳ್ಳಲು ಅಧಿಕಾರಿಗಳು ಒತ್ತಾಯಿಸಿದರಾದರೂ, ತಾನು ಅದನ್ನು “ನಿರಾಕರಿಸಿದೆ” ಅವರು ಹೇಳಿದ್ದಾರೆ.

ಈ ಹಿಂದೆ ಬ್ರಾಡ್ಬರಿ ಅವರು ತನ್ನ ಪತ್ನಿ ಮತ್ತು ಮೂರು ವರ್ಷದ ಮಗನೊಂದಿಗೆ ಅಕ್ಟೋಬರ್ 2012 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಅವರು ಪ್ರವಾಸಿ ವೀಸಾದಲ್ಲಿ ಮುಂಬೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಸದಸ್ಯರಾಗಿ ಆಗಮಿಸಿದ್ದರು. ಈ ಚಿತ್ರೋತ್ಸವದ ನಂತರ, ಬ್ರಾಡ್ಬರಿ ತನ್ನ ಕುಟುಂಬದೊಂದಿಗೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಇಡಿಂತಕರೈ ಎಂಬ ಕರಾವಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ ಈ ಗ್ರಾಮವು ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ವಿರುದ್ಧದ ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು.

ಜಪಾನ್‌ನಲ್ಲಿ 2011 ರ ಫುಕುಶಿಮಾ ಪರಮಾಣು ದುರಂತದ ನಂತರ ಅಣು ಸ್ಥಾವರದಲ್ಲಿ ಸಂಭವಿಸುವ ಯಾವುದೇ ಅಪಘಾತದ ವ್ಯಾಪ್ತಿ ಮತ್ತು ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತಿರುನಲ್ವೇಲಿ ಜಿಲ್ಲೆಯಾದ್ಯಂತ ಹರಡಿದ್ದವು.

ಇದನ್ನೂಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ಅಲ್ಲದೆ ಬ್ರಾಡ್ಬರಿ ಅವರ ಭೇಟಿಗೆ ಒಂದು ತಿಂಗಳ ಮೊದಲು, ಇಡಿಂತಕರೈನ ಸ್ಥಾವರದಲ್ಲಿ ಯುರೇನಿಯಂ ಇಂಧನ ತುಂಬಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದರಿಂದ ಪೊಲೀಸರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದ್ದರು. ಈ ವೇಳೆ ಸುಮಾರು 66 ಜನರನ್ನು, ಅದರಲ್ಲೂ ಹೆಚ್ಚಾಗಿ ಮಹಿಳೆಯರನ್ನು ಬಂಧಿಸಲಾಗಿತ್ತು. ಹಲವರ ವಿರುದ್ಧ ದೇಶದ್ರೋಹದ ಆರೋಪ ಕೂಡಾ ಮಾಡಲಾಗಿತ್ತು.

ಇಂತಹ ಸಮಯದಲ್ಲಿ ಬ್ರಾಡ್ಬರಿ ಎರಡು ವಾರಗಳ ಕಾಲ ಗ್ರಾಮದಲ್ಲಿ ಉಳಿದುಕೊಂಡರು ಮತ್ತು ಪ್ರತಿಭಟನೆಗಳು ಮತ್ತು ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಪ್ರಧಾನವಾಗಿ ಅವಲಂಬಿಸಿರುವ ಗ್ರಾಮಸ್ಥರ ದೈನಂದಿನ ಜೀವನವನ್ನು ದಾಖಲಿಸಿದ್ದರು.

ಅದೇ ವೇಳೆ ಅವರನ್ನು ಕೂಡಂಕುಳಂ ಸ್ಥಳಕ್ಕೆ ಭೇಟಿ ನೀಡದಂತೆ ತಡೆಯಲಾಗಿತ್ತು ಮತ್ತು ಕಿರುಕುಳ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದರ ನಂತರ ಅವರು ‘ಡಾಕ್ಯುಮೆಂಟಿಂಗ್ ಡಿಸೆಂಟ್: ಡೇವಿಡ್ ಬ್ರಾಡ್‌ಬರಿಸ್ ಅಕೌಂಟ್ ಆಫ್ ಹರಾಸ್‌ಮೆಂಟ್ ಇನ್ ಕೂಡಂಕುಳಂ’ ಎಂಬ ಶೀರ್ಷಿಕೆಯ ಲೇಖನವನ್ನು ಬರೆದಿದ್ದರು. ಕೂಡಂಕುಳಂನಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಧಾರವನ್ನು ಅವರು, “ತಮ್ಮ ಸ್ವಂತ ಜನರು ಮತ್ತು ಜಗತ್ತಿನ ಬಗ್ಗೆ ಬೇಜವಾಬ್ದಾರಿಯ ನಡೆ” ಎಂದು ಹೇಳಿದ್ದರು.ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ

ತಮ್ಮ ಬಂಧನ ಮತ್ತು ಗಡೀಪಾರು ಕೂಡಂಕುಳಂ ಪರಮಾಣು ಸ್ಥಾವರದ ತಮ್ಮ ಚಲನಚಿತ್ರದ ಕಾರಣಕ್ಕೆ ನಡೆದಿದೆ ಎಂದು ಬ್ರಾಡ್ಬರಿ ಅವರು ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...