Homeಕರ್ನಾಟಕ'ಬಿಜೆಪಿ ರಕ್ತದಲ್ಲಿ ಕೋಮುವಾದ ಸೇರಿಕೊಂಡಿರುವ ಹಾಗೆ ಅಂತರ್‌ಕಲಹವೂ ಇದೆ..'; ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

‘ಬಿಜೆಪಿ ರಕ್ತದಲ್ಲಿ ಕೋಮುವಾದ ಸೇರಿಕೊಂಡಿರುವ ಹಾಗೆ ಅಂತರ್‌ಕಲಹವೂ ಇದೆ..’; ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದ ಸೋನಿಪತ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಉಲ್ಲೇಖಿಸಿದ್ದ ನರೇಂದ್ರ ಮೋದಿ, “ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ಅಧಿಕಾರಕ್ಕೆ ಬಂದರೂ, ಅವರು ಬಹಳಷ್ಟು ಭ್ರಷ್ಟಾಚಾರವನ್ನು ಮಾಡಿದರು. ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಮತ್ತು ಪೋಷಿಸಿದ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಭ್ರಷ್ಟಾಚಾರದ ತಾಯಿ” ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, “ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಈ ಗೊಂದಲ ನಿವಾರಣೆಗಾಗಿ ಅವರು ತಕ್ಷಣ ಸ್ಪಷ್ಟೀಕರಣ ನೀಡಬೇಕೆಂದು ಮನವಿ ಮಾಡುತ್ತೇನೆ” ಎಂದು ಅವರು ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ, ಪ್ರತ್ಯಾರೋಪ, ಪರಸ್ಪರ ದೂಷಣೆ, ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ನರೇಂದ್ರ ಮೋದಿ ಅವರೇ, ದಯವಿಟ್ಟು ತಾವು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ಕರ್ನಾಟಕ ಬಿಜೆಪಿಯೊಳಗೆ ನಡೆಯುವ ಅಂತರ್‌ಕಲಹದ ಒಂದು ಅಂದಾಜು ಸಿಗಬಹುದು. ಇದರ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು” ಎಂದು ಅವರು ಲೇವಡಿ ಮಾಡಿದ್ದಾರೆ.

“ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಳಿಗ್ಗೆ ಎದ್ದ ಕೂಡಲೇ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಆರೋಪಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಸಿ.ಟಿ.ರವಿ ಮೊದಲಾದವರು ದನಿಗೂಡಿಸಿ ಅಪ್ಪ-ಮಕ್ಕಳ ವಿರುದ್ದ ಬಗೆಬಗೆಯ ಆರೋಪಗಳನ್ನು ಮಾಡಿದ್ದಾರೆ. ಇದೀಗ ಉಚ್ಚಾಟಿತ ಬಿಜೆಪಿ ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕೂತು ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಇದನ್ನು ಅಂತರ್‌ಕಲಹ ಎಂದು ಕರೆಯದೆ ಪ್ರೇಮಸಲ್ಲಾಪ ಎನ್ನೋಣವೇ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ..
ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರ್‌ಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು” ಎಂದು ಅವರು ನೆನಪಿಸಿದ್ದಾರೆ.

“2011ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತರ್‌ಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ, ಅಡ್ವಾಣಿಯವರನ್ನು ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ. ಕೊನೆಗೆ ಅವರನ್ನೇ ಕರೆತಂದು ಮುಖ್ಯಮಂತ್ರಿ ಮಾಡಿದ್ದಾಯಿತು, ನಂತರ ಅವರನ್ನು ಪದಚ್ಯುತಿಗೊಳಿಸಿಯೂ ಆಯಿತು. ಇವೆಲ್ಲದರ ಹಿಂದೆ ಪಕ್ಷದ ಅಂತರ್‌ಕಲಹ ಕಾರಣ ಅಲ್ಲವೇ” ಎಂದು ಅವರು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿಯನ್ನು ಮುಗಿಸಿದ್ದೇವೆ. ದೇವರಾಜ ಅರಸು ನಂತರ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ನಾನು ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮೊಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ” ಎಂದು ಅವರು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ; ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...