Homeಮುಖಪುಟಲೈಂಗಿಕ ದೌರ್ಜನ್ಯ; ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಸಮಾವೇಶದಲ್ಲಿ ಕೃತ್ಯದ ಬಗ್ಗೆ ಹೇಳಿಕೊಂಡ ಅಪ್ರಾಪ್ತ ಬಾಲಕಿ

ಲೈಂಗಿಕ ದೌರ್ಜನ್ಯ; ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಸಮಾವೇಶದಲ್ಲಿ ಕೃತ್ಯದ ಬಗ್ಗೆ ಹೇಳಿಕೊಂಡ ಅಪ್ರಾಪ್ತ ಬಾಲಕಿ

- Advertisement -
- Advertisement -

ಪುಣೆಯ ಕಾಲೇಜೊಂದರಲ್ಲಿ ಓದುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ರಿಂದ 22 ವರ್ಷ ವಯಸ್ಸಿನ ಇಬ್ಬರು ಯುವಕರು ಹಾಗೂ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಆರೋಪಿಗಳು ಬಾಲಕಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾಗಿದ್ದರು. ಆದರೆ, ಅವರಿಗೆ ವೈಯಕ್ತಿಕವಾಗಿ ಪರಿಚಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ ನಗರದ ವಿವಿಧ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಹದಿಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಗುರುವಾರ ತಿಳಿಸಿದ್ದಾರೆ.

ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತ ಅಧಿವೇಶನದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಚರ್ಚೆಯ ಸಮಯದಲ್ಲಿ, ವಿದ್ಯಾರ್ಥಿನಿಯೊಬ್ಬಳು ಖಿನ್ನತೆಗೆ ಒಳಗಾಗಿದ್ದಳು, ಅವಳನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗ, ಆಕೆ ತಾಣು ಅನುಭವಿಸುತ್ತಿರುವ ದೌರ್ಜನ್ಯದ ಬಗ್ಗೆ ಆಪ್ತ ಸಮಾಲೋಚಕರಿಗೆ ತಿಳಿಸಿದ್ದಾಳೆ.

“ಸಂತ್ರಸ್ತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಬ್ಬರಿಗೊಬ್ಬರು ಪರಿಚಯವಿಲ್ಲದ ನಾಲ್ವರು ವ್ಯಕ್ತಿಗಳನ್ನು ಭೇಟಿಯಾಗಿದ್ದರು. ಆರೋಪಿಗಳು ಪ್ರತ್ಯೇಕ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾರೆಂದು ತನಿಖೆಯಿಂದ ತಿಳಿದುಬಂದಿದೆ” ಎಂದು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೀಡಿಯೊಗಳನ್ನು ಸಹ ಮಾಡಲಾಗಿದೆ. ಆದ್ದರಿಂದ, ಪ್ರಕರಣದಲ್ಲಿ ಐಟಿ ಕಾಯ್ದೆಯನ್ನು ಅನ್ವಯಿಸಲಾಗಿದೆ ಎಂದು ಅವರು ಹೇಳಿದರು.

“ನಾವು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅವರಲ್ಲಿ ಇಬ್ಬರು ಅಪ್ರಾಪ್ತರು ಅವರನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು (20 ರಿಂದ 22 ವರ್ಷ ವಯಸ್ಸಿನವರು) ಬಂಧಿಸಿ, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದರು.

ಆರೋಪಿಗಳ ವಿರುದ್ಧ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಅತ್ಯಾಚಾರದ ಸೆಕ್ಷನ್ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ; ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ)...

‘ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ’: ಎಸ್ಐಆರ್ ವಿರೋಧಿಸಿ ಅ. 28ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನೆಗೆ ಪ್ರಕಾಶ್ ಅಂಬೇಡ್ಕರ್ ಕರೆ

ಮುಂಬೈ: ಮತದಾನದ ಹಕ್ಕು ಕೇವಲ ರಾಜಕೀಯ ಪ್ರಕ್ರಿಯೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಈ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ,...

ಹೋರಾಟಗಾರನ ಕೊಲೆ, ಅಮಿತ್ ಶಾ ಭೇಟಿ : ಪಂಜಾಬ್‌ನಲ್ಲಿ ಎಎಪಿಗೆ ಮುಳುವಾಗುತ್ತಾ ಡ್ರಗ್ ವಿರೋಧಿ ಜನಾಕ್ರೋಶ?

ಕಳೆದ ವಾರ ಪಂಜಾಬ್‌ನ ಮಾನಸಾ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್ ಮಾಲೀಕನೊಬ್ಬ 42 ವರ್ಷದ ಮಾದಕವಸ್ತು ವಿರೋಧಿ ಕಾರ್ಯಕರ್ತ (Anti-Drugs Activist's) ಪರ್ವಿಂದರ್ ಸಿಂಗ್ ಝೋಟಾ ಅವರನ್ನು ಹತ್ಯೆ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ....

ಜಂತರ್ ಮಂತರ್ ಅತಿಕ್ರಮಣ ಆರೋಪ: ಸಿಜೆಪಿಯ ಅಶುತೋಷ್, ಸೌರವ್ ಬಂಧನ ಮುಂದುವರಿಕೆ, ಅಪರಾಧ ವಿಭಾಗಕ್ಕೆ ತನಿಖೆ ವರ್ಗಾವಣೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಹ-ಸಂಚಾಲಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ವಿರುದ್ಧ ದಾಖಲಾದ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು...

‘ವೋಟ್ ಚೋರಿ ಸರ್ಕಾರ’ದಿಂದ ಗ್ರಾಮೀಣ ಕಾರ್ಮಿಕರ ಕೂಲಿ ಕಳ್ಳತನವೂ ಪರಿಪೂರ್ಣ: ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಬದಲಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ಗ್ರಾಮೀಣ ಭಾರತದ ಬಡವರು ಮತ್ತು...

ದೆಹಲಿ ಪೊಲೀಸರಿಂದ ಎನ್‌ಎಸ್‌ಯುಐ ನಾಯಕರ ಮೇಲೆ ಹಲ್ಲೆ : ಜೈಪುರ ಕಮಿಷನರ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ

ರಾಜಸ್ಥಾನ ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ರಾಜ್ಯ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಸೇರಿದಂತೆ ಹಲವಾರು ಶಾಸಕರು ಜೈಪುರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಸೋಮವಾರ (ಅಕ್ಟೋಬರ್ 19) ರಾತ್ರಿಯಿಡೀ ಧರಣಿ ಸತ್ಯಾಗ್ರಹ...

ಸೋಶಿಯಲ್ ಮೀಡಿಯಾ ಅಕೌಂಟ್ ಬ್ಲಾಕ್: ಬಳಕೆದಾರರಿಗೆ ಸರ್ಕಾರದ ನೋಟಿಸ್‌ ಪ್ರತಿ ನೀಡುವುದು ಕಡ್ಡಾಯ ಎಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌

ಸಾಮಾಜಿಕ ಜಾಲತಾಣಗಳಲ್ಲಿನ ಖಾತೆ ಅಥವಾ ವಿಷಯಗಳನ್ನು (Content) ತಡೆಹಿಡಿಯಲು ಸರ್ಕಾರವು ಮಧ್ಯವರ್ತಿ ಸಂಸ್ಥೆಗಳಿಗೆ (ಫೇಸ್‌ಬುಕ್, ಟ್ವಿಟರ್ ಇತ್ಯಾದಿ) ಸೂಚನೆ ಅಥವಾ ಆದೇಶ ರವಾನಿಸಿದ ತಕ್ಷಣ, ಆ ಆದೇಶ ಅಥವಾ ನೋಟಿಸ್‌ನ ಪ್ರತಿಯನ್ನು ಸಂಬಂಧಪಟ್ಟ...

ಉತ್ತರ ಪ್ರದೇಶ| ದೇವಾಲಯದಲ್ಲಿ ಪೂಜೆ ಸಲ್ಲಿಸಿದ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಧಾರ್ಮಿಕ ಸ್ಥಳದಲ್ಲಿ ವಾಸಿಸುತ್ತಿರುವುದಕ್ಕೆ ಮತ್ತು ಅವರು ಪೂಜೆ ಸಲ್ಲಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರು ವ್ಯಕ್ತಿಗಳು, ಅವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ಸಾಲದ್ದಕ್ಕೆ ಅವರನ್ನು ದೇವಾಲಯದೊಳಗೆ...

ಸುಪ್ರೀಂ ಕೋರ್ಟ್‌ ತೀರ್ಪನ್ನು ‘ನ್ಯಾಯ ನಿರಾಕರಣೆ’ ಎಂದು ಟೀಕಿಸುವುದು ಅಪರಾಧವಲ್ಲ : ಕರ್ನಾಟಕ ಹೈಕೋರ್ಟ್

ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿನ ವ್ಯಾಪ್ತಿಯನ್ನು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪೊಂದನ್ನು ಟೀಕಿಸುವ ಘೋಷವಾಕ್ಯಗಳನ್ನು ಸಾರ್ವಜನಿಕ ಗೋಡೆಯ ಮೇಲೆ ಬರೆದಿದ್ದಾರೆ ಎಂಬ ಆರೋಪದ ಮೇರೆಗೆ 13 ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್...

‘ಭಾರತದಲ್ಲಿ ಆಡಳಿತ ಬದಲಾವಣೆ ಆಗುವುದಿಲ್ಲ’: ಪ್ರತಿಭಟನೆ, ಹೋರಾಟಗಳಿಗೆ ಪಶ್ಚಿಮ ದೇಶಗಳ ಪ್ರಭಾವ ಕಾರಣ ಎಂದ ಮೋಹನ್ ಭಾಗವತ್

ನಾಗ್ಪುರ: ಭಾರತದಲ್ಲಿ ಆಡಳಿತ ಬದಲಾವಣೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವ ವಾದವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರೋಧಿಸಿದ್ದಾರೆ. ಆಡಳಿತ ಬದಲಾವಣೆಗೆ ಕರೆ ನೀಡುವ ಚಳವಳಿಗಳು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಬದಲಿಗೆ,...